ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಸ್‍ಎಸ್‍ಎಲ್ಸಿ ಫಲಿತಾಂಶ, ಶ್ರೀರಾಮುಲು, ಸೋಂಕಿತರ ಬಗ್ಗೆ ಸುಧಾಕರ್

|
Google Oneindia Kannada News

ಬೆಂಗಳೂರು, ಆಗಸ್ಟ್ 10: ಎಸ್‍ಎಸ್‍ಎಲ್ ಸಿ ಪರೀಕ್ಷೆ ಫಲಿತಾಂಶದಲ್ಲಿ ಚಿಕ್ಕಬಳ್ಳಾಪುರ ಮೊದಲ ಸ್ಥಾನಕ್ಕೆ ಬಂದಿದ್ದು, ಜಿಲ್ಲೆಯ ವಿದ್ಯಾರ್ಥಿಗಳು ಹೊಸ ದಾಖಲೆ ಬರೆದಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಶ್ಲಾಘಿಸಿದ್ದಾರೆ.

Recommended Video

ಪ್ರಪಂಚಕ್ಕೆ ಸಿಹಿಸುದ್ದಿ ಕೊಟ್ಟ ರಷ್ಯಾ | Oneindia Kannada

ತಮ್ಮ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಚಿಕ್ಕಬಳ್ಳಾಪುರ ಕಳೆದ ವರ್ಷ 20 ನೇ ಸ್ಥಾನದಲ್ಲಿತ್ತು. ಆಗ ನಾನಿನ್ನೂ ಶಾಸಕನಾಗಿ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡುತ್ತಿದ್ದೆ. ಇನ್ನು ಮುಂದೆ ಕನಿಷ್ಠ 10 ಸ್ಥಾನಗಳ ಒಳಗೆ ಬರಬೇಕು ಎಂದು ಹೇಳಿದ್ದೆ. ಆದರೆ ಈ ಬಾರಿ ಜಿಲ್ಲೆಯು ಮೊದಲ ಸ್ಥಾನ ಗಳಿಸಿದೆ. ಜಿಲ್ಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳು, ಪೋಷಕರು ಹಾಗೂ ಅಧಿಕಾರಿಗಳಿಗೆ ಶುಭ ಕೋರುತ್ತೇನೆ. ಅನುತ್ತೀರ್ಣರಾದವರು ಆತ್ಮವಿಶ್ವಾಸ ಕಳೆದುಕೊಳ್ಳುವುದು ಬೇಡ. ಅವರಿಗೆ ಮತ್ತೆ ಅವಕಾಶ ಇದೆ'' ಎಂದು ಹೇಳಿದರು.

ಬೆಂಗಳೂರಿಗೆ 665 ಆಂಬ್ಯುಲೆನ್ಸ್: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ಬೆಂಗಳೂರಿಗೆ 665 ಆಂಬ್ಯುಲೆನ್ಸ್: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

"ಜಿಲ್ಲೆಯಲ್ಲಿ ಕಲಿಕೆಯಲ್ಲಿ ಹಿಂದುಳಿದ 3,000 ವಿಶೇಷ ವಿದ್ಯಾರ್ಥಿಗಳನ್ನು ಗುರುತಿಸಲಾಗಿತ್ತು. ನಂತರ ಅವರಿಗೆ ವಿಷಯವಾರು 9 ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಿ ಅಭ್ಯಾಸ ಮಾಡಿಸಲಾಗಿತ್ತು. 'ಟೆನ್ ಟೈಮ್ಸ್ ಪ್ರಾಕ್ಟೀಸ್' ಕ್ರಮವನ್ನು ಜಾರಿ ಮಾಡಲಾಗಿತ್ತು'' ಎಂದು ವಿವರಿಸಿದರು.

ಒಂದು ಲೀಟರ್ ಖರೀದಿಯೂ ಇಲ್ಲ

ಒಂದು ಲೀಟರ್ ಖರೀದಿಯೂ ಇಲ್ಲ

ಸ್ಯಾನಿಟೈಜರ್ ಸಂಬಂಧ ಲೋಕಾಯುಕ್ತದಲ್ಲಿ ದೂರು ಸಲ್ಲಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವ ಡಾ.ಕೆ.ಸುಧಾಕರ್, "ವೈದ್ಯಕೀಯ ಶಿಕ್ಷಣ ಇಲಾಖೆಯು ಒಂದು ಲೀಟರ್ ಸ್ಯಾನಿಟೈಜರ್ ಕೂಡ ಖರೀದಿ ಮಾಡಿಲ್ಲ. ಇದು ರಾಜಕೀಯ ಪ್ರೇರಿತ ನಡೆಯಾಗಿದ್ದು, ದೂರು ಕೊಟ್ಟವರ ಬಗ್ಗೆ ಮರುಕ ಹುಟ್ಟಿದೆ. ಯಾವುದೇ ರೀತಿಯ ತನಿಖೆಗಳನ್ನು ನಾನು ಸ್ವಾಗತಿಸುತ್ತೇನೆ'' ಎಂದರು.

ಸಚಿವ ಶ್ರೀರಾಮುಲು ಜೊತೆ ಮಾತುಕತೆ

ಸಚಿವ ಶ್ರೀರಾಮುಲು ಜೊತೆ ಮಾತುಕತೆ

ಸಚಿವ ಡಾ.ಕೆ.ಸುಧಾಕರ್ ಅವರು ಬೌರಿಂಗ್ ಆಸ್ಪತ್ರೆಗೆ ತೆರಳಿ, ವೀಡಿಯೋ ಮೂಲಕ ಆರೋಗ್ಯ ಸಚಿವ ಶ್ರೀರಾಮುಲು ಅವರೊಂದಿಗೆ ಮಾತನಾಡಿದರು.

"ನಮ್ಮ ಆಸ್ಪತ್ರೆಗೆ ಬಂದು ದಾಖಲಾಗಿ ಇಡೀ ರಾಜ್ಯದ ಜನರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಿದ್ದೀರಿ. ನಿಮಗೆ ಮೊದಲು ಅಭಿನಂದನೆ ಹೇಳುತ್ತೇನೆ. ಎಲ್ಲ ವೈದ್ಯರೊಂದಿಗೆ ಮಾತನಾಡಿ, ನಿಮ್ಮ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದೇನೆ. ನಿಮಗೆ ಬಹಳ ಕಡಿಮೆ ಸೋಂಕು ಇದೆ. ನೀವು ಈ ಪರಿಸ್ಥಿತಿಯನ್ನು ಗೆದ್ದು ಬರಲಿದ್ದೀರಿ'' ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದರು.

 ದೇಶದ ಪ್ರಥಮ ಮೊಬೈಲ್ ಕೋವಿಡ್ ಪರೀಕ್ಷಾ ಲ್ಯಾಬ್ ಗೆ ಚಾಲನೆ ದೇಶದ ಪ್ರಥಮ ಮೊಬೈಲ್ ಕೋವಿಡ್ ಪರೀಕ್ಷಾ ಲ್ಯಾಬ್ ಗೆ ಚಾಲನೆ

ಸಚಿವರು ಹೇಳಿದ ಇತರೆ ಅಂಶಗಳು

ಸಚಿವರು ಹೇಳಿದ ಇತರೆ ಅಂಶಗಳು

*ವೈದ್ಯರು, ಜನಪ್ರತಿನಿಧಿಗಳು, ಅಧಿಕಾರಿಗಳು ಸೇರಿದಂತೆ ಕೊರೊನಾ ವಾರಿಯರ್ ಗಳಿಗೆ ಬಿಡುಗಡೆ ದಿನಗಳ ನಿಯಮದಲ್ಲಿ ಕೊಂಚ ವಿನಾಯಿತಿ ಇದೆ.

*ನೆರೆ ಬಂದಾಗ ಪರಿಶೀಲನೆ ನಡೆಸುವ ಬದಲು ಲೆಕ್ಕ ಹೇಳಿಕೊಂಡು ಕೂರಬೇಕೇ? ಹಾಗೆ ಲೆಕ್ಕ ಕೊಡಬೇಕೆಂದರೆ ಕೊಡೋಣ.

*ಕಾಂಗ್ರೆಸ್ ನವರಿಗೆ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಟ ಮಾಡಬೇಕಿದೆ. ನೈತಿಕತೆಯಿಂದ ಇರುವವರು ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದರೆ ಒಳ್ಳೆಯದಿತ್ತು.

ಡಾ ಸಿ.ಎನ್.ಮಂಜುನಾಥ್ ಜೊತೆ ಸಂವಾದ

ಡಾ ಸಿ.ಎನ್.ಮಂಜುನಾಥ್ ಜೊತೆ ಸಂವಾದ

*ಸಚಿವ ಡಾ.ಕೆ.ಸುಧಾಕರ್, ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರೊಂದಿಗೆ ವೀಡಿಯೋ ಕಾನ್ಫರೆನ್ಸ್ ನಡೆಸಿದರು. ಸಂಸ್ಥೆಯಲ್ಲಿ ನಡೆಸಲಾಗುತ್ತಿರುವ ಕೋವಿಡ್ ಪರೀಕ್ಷೆ, ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆ, ಮೂಲಸೌಕರ್ಯ ಮೊದಲಾದ ವಿಷಯಗಳ ಬಗ್ಗೆ ಸಚಿವರು ಮಾಹಿತಿ ಪಡೆದರು.

*ಸಚಿವ ಡಾ.ಕೆ.ಸುಧಾಕರ್, ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರೊಂದಿಗೆ ಕೋವಿಡ್19 ಕುರಿತ ಸಂವಾದದಲ್ಲಿ ಪಾಲ್ಗೊಂಡರು.

ಇನ್ಫೋಸಿಸ್ ನೆರವಿನ ಬ್ರಾಡ್ ವೇ ಆಸ್ಪತ್ರೆ ಶೀಘ್ರ ಕಾರ್ಯಾರಂಭಇನ್ಫೋಸಿಸ್ ನೆರವಿನ ಬ್ರಾಡ್ ವೇ ಆಸ್ಪತ್ರೆ ಶೀಘ್ರ ಕಾರ್ಯಾರಂಭ

English summary
Delighted Chikkaballapura district topped in SSLC results, says Dr Sudhakar. He meets Health Minister B.Sriramulu, speaks with Minister B.C.Patil.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X