ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಲ್ಲರಿಗೂ ಕೋವಿಡ್ ಲಸಿಕೆ ನಮ್ಮ ಉದ್ದೇಶ, ಬ್ಲ್ಯಾಕ್ ಫಂಗಸ್ ಔ‍ಷಧಿಯೂ ಲಭ್ಯ : ಸಚಿವ ಡಾ.ಕೆ.ಸುಧಾಕರ್

|
Google Oneindia Kannada News

ಬೆಂಗಳೂರು, ಮೇ 30: ಎಲ್ಲರಿಗೂ ಆದಷ್ಟು ಶೀಘ್ರ ಕೋವಿಡ್ ಲಸಿಕೆ ನೀಡುವುದು ನಮ್ಮ ಮುಂದಿರುವ ಸದ್ಯದ ಉದ್ದೇಶವಾಗಿದೆ. ಇದರಿಂದ ಕೊರೊನಾದ ಮುಂದಿನ ಅಲೆ ತಡೆಯಬಹುದು. ಅಲ್ಲಿಯವರೆಗೆ ಎಲ್ಲರೂ ಕೋವಿಡ್ ಸುರಕ್ಷತಾ ಕ್ರಮ ಕಡೆಗಣಿಸಬಾರದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್, ಕೋವಿಡ್ ಲಸಿಕೆ ಪಡೆಯದೇ ಇದ್ದಲ್ಲಿ ಈ ರೀತಿ ಮೂರು, ನಾಲ್ಕನೇ ಅಲೆ ಬರುವ ಸಾಧ್ಯತೆ ಇರುತ್ತದೆ. ಆದಷ್ಟು ಶೀಘ್ರ ಎಲ್ಲರಿಗೂ ಲಸಿಕೆ ನೀಡುವುದು ನಮ್ಮ ಉದ್ದೇಶ. ಮಕ್ಕಳಿಗೂ ಲಸಿಕೆ ನೀಡಲು ಪ್ರಯೋಗ ನಡೆಯುತ್ತಿದೆ. ವೃದ್ಧರಿಗೆ, ಯುವಜನರಿಗೆ, ಹೆಚ್ಚು ಜನರ ಸಂಪರ್ಕ ನೀಡುವವರಿಗೆ ಮೊದಲಾದವರಿಗೆ ಲಸಿಕೆ ನೀಡಲಾಗುತ್ತಿದೆ. ಎರಡು ಡೋಸ್ ಪಡೆದವರು ಇಡೀ ಪ್ರಕ್ರಿಯೆ ಮುಗಿಯುವವರೆಗೆ ಕೋವಿಡ್ ಸುರಕ್ಷತಾ ಕ್ರಮ ಪಾಲಿಸಬೇಕು. ಇನ್ನೂ 6 ತಿಂಗಳು ಅಥವಾ ಒಂದು ವರ್ಷ ಮಾಸ್ಕ್ ಧರಿಸುವ ಹಾಗೂ ಇತರೆ ಕೋವಿಡ್ ಸುರಕ್ಷತಾ ಕ್ರಮ ಕಡೆಗಣಿಸಬಾರದು ಎಂದು ಹೇಳಿದ್ದಾರೆ.

ಕೊವಿಡ್ 19: ಮೇ 30ರಂದು ವಿಶ್ವದಲ್ಲಿ ಎಷ್ಟು ಮಂದಿ ಗುಣಮುಖ?ಕೊವಿಡ್ 19: ಮೇ 30ರಂದು ವಿಶ್ವದಲ್ಲಿ ಎಷ್ಟು ಮಂದಿ ಗುಣಮುಖ?

ರಾಜ್ಯಗಳ ಬೇಡಿಕೆಗೆ ಅನುಗುಣವಾಗಿ ರೆಮ್‌ಡಿಸಿವಿರ್ ಔಷಧಿಯನ್ನು ಕೇಂದ್ರ ಸರ್ಕಾರ ಹಂಚಿಕೆ ಮಾಡುತ್ತಿತ್ತು. ಈಗ ಕೆಲ ಕಂಪನಿಗಳು ಮುಂದೆ ಬಂದು ರಾಜ್ಯಕ್ಕೆ ಔಷಧಿ ನೀಡುವುದಾಗಿ ತಿಳಿಸಿವೆ. ಮಾರುಕಟ್ಟೆಯಲ್ಲಿ ಔಷಧಿ ಲಭ್ಯವಿರುವುದರಿಂದ ಕೇಂದ್ರ ಸರ್ಕಾರ ನೇರವಾಗಿ ಖರೀದಿಸಲು ರಾಜ್ಯಕ್ಕೆ ಸೂಚನೆ ನೀಡಿದೆ ಎಂದಿದ್ದಾರೆ.

Our priority is provide vaccine to everyone: Dr K Sudhakar

ಬ್ಲ್ಯಾಕ್ ಫಂಗಸ್ ಔಷಧಿಗೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರು ಎಂಟಕ್ಕೂ ಅಧಿಕ ಕಂಪನಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ಸುಮಾರು 80 ಸಾವಿರ ವಯಲ್ಸ್ ಮಾರುಕಟ್ಟೆಯಲ್ಲಿದೆ. ರಾಜ್ಯಕ್ಕೆ ಈವರೆಗೆ 8-10 ಸಾವಿರ ವೈಯಲ್ಸ್ ದೊರೆತಿದೆ ಎಂದು ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಕಪ್ಪು ಶಿಲೀಂಧ್ರದ 1,250 ಪ್ರಕರಣ ಕಂಡುಬಂದಿದ್ದು 30-35 ಸಾವಾಗಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಸೂಕ್ತ ರೀತಿಯ ಡೆತ್ ಆಡಿಟ್‌ಗೆ ಸೂಚಿಸಲಾಗಿದೆ. ಸರ್ಕಾರಿ ಆಸ್ಪತ್ರೆ, ಖಾಸಗಿ ಆಸ್ಪತ್ರೆಗೆ ದಾಖಲಾದ ಕಪ್ಪು ಶಿಲೀಂಧ್ರ ಸೋಂಕಿತರಿಗೆ ಔಷಧಿ ವಿತರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಜೂನ್‌ನಲ್ಲಿ ಎಷ್ಟು ಲಸಿಕೆ ಲಭ್ಯವಾಗಲಿದೆ ಎಂದು ಲೆಕ್ಕ ನೀಡಿದ ಆರೋಗ್ಯ ಸಚಿವಾಲಯಜೂನ್‌ನಲ್ಲಿ ಎಷ್ಟು ಲಸಿಕೆ ಲಭ್ಯವಾಗಲಿದೆ ಎಂದು ಲೆಕ್ಕ ನೀಡಿದ ಆರೋಗ್ಯ ಸಚಿವಾಲಯ

Recommended Video

CSK ಧೋನಿಗೆ 15 ಕೋಟಿ ಕೊಟ್ಟು ಉಳಿಸಿಕೊಂಡಿರೋದು ಯಾಕೆ ಎಂದ ಆಕಾಶ್ ಚೋಪ್ರಾ | Oneindia Kannada

ಇನ್ನು ಇದೇ ಸಂದರ್ಭದಲ್ಲಿ ಲಾಕ್‌ಡೌನಿಂದ ಉಂಟಾದ ಪ್ರಯೋಜನವನ್ನು ಸಚಿವರು ಹೇಳಿದ್ದಾರೆ. ಲಾಕ್‌ಡೌನ್‌ನಿಂದಾಗಿ ಏನೆಲ್ಲ ಉತ್ತಮವಾಗಿದೆ ಎಂಬುದನ್ನು ಜನರೇ ನೋಡಿದ್ದಾರೆ. 47%ದಷ್ಟಿದ್ದ ಪಾಸಿಟಿವಿಟಿ ಕಳೆದ 15 ದಿನಗಳಲ್ಲಿ 14-15% ಗೆ ಇಳಿದಿದೆ. ಅನೇಕ ರಾಜ್ಯಗಳಲ್ಲಿ 8-9% ಆಗಿದೆ. ಇವೆಲ್ಲವನ್ನೂ ನೋಡಿಕೊಂಡು, ತಾಂತ್ರಿಕ ಸಲಹಾ ಸಮಿತಿ ಸಲಹೆ ಪಡೆದು ಮುಖ್ಯಮಂತ್ರಿಗಳೇ ಮುಂದಿನ ತೀರ್ಮಾನ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

English summary
Our priority is provide vaccine to everyone said Health minister Dr K Sudhakar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X