ಬೆಂಗಳೂರು ಮತದಾರರ ಪಟ್ಟಿಯಲ್ಲಿ 50 ಸಾವಿರ ಅಕ್ರಮ ಬಾಂಗ್ಲಾ ಪ್ರಜೆಗಳು!

ಬೆಂಗಳೂರಿನ ಮತದಾರರ ಪಟ್ಟಿಯಲ್ಲಿ 50 ಸಾವಿರ ಅಕ್ರಮ ಬಾಂಗ್ಲಾ ವಲಸಿಗರಿಗೆ ಸ್ಥಾನ. ಇತ್ತೀಚೆಗೆ ನಡೆಸಲಾದ ಮತದಾರರ ಪಟ್ಟಿಯ ಪರೀಕ್ಷೆ ವೇಳೆ ಪತ್ತೆ. ಪಟ್ಟಿಯಿಂದ ಅಕ್ರಮ ವಲಸಿಗರ ಹೆಸರುಗಳನ್ನು ಕೈಬಿಡುವ ಕಾರ್ಯಕ್ಕೆ ಚಾಲನೆ.

ಬೆಂಗಳೂರು, ಜುಲೈ 15: ಬೆಂಗಳೂರು ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿ 50 ಸಾವಿರ ಬಾಂಗ್ಲಾದೇಶದ ವಲಸಿಗರು ಸೇರಿಕೊಂಡಿದ್ದಾರೆಂದು ಬಿಬಿಎಂಪಿ ಹೇಳಿದೆ. ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಬಿಬಿಎಂಪಿ ಆಯುಕ್ತರಾದ ಮಂಜುನಾಥ್ ಪ್ರಸಾದ್ ಅವರು, ಈ ವಿಚಾರ ತಿಳಿಸಿದ್ದಾರೆ.

ಇತ್ತೀಚೆಗೆ, ಮತದಾರರ ಪಟ್ಟಿಯನ್ನು ಪರಿಷ್ಕತಗೊಳಿಸುವಾಗ ಸುಮಾರು 50 ಸಾವಿರದಷ್ಟು ಅಕ್ರಮ ಬಾಂಗ್ಲಾ ವಲಸಿಗರು ಬಂದು ಬೆಂಗಳೂರಿನಲ್ಲಿ ನೆಲೆಸಿರುವುದು ಪತ್ತೆಯಾಗಿದೆ. ಈ ಎಲ್ಲಾ ಜನರು ನಗರದ ನಾನಾ ಭಾಗಗಳಲ್ಲಿ ಬೀಡುಬಿಟ್ಟಿದ್ದಾರೆ ಎಂದು ಹೇಳಿದರು.

Over 50 thousand illegal immigrants from Bangladesh got voted id in Bengaluru: BBMP

ಈ ಬಗ್ಗೆ ಎಚ್ಚೆತ್ತುಕೊಂಡಿರುವ ಬಿಬಿಎಂಪಿ, ಈ ಕೂಡಲೇ ಅಕ್ರಮ ವಲಸಿಗರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಕ್ರಮಕ್ಕೆ ಚಾಲನೆ ನೀಡಿದೆ ಎಂದು ಅವರು ತಿಳಿಸಿದರು.

ಈ ತಿಂಗಳಿನಲ್ಲಿ ಮತದಾರರ ಪಟ್ಟಿಗೆ ಹೊಸ ಮತದಾರರನ್ನು ಸೇರಿಸಿಕೊಳ್ಳುವ ಆಂದೋಲನ ಹಮ್ಮಿಕೊಳ್ಳಲಾಗಿದ್ದು, 9691 ಅರ್ಜಿಗಳನ್ನು ಈವರೆಗೆ ಸ್ವೀಕಾರ ಮಾಡಲಾಗಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸುವಾಗ ವಿವರಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+