ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆರ್ಕಿಡ್ಸ್ ಶಾಲೆ ಮಕ್ಕಳ ವರ್ಗಾವಣೆಗೆ ಡಿಡಿಪಿಐ ಸೂಚನೆ

By Kiran B Hegde
|
Google Oneindia Kannada News

ಬೆಂಗಳೂರು, ನ. 18: ನಗರದ ಜಾಲಹಳ್ಳಿ ಬಳಿ ಇರುವ ಆರ್ಕಿಡ್ಸ್ ಇಂಟರ್‌ನ್ಯಾಶನಲ್ ಶಾಲೆಯಿಂದ ಪ್ರಿ ನರ್ಸರಿ, 6 ಹಾಗೂ 7ನೇ ತರಗತಿಗಳನ್ನು ಬುಧವಾರದಿಂದಲೇ ಬೇರೆ ಶಾಲೆಗೆ ವರ್ಗಾಯಿಸಬೇಕೆಂದು ಶಿಕ್ಷಣ ಇಲಾಖೆ ಸ್ಪಷ್ಟವಾಗಿ ಸೂಚಿಸಿದೆ.

ಆರ್ಕಿಡ್ಸ್ ಇಂಟರ್‌ನ್ಯಾಶನಲ್ ಶಾಲೆಯಲ್ಲಿ ಕೇವಲ ಕಿರಿಯ ಪ್ರಾಥಮಿಕ ತರಗತಿಗಳನ್ನು ಮಾತ್ರ ನಡೆಸಲು ಅನುಮತಿ ಪಡೆಯಲಾಗಿದೆ. ಆದರೂ, ಕಾನೂನು ಉಲ್ಲಂಘಿಸಿ ಪ್ರಿ ನರ್ಸರಿ ಹಾಗೂ ಹಿರಿಯ ಪ್ರಾಥಮಿಕ ತರಗತಿಗಳಾದ 6 ಮತ್ತು 7ನೇ ತರಗತಿಗಳನ್ನೂ ನಡೆಸಲಾಗುತ್ತಿದೆ. [ಅತ್ಯಾಚಾರ ಆರೋಪಿ ಎಲ್ಲಿ?]

school

ಈ ಕುರಿತು ಶಾಲೆಯ ಆಡಳಿತ ಮಂಡಳಿಗೆ ಅಕ್ಟೋಬರ್ ತಿಂಗಳಲ್ಲಿ ಶಿಕ್ಷಣ ಇಲಾಖೆ ನೋಟಿಸ್ ನೀಡಿತ್ತು. ಏಳು ದಿನಗಳಲ್ಲಿ ಶಾಲೆಯಲ್ಲಿರುವ ಮಾನ್ಯತೆ ಇಲ್ಲದ ತರಗತಿಗಳ ವಿದ್ಯಾರ್ಥಿಗಳನ್ನು ಹತ್ತಿರದ ಬೇರೆ ಅಧಿಕೃತ ಶಾಲೆಗೆ ವರ್ಗಾಯಿಸಬೇಕೆಂದು ಸೂಚಿಸಿತ್ತು. ಆದರೆ, ಇನ್ನಷ್ಟು ಕಾಲಾವಕಾಶ ಬೇಕೆಂದು ಆರ್ಕಿಡ್ಸ್ ಶಾಲೆಯ ಆಡಳಿತ ಮಂಡಳಿ ಕೋರಿತ್ತು. [ಎಂಎನ್ ರೆಡ್ಡಿ ಹೇಳಿದ್ದೇನು?]

ಆದರೆ, ಇನ್ನೂ ಅನಧಿಕೃತ ತರಗತಿಗಳ ಮಕ್ಕಳನ್ನು ಬೇರೆ ಶಾಲೆಗೆ ವರ್ಗಾಯಿಸುವ ಕುರಿತು ಶಾಲೆಯ ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಬುಧವಾರದಿಂದಲೇ ಮಕ್ಕಳನ್ನು ಬೇರೆ ಶಾಲೆಗೆ ವರ್ಗಾಯಿಸಬೇಕೆಂದು ಬೆಂಗಳೂರು ಉತ್ತರ ವಲಯ ಡಿಡಿಪಿಐ ಮಂಜುನಾಥ ಸ್ಪಷ್ಟ ಸೂಚನೆ ನೀಡಿದ್ದಾರೆ. [ಪೋಷಕರ ಪ್ರತಿಭಟನೆ]

ಅತ್ಯಾಚಾರದಿಂದ ಕಾನೂನು ಉಲ್ಲಂಘನೆ ಬೆಳಕಿಗೆ
ಆರ್ಕಿಡ್ಸ್ ಇಂಟರ್‌ನ್ಯಾಶನಲ್ ಶಾಲೆಯಲ್ಲಿ ಕಳೆದ ತಿಂಗಳು ಬಾಲಕಿಯೋರ್ವಳ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಅನಧಿಕೃತವಾಗಿ ತರಗತಿ ನಡೆಸುತ್ತಿರುವುದೂ ಬೆಳಕಿಗೆ ಬಂದಿತ್ತು.

ಆಗ ಶಾಲೆಯ ಅಕ್ರಮದಲ್ಲಿ ಡಿಡಿಪಿಐ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕೂಡ ಭಾಗಿಯಾಗಿದ್ದಾರೆಂದು ಆರೋಪಿಸಿ ಆರ್‌ಟಿಇ ಸ್ಟೂಡೆಂಟ್ಸ್‌ ಆ್ಯಂಡ್‌ ಪೇರೆಂಟ್ಸ್‌ ಅಸೋಸಿಯೇಷನ್‌ ಅಧ್ಯಕ್ಷ ಮುಳ್ಳಹಳ್ಳಿ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಲ್ಲದೆ, ಶಾಲೆಯ ಆಡಳಿತ ಮಂಡಳಿ ವಿರುದ್ಧವೂ ಪ್ರಕರಣ ದಾಖಲಾಗಿತ್ತು. [ಅತ್ಯಾಚಾರ ಆರೋಪಿ ಪೊಲೀಸ್ ವಶಕ್ಕೆ]

ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಶಿಕ್ಷಣ ಇಲಾಖೆ ತಕ್ಷಣ ಆರ್ಕಿಡ್ಸ್ ಇಂಟರ್‌ನ್ಯಾಶನಲ್ ಶಾಲೆಗೆ ನೋಟಿಸ್ ಜಾರಿ ಮಾಡಿ, ಏಳು ದಿನಗಳ ಒಳಗೆ ಶಾಲೆಯ ಮಕ್ಕಳನ್ನು ಬೇರೆ ಶಾಲೆಗೆ ವರ್ಗಾಯಿಸಲು ಆದೇಶ ನೀಡಿತ್ತು.

English summary
DDPI of Bengaluru north zone has given order to Orchids international school to transfer students of unauthorized classes immediately. He told students must be transferred to nearest authorized schools on Tuesday only.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X