ಮಲ್ಲೇಶ್ವರಂನಲ್ಲಿ ಸಾವಯವ ಮತ್ತು ಸಿರಿಧಾನ್ಯ ಮೇಳ
ಸಾವಯವ ಉತ್ಪನ್ನಗಳ ಹಾಗೂ ಸಣ್ಣ ಸಿರಿಧಾನ್ಯಗಳ ಬಗ್ಗೆ ಗ್ರಾಹಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮಾರ್ಚ್ 25 ಮತ್ತು 26 ರಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಸಾವಯವ ಮತ್ತು ಸಿರಿಧಾನ್ಯ ಮೇಳ ಆಯೋಜಿಸಲಾಗಿದೆ.
ಬೆಂಗಳೂರು, ಮಾರ್ಚ್ 22: ಬಿಬಿಎಂಪಿ ನಗರ ವ್ಯಾಪ್ತಿಯಲ್ಲಿ ಸಾವಯವ ಉತ್ಪನ್ನಗಳ ಹಾಗೂ ಸಣ್ಣ ಸಿರಿಧಾನ್ಯಗಳ ಬಗ್ಗೆ ಗ್ರಾಹಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮಾರ್ಚ್ 25 ಮತ್ತು 26 (ಶನಿವಾರ ಮತ್ತು ಭಾನುವಾರ) ರಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಸಾವಯವ ಮತ್ತು ಸಿರಿಧಾನ್ಯ ಮೇಳ ಆಯೋಜಿಸಲಾಗಿದೆ.
ಬೆಂಗಳೂರು ಜಿಲ್ಲಾ ಕೃಷಿ ಇಲಾಖೆಯು ಜೈವಿಕ್ ಕೃಷಿಕ್ ಸೋಸೈಟಿ ಸಹಯೋಗದೊಂದಿಗೆ ಆಯೋಜಿಸಿರುವ ಈ ಮೇಳ ಸರಕಾರಿ ಮಾದರಿ ಪ್ರಾಥಮಿಕ ಪಾಠಶಾಲೆಯ ಆಟದ ಮೈದಾನ (ಮಲ್ಲೇಶ್ವರಂ ಆಟದ ಮೈದಾನದ ಎದುರು) ದಲ್ಲಿ ನಡೆಯಲಿದೆ.

ತಾವು ಬೆಳೆದ ಗುಣಮಟ್ಟದ ಸಾವಯವ ಮತ್ತು ಸಿರಿಧಾನ್ಯ ಉತ್ಪನ್ನಗಳನ್ನು ರೈತರು ನೋಂದಾಯಿತ ಸಂಘಗಳ ಮೂಲಕ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಈ ಮೇಳ ಅನುವು ಮಾಡಿಕೊಡಲಿದೆ.
ಗ್ರಾಹಕರು ವಿವಿಧ ರೀತಿಯ ಸಾವಯವ ಮತ್ತು ಸಿರಿಧಾನ್ಯ ಪದಾರ್ಥಗಳನ್ನು ಒಂದೇ ಸ್ಥಳದಲ್ಲಿ ಖರೀದಿಸಬಹುದು. ಸಾವಯವ ಮತ್ತು ಸಿರಿಧಾನ್ಯ ಪದಾರ್ಥಗಳ ಗುಣಮಟ್ಟದ ಬಗ್ಗೆ ನೇರವಾಗಿ ಉತ್ಪಾದಕರು ಹಾಗೂ ಸರಬರಾಜುದಾರರೊಂದಿಗೆ ವಿಚಾರ ವಿನಿಮಯ ಮಾಡಿಕೊಳ್ಳಬಹುದು.
ಈ ಮೇಳದಲ್ಲಿ ಮಾಜಿ ಮುಖ್ಯಮಂತ್ರಿ ಶ್ರೀ ಡಿ.ವಿ ಸದಾನಂದಗೌಡ, ಕೃಷಿ ಸಚಿವ ಕೃಷ್ಣ ಭೈರೇಗೌಡ, ರಾಜ್ಯ ಸಾವಯವ ಕೃಷಿ ಉನ್ನತ ಮಟ್ಟದ ಸಮಿತಿ ಅಧ್ಯಕ್ಷ ಸೋಮಶೇಖರ್ ಜಿ., ಮಲ್ಲೇಶ್ವರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ. ಸಿ.ಎನ್ ಅಶ್ವತ್ಥ ನಾರಾಯಣ್ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ.
ಮೇಳದಲ್ಲಿ ಉದಲು ಪಿಜ್ಜಾ, ರಾಗಿ ಕೇಕ್, ಬರಗು ಸಮೋಸ, ಸಾಮೆ ಅಣಬೆ ಬಿರಿಯಾನಿ, ನವಣೆ ಕಟ್‍ಲೆಟ್, ನವಣೆ ಬ್ರೆಡ್, ಜೋಳದ ಜೀರಾ ಲಸ್ಸಿ, ನವಣೆ ಪೊಂಗಲ್, ಹಾರಕ ಬಿಸಿಬೇಳೆಬಾತ್, ಸಾಮೆ ಪಾಯಸ, ಸಜ್ಜೆ ರೊಟ್ಟಿ, ಸಾಮೆ ಚೌಚೌಬಾತ್ ಸೇರಿದಂತೆ ಹಲವು ಖಾದ್ಯಗಳನ್ನು ಸವಿಯಬಹುದಾಗಿದೆ.

ಸಿರಿಧಾನ್ಯಗಳ ಖಾದ್ಯ ತಯಾರಿಕಾ ಪ್ರಾತ್ಯಕ್ಷಿಕೆ, ಸಿರಿಧಾನ್ಯಗಳಿಂದ ತಯಾರಾದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ, ಹೈಡ್ರೋಪೋನಿಕ್ಸ್ ಮತ್ತು ಟೆರೇಸ್ ಗಾರ್ಡನಿಂಗ್ ಬಗ್ಗೆ ಪ್ರಾತ್ಯಕ್ಷಿಕೆ, ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ ಮೇಳದ ಪ್ರಮುಖ ಆಕರ್ಷಣೆಗಳಾಗಿರಲಿವೆ.
ಪ್ರವೇಶ ಉಚಿತವಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಪ್ರಯೋಜನ ಪಡೆಯಬಹುದು.
ನೋಂದಣಿ ಮತ್ತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಮೊ: 9448182516 - ಎಚ್ ಆರ್ ಗುರುದತ್, ಕಾರ್ಯನಿರ್ವಹಣಾಧಿಕಾರಿ ಜೈವಿಕ್ ಕೃಷಿ ಸೊಸೈಟಿ
ಮೊ: 8277929921 - ಮಂಜಪ್ಪ ಹೆಚ್, ಕೃಷಿ ಸಹಾಯಕ ನಿರ್ದೇಶಕರು
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications