Medara Nigama: ಮೇದರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ಸರ್ಕಾರದಿಂದ ಆದೇಶ: 8 ಸಮುದಾಯಗಳಿಗೆ ಅನುಕೂಲ
ರಾಜ್ಯದ ಅತ್ಯಂತ ಹಿಂದುಳಿದ ಸಮುದಾಯವಾಗಿರುವ ಮೇದರ, ಬಟ್ಟರ್, ಗೌರಿ, ಗೌರಿ ಮರಾಠ, ಗೌರಿಗ, ಮೇದರಿ, ಬುರುಡ್ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ಮೇದರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾಗಿ ಮುಖ್ಯಮಂತ್ರಿಯವರ ಕಚೇರಿ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ಶ್ರೀ ನಾರಾಯಣ ಗುರು ನಿಮಗ, ಗಾಣೀಗ ಅಭಿವೃದ್ಧಿ ನಿಗಮ ಮತ್ತು ಹಡಪದ ಅಭಿವೃದ್ಧಿ ನಿಮಗ ಸ್ಥಾಪನೆ ಬೆನ್ನಲ್ಲೇ ಮೇದರ ಅಭಿವೃದ್ಧೊ ನಿಮಗ ಸ್ತಾಪನೆಯನ್ನು ಘೋಷಿಸಲಾಗಿದೆ.
ಮದೇರ ಸಮುದಾಯ ಸರ್ವತೋಮುಖ ಅಭಿವೃದ್ಧಿಗಾಗಿ ಒಂದು ಹೊಸ ನಗಮವನ್ನು ಸ್ಥಾಪಿಸಲು ಆಸೇಶಿಲಾಗಿದೆ. ಆದೇಶದಲ್ಲಿನ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ 1ರ ಕ್ರಮ ಸಂಖ್ಯೆ: 36(ಎ)ಯಿಂದ (ಜೆ) ವರೆಗೆ ಬರುವ ಮೇದರ, ಬಟ್ಟರ್, ಬರ್ನೆಡ್, ಗೌರಿಗ, ಗೌರಿ, ಗೌರಿ ಮರಾಠ, ಮೇದರಿ, ಬುರುಡ್ ಜಾತಿಗಳಿಗೆ ಶೈಕ್ಷಣಿಕ ಮತ್ತು ಔದ್ಯೋಗಿಕ ಮೀಸಲಾತಿಯನ್ನು ಕಲ್ಪಿಸಲಾಗಿರುತ್ತದೆ. ಗಾಣಿಗ ಅಭಿವೃದ್ಧಿ ನಿಮಗ ಹಾಗೂ ಶ್ರೀನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ ನಿನ್ನೆ (ಫೆಬ್ರವರಿ 20) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಗಾಣಿಗ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಒಂದು ಹೊಸ ನಿಗಮವನ್ನು ಸ್ಥಾಪಿಸಲು ಹಾಗೂ ಈಡಿಗ ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರೀನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪಿಸಿ ಸರ್ಕಾರದಿಂದಿ ಆದೇಶ ಹೊರಡಿಸಲಾಗಿದೆ. ಕರ್ನಾಟಕ ರಾಜ್ಯಪಾಲ ಆದೇಶಾನುಸರಾವಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ-1 ಆಹೀನ್ ಪರ್ವೀನ್ ಕೆ. ಅವರು ಆದೇಶ ಹೊರಡಿಸಿದ್ದಾರೆ.

ಗಾಣಿಗ, ಹಡಪದ ಮತ್ತು ಮೇದರ ಸಮುದಾಯಗಳ ಅಭಿವೃದ್ಧಿ ನಿಗಮ ಸ್ಥಾಪನೆ ವಿಚಾರವಾಗಿ ಟ್ವೀಟ್ ಮಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬೊಮ್ಮಾಯಿ ಸರ್ಕಾರವನ್ನು ಅಭಿನಂದಿಸಿದರು. ''ಗಾಣಿಗ, ಹಡಪದ ಮತ್ತು ಮೇದರ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರಕಾರವು ಅಭಿವೃದ್ಧಿ ನಿಗಮ ಸ್ಥಾಪನೆಗೆ ಆದೇಶಿಸಿರುವುದು ಸ್ವಾಗತಾರ್ಹ ನಿರ್ಧಾರವಾಗಿದೆ'' ಎಂದು ಬರೆದಿದ್ದಾರೆ.












Click it and Unblock the Notifications