ಶ್ರೀಕಾಂತ ಪೂಜಾರಿ ಬಂಧನಕ್ಕೆ ವಿರೋಧ: 'X' ಡಿಪಿ ಚೇಂಜ್ ಮಾಡಿದ ಬಿಜೆಪಿ ರಾಜ್ಯಾಧ್ಯಾಕ್ಷ ವಿಜಯೇಂದ್ರ
ಬೆಂಗಳೂರು ಜನವರಿ 4: 'ನಾನು ರಾಮಭಕ್ತ ನನ್ನನ್ನೂ ಬಂಧಿಸಿ ಸಿದ್ದರಾಮಯ್ಯನವರೇ' ಎಂದು ಬಿಜೆಪಿ ರಾಜ್ಯಾದ್ಯಾಕ್ಷ ವಿಜಯೇಂದ್ರ ಯಡಿಯೂರಪ್ಪ ಡಿಪಿ ಚೇಂಜ್ ಮಾಡಿದ್ದಾರೆ.
ಶ್ರೀಕಾಂತ ಪೂಜಾರಿ ಬಂಧನವನ್ನು ಖಂಡಿಸಿ ಬಿಜೆಪಿ ರಾಜ್ಯದೆಲ್ಲೆಡೆ ಪ್ರತಿಭಟನೆಗೆ ಮುಂದಾಗಿದೆ. ಶ್ರೀಕಾಂತ ಪೂಜಾರಿ ಬಂಧನವನ್ನು ಪ್ರಶ್ನಿಸಿ ಇಂದು ಸಿಟಿ ರವಿ ಸುನೀಲ್ ಕುಮಾರ್ ಹಾಗೂ ಸಿಟಿ ರವಿ ಪ್ರತಿಭಟಿಸಿದರು. ಇದೇ ವೇಳೆ ಚಿಕ್ಕಮಗಳೂರಿನಲ್ಲಿ ಸಿಟಿ ರವಿ ಅವರನ್ನು ಪೊಲೀಸರು ವಶಕ್ಕೆ ಪಡೆದರು.

1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ರಾಮ ಜನ್ಮ ಭೂಮಿ ಹೋರಾಟದ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ವಿರೋಧಿಸಿ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ. ಶ್ರೀಕಾಂತ್ ಅಕ್ರಮ ಸಾರಾಯಿ ಮಾರಾಟ, ದೊಂಬಿ, ಮಟಕಾ, ಜೂಜಾಟ ಮುಂತಾದ 16 ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿದ್ದಾರೆ.
ಆದರೆ 'ಶ್ರೀರಾಮನ ಭಕ್ತರನ್ನು ಬಂಧಿಸಲಾಗುತ್ತಿದೆ. ರಾಮನ ಭಕ್ತರನ್ನು ಟಾರ್ಗೇಟ್ ಮಾಡಲಾಗುತ್ತಿದೆ. ನಮ್ಮನ್ನೂ ಬಂಧಿಸಿ' ಎಂದು ಬಿಜೆಪಿ ನಾಯಕರು ಬೀದಿಗಿಳಿದು ಕಳೆದ ಎರಡು ದಿನಗಳಿಂದ ಪ್ರತಿಭಟನೆಗೆ ಮುಂದಾಗಿದ್ದಾರೆ. ಶ್ರೀಕಾಂತ ಪೂಜಾರಿ ಶ್ರೀರಾಮನ ಭಕ್ತ ಆತನನನ್ನು ಬಂಧಿಸಿದ್ದೀರಿ ಅಂದರೆ ನಾವೂ ಕೂಡ ರಾಮನ ಭಕ್ತರೇ ನಮ್ಮನ್ನೂ ಬಂಧಿಸಿ ಎಂದು ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ.

ಈ ನಡುವೆ ರಾಜ್ಯಾದ್ಯಾಕ್ಷ ವಿಜಯೇಂದ್ರ ಯಡಿಯೂರಪ್ಪ ತಮ್ಮ xನಲ್ಲಿ ಡಿಪಿ ಚೇಂಜ್ ಮಾಡಿದ್ದಾರೆ. ಅದರಲ್ಲಿ 'ನಾನು ರಾಮಭಕ್ತ ನನ್ನನ್ನೂ ಬಂಧಿಸಿ ಸಿದ್ದರಾಮಯ್ಯನವರೇ' ಎಂದು ಅವರು ಬರೆದಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.
16 ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ವ್ಯಕ್ತಿಯ ಪರವಾಗಿ ಪ್ರತಿಭಟನೆ ನಡೆಸುತ್ತಿರುವ ರಾಜ್ಯ ಬಿಜೆಪಿ ನಾಯಕರು ಈತನ ಎಲ್ಲಾ ಅಪರಾಧ ಕೃತ್ಯಗಳಿಗೆ ತಮ್ಮ ಪಕ್ಷದ ಬೆಂಬಲವಿದೆ ಎಂಬುದನ್ನು ಬಹಿರಂಗವಾಗಿ ಹೇಳಲಿ ಅಥವಾ ಪ್ರತಿಭಟನೆ ಕೈಬಿಟ್ಟು ಸಾರ್ವಜನಿಕವಾಗಿ ಕ್ಷಮೆ ಕೋರಲಿ ಎಂದು ಒತ್ತಾಯಿಸಿದ್ದಾರೆ.
ರಾಮಭಕ್ತ, ಕರಸೇವಕ ಎಂದು ಸಮಾಜದೆದುರು ನಕಲಿ ವೇಷ ತೊಟ್ಟು ಮೆರೆಯುವ ಶ್ರೀಕಾಂತ ಪೂಜಾರಿ ಕಾನೂನಿನ ದೃಷ್ಟಿಯಲ್ಲಿ ಒಬ್ಬ ಸಮಾಜಘಾತುಕ ವ್ಯಕ್ತಿ. ತನ್ನ ಅಪರಾಧ ಕೃತ್ಯಗಳಿಂದ ರಕ್ಷಣೆ ಸಿಗಲಿ ಎಂಬ ಕಾರಣಕ್ಕೆ ಧರ್ಮರಕ್ಷಣೆ ನಾಟಕವಾಡುವ ಇಂಥವರನ್ನು ಬಂಧಿಸದೆ, ರಾಜಾರೋಷವಾಗಿ ತಿರುಗಾಡಲು ಬಿಟ್ಟರೆ ಶ್ರೀರಾಮಚಂದ್ರನೂ ಕ್ಷಮಿಸಲಾರ.
— Siddaramaiah (@siddaramaiah) January 3, 2024
ಅಕ್ರಮ ಸಾರಾಯಿ ಮಾರಾಟ,… pic.twitter.com/8U8PlQcdrL
ಕಳೆದ 2023ನೇ ಸಾಲಿನಲ್ಲಿ ಹುಬ್ಬಳ್ಳಿ - ಧಾರವಾಡ ಕಮಿಷನರೇಟ್ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ, ಕಳ್ಳತನ, ಸುಲಿಗೆ, ವಂಚನೆ, ದೊಂಬಿ ಮುಂತಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಎಲ್.ಪಿ.ಸಿ ( ಕಾನೂನು ವಿಚಾರಣಾ ಪ್ರಮಾಣಪತ್ರ ) ಪ್ರಕರಣಗಳಲ್ಲಿ ಒಟ್ಟು 36 ಜನರನ್ನು ದಸ್ತಗಿರಿ ಮಾಡಲಾಗಿದೆ. ಇದರಲ್ಲಿ ಶ್ರೀಕಾಂತ ಪೂಜಾರಿ 32ನೆಯ ವ್ಯಕ್ತಿ. ಈತನನ್ನು ಕರಸೇವಕನೆಂಬ ಕಾರಣಕ್ಕೆ ಹೊರಗಡೆ ಬಿಡಬೇಕೋ? ಅಥವಾ ಆರೋಪಿ ಎಂಬ ಕಾರಣಕ್ಕೆ ಬಂಧಿಸಬೇಕೋ? ಎಂದು ಕೇಳಿದ್ದಾರೆ.

ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವುದು ನಮ್ಮ ಸರ್ಕಾರದ ವಿರುದ್ಧವಲ್ಲ, ದೇಶದ ಕಾನೂನು ಮತ್ತು ಸಂವಿಧಾನದ ವಿರುದ್ಧ. ಅಪರಾಧ ಕೃತ್ಯಗಳಲ್ಲಿ ತೊಡಗುವವರು ಧರ್ಮರಕ್ಷಕರು ಎಂದು ಹೇಳಿಕೊಂಡು ಕೊಲೆ, ಸುಲಿಗೆಗಳಿಗೆ ಇಳಿದರೆ ಅದನ್ನೂ ಬಿಜೆಪಿ ನಾಯಕರು ಬೆಂಬಲಿಸುತ್ತಾರೆಯೇ? ಎಂದು ಪ್ರಶ್ನಿಸಿದ್ದಾರೆ.












Click it and Unblock the Notifications