Namma Metro: ಬೆಂಗಳೂರು ಮೆಟ್ರೋ ನಿಯಮ ಉಲ್ಲಂಘಿಸಿದ 27000 ಪ್ರಕರಣ
ಬೆಂಗಳೂರು, ಏಪ್ರಿಲ್ 03: ಬೆಂಗಳೂರು ನಮ್ಮ ಮೆಟ್ರೋದಲ್ಲಿ ನಿಯಮ ಆಗಾಗ ಉಲ್ಲಂಘನೆ ಆಗುತ್ತಲೇ ಇವೆ. ಟಿಕೆಟ್ ರಹಿತ ಪ್ರಯಾಣ, ಮೆಟ್ರೋ ರೈಲಿನಲ್ಲಿ ಆಹಾರ ತಿನ್ನುವುದು, ಮದ್ಯಪಾನ, ಅಹಿತಕರ ನಡವಳಿಕೆ ಸೇರಿದಂತೆ ಅನೇಕ ಪ್ರಕರಣಗಳು ಕೇಳಿ ಬಂದಿದ್ದವು. ಸದ್ಯ ನಮ್ಮ ಮೆಟ್ರೋ ವ್ಯಾಪ್ತಿಯಲ್ಲಿ 27000 ಪ್ರಕರಣಗಳು ದಾಖಲಾಗಿವೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (BMRLC) ತಿಳಿಸಿದೆ.
ಸೆಪ್ಟೆಂಬರ್ 2024 ರಿಂದ ಮಾರ್ಚ್ 2025ರ ನಡುವೆ ಕಳೆದ ಆರು ತಿಂಗಳ ಅವಧಿಯಲ್ಲಿ ಸಂಚಾರ ದಟ್ಟಣೆ ಇಲ್ಲದ ಸಮಯದಲ್ಲಿ ಮೆಟ್ರೋದ ಭದ್ರತಾ ದಳವು ಎಂದಿನಂತೆ ಭದ್ರತಾ ತಪಾಸಣೆ ನಡೆಸಿದೆ. ಸಹ ಪ್ರಯಾಣಿಕರಿಗೆ ಅನಾನುಕೂಲತೆ ಉಂಟು ಮಾಡುವ ಹಾಗೂ ಮೆಟ್ರೋ ನಿಯಮಗಳ ಉಲಂಘನೆ ಮಾಡಿದ ಸುಮಾರು 27,000 ಕ್ಕೂ ಹೆಚ್ಚು ಘಟನೆಗಳು ಕಂಡು ಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಯಾಣಿಕರಿಂದ ಜೋರಾಗಿ ಸಂಗೀತವನ್ನು ಮೊಬೈಲ್ ನಲ್ಲಿ ಹಾಕಿ ಕೊಂಡು ಕೇಳುತ್ತಿರುವುದು ಒಟ್ಟು 11,922 ಪ್ರಕರಣಗಳು ದಾಖಲಾಗಿವೆ. ವಿಕಲಾಂಗ ವ್ಯಕ್ತಿಗಳು (PwD), ಹಿರಿಯ ನಾಗರಿಕರು, ಗರ್ಭಿಣಿಯರು ಮತ್ತು ಶಿಶುಗಳೊಂದಿಗೆ ಪ್ರಯಾಣಿಸುವವರಿಗೆ ಆದ್ಯತೆಯ ಆಸನಗಳನ್ನು ನೀಡದಿರುವುದು 14,162 ಪ್ರಕರಣಗಳು ಹಾಗೂ ರೈಲಿನಲ್ಲಿ ಪ್ರಯಾಣ ಮಾಡುವಾಗ ಪದಾರ್ಥಗಳ ಸೇವನೆಯ 554 ಪ್ರಕರಣಗಳು ಕಂಡುಬಂದಿವೆ. ಅಲ್ಲದೆ, 474 ಘಟನೆಗಳು ದೊಡ್ಡ ಗಾತ್ರದ ಲಗೇಜ್ ಗಳನ್ನು ಸಾಗಿಸುವ ಪ್ರಯಾಣಿಕರನ್ನು ಒಳಗೊಂಡಿವೆ.
ಈ ಕ್ರಮಗಳಿಗೆ ಯಾವುದೇ ದಂಡವನ್ನು ವಿಧಿಸಲಾಗಿಲ್ಲ. ಆದರೂ, ಅಂತಹ ನಡವಳಿಕೆಗಳನ್ನು ನಿರುತ್ಸಾಹಗೊಳಿಸಲು ಮತ್ತು ಸಾಮರಸ್ಯದ ಪ್ರಯಾಣಕ್ಕಾಗಿ ನಮ್ಮ ಮೆಟ್ರೋ ಮಾರ್ಗಸೂಚಿಗಳನ್ನು ಅನುಸರಿಸುವ ಪ್ರಾಮುಖ್ಯತೆಯನ್ನು ಬಲಪಡಿಸುವ ಉದ್ದೇಶದಿಂದ ಭದ್ರತಾ ದಳವು ಕಠಿಣ ಎಚ್ಚರಿಕೆಗಳನ್ನು ನೀಡಿದೆ. ಇದು ಪ್ರಯಾಣಿಕರಲ್ಲಿ ಹೆಚ್ಚಿನ ಅರಿವು ಮತ್ತು ಪರಿಗಣನೆಯ ಅಗತ್ಯವನ್ನು ಎತ್ತಿ ತೋರಿಸುತ್ತದೆ.
ಸುಗಮವಾದ ಪ್ರಯಾಣಕ್ಕಾಗಿ ನಮ್ಮ ಮೆಟ್ರೋ ಮಾರ್ಗಸೂಚಿಗಳನ್ನು ಪಾಲಿಸಲು ಮತ್ತು ದಂಡಗಳ್ನು ವಿಧಿಸುವ ಅವಕಾಶಗಳನ್ನು ತಪ್ಪಿಸಲು ನಿಗಮವು ಪ್ರಯಾಣಿಕರನ್ನು ವಿನಂತಿಸುತ್ತದೆ. ಇದರಲ್ಲಿ ಅನೇಕ ಪ್ರಕರಣಗಳಿಗೆ ನಮ್ಮ ಮೆಟ್ರೋ ಅಪಾರ ದಂಡ ಸಂಗ್ರಹವಾಗಿದೆ ಎಂದು BMRCL ಮೂಲಗಳು ಮಾಹಿತಿ ನೀಡಿವೆ.
-
IPL 2026: ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ದರೆ 'ನಮ್ಮ ಮೆಟ್ರೋ' ಪ್ರಯಾಣ ಉಚಿತ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications