Bengaluru-Mysuru Expressway: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ವೇಗವಾಗಿ ಚಾಲನೆ ಮಾಡುವ ಮುನ್ನ ಎಚ್ಚರ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಲು ಪೊಲೀಸರು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯಾದ ಆರಂಭದಲ್ಲಿ ಹೆಚ್ಚಿನ ಅಪಘಾತಗಳು ಸಂಭವಿಸಿದ್ದವು, ಇದು ಪೊಲೀಸರಿಗೆ ತಲೆನೋವಾಗಿತ್ತು, ಅದಾದ ಬಳಿಕ ಕೆಲವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಲಾಗಿದೆ.
ವೇಗವಾಗಿ ಚಲಿಸುವ ವಾಹನಗಳಿಗೆ ದಂಡ ಪ್ರಯೋಗ ಮಾಡಲು ಪೊಲೀಸರು ಮುಂದಾಗಿದ್ದರು. ಇದೀಗ ಕೆಲವು ತಿಂಗಳುಗಳಲ್ಲೇ ಅತಿ ವೇಗದ ಚಾಲನೆ ಮಾಡಿದ 89,221 ವಾಹನಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಡೆಕ್ಕನ್ ಹೆರಾಲ್ಸ್ ವರದಿ ಮಾಡಿದೆ.

ವರದಿಯ ಪ್ರಕಾರ, ಅತಿ ವೇಗವಾಗಿ ಚಾಲನೆ ಮಾಡುವ ವಾಹನಗಳಲ್ಲಿ ಹಿಡಿಯಲು ಮೈಸೂರು ಸಮೀಪವಿರುವ ಕಣಿಮಿಣಿಕೆ ಟೋಲ್ ಗೇಟ್ ಬಳಿ ಪೊಲೀಸ್ ಇಲಾಖೆಯು ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಎಕ್ಸ್‌ಪ್ರೆಸ್‌ವೇನಲ್ಲಿ ಎಎನ್‌ಪಿಆರ್ ಕ್ಯಾಮೆರಾ ಮೂಲಕ ದಂಡ ವಿಧಿಸಲಾಗುತ್ತಿದ್ದರೂ, ನಿಯಮ ಉಲ್ಲಂಘನೆ ಮಾಡುತ್ತಿರುವವರು ಪಾವತಿ ಮಾಡುತ್ತಿಲ್ಲ. ಇದರಿಂದಾಗಿ ಅತಿ ವೇಗದಲ್ಲಿ ವಾಹನ ಚಲಾಯಿಸುವುದನ್ನು ಕಂಡು ಬಂದಾಗ ದಂಡವನ್ನು ವಸೂಲಿ ಮಾಡಲು ಪೊಲೀಸರನ್ನು ನಿಯೋಜಿಸಲು ಇಲಾಖೆ ನಿರ್ಧಾರ ಮಾಡಿದೆ.
ಈವರೆಗೂ 89,221 ವಾಹನಗಳು ನಿಯಮ ಉಲ್ಲಂಘನೆ ಮಾಡಿದ್ದರೂ 5,300 ಮಂದಿ ಮಾತ್ರ ಇದುವರೆಗೆ ದಂಡವನ್ನು ಪಾವತಿಸಿದ್ದಾರೆ ಮತ್ತು ಖಾಸಗಿ ಕಾರುಗಳ ಮಾಲೀಕರು ಹೆಚ್ಚಿನ ಪ್ರಮಾಣದಲ್ಲಿ ನಿಯಮ ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ. ಅಪಘಾತದ ಪ್ರಮಾಣ ಕಡಿಮೆಯಾದ ಬಳಿಕ ವೇಗದ ಮಿತಿಯನ್ನು ಪರಿಷ್ಕರಣೆ ಮಾಡಲಾಗುವುದು ಎಂದು ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್ ಹೇಳಿದ್ದಾರೆ.
ನಿಯಮ ಮೀರಿದರೆ ಎಫ್‌ಐಆರ್
130 ಕಿಲೋಮೀಟರ್ ಗಿಂತ ಹೆಚ್ಚು ವೇಗದಲ್ಲಿ ಪ್ರಯಾಣಿಸುವ ಪ್ರಯಾಣಿಕರ ಮೇಳೆ ಎಫ್‌ಐಆರ್ ದಾಖಲಿಸಲಾಗುವುದು ಎಂದು ಹೇಳಿದ್ದರು. ಮಿತಿ ಮೀರಿದ ವೇಗವೆ ಅಪಘಾತದ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿತ್ತು. ರಸ್ತೆ ಸುರಕ್ಷತೆಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ಮೇಲ್ವಿಚಾರಣಾ ಸಮಿತಿಯು ನೈಸ್ ರಸ್ತೆಯಲ್ಲಿ ಇತ್ತೀಚೆಗೆ ಸಂಭವಿಸಿದ ಅಪಘಾತದ ಬಗ್ಗೆ ಕರ್ನಾಟಕ ಪೊಲೀಸರಿಗೆ ಎಚ್ಚರಿಕೆ ನೀಡಿದೆ.
"2022ರಲ್ಲಿ ರಾಜ್ಯದಲ್ಲಿ ಸಂಭವಿಸಿದ ಮಾರಣಾಂತಿಕ ಅಪಘಾತಗಳಲ್ಲಿ ಶೇಕಡಾ 90 ರಷ್ಟು ಅತಿ ವೇಗ ಕಾರಣ ಎಂದು ಹೇಳಿದೆ. ಹೆದ್ದಾರಿಗಳಲ್ಲಿ ವಾಹನಗಳ ಅತಿ ವೇಗಕ್ಕೆ ಕಡಿವಾಣ ಹಾಕುವಂತೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣಾ ಸಮಿತಿಯು ಸೂಚನೆ ನೀಡಿದೆ. 130 ಕಿಲೋಮೀಟರ್ ಗಿಂತ ಹೆಚ್ಚಿನ ವೇಗದಲ್ಲಿ ಚಲಿಸುವ ವಾಹನಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದೇವೆ, ಇದು ಅತ್ಯಂತ ಸವಾಲಿನದ್ದಾಗಿದ್ದರೂ, ನಾವು ಅದನ್ನು ಕಾರ್ಯಗತಗೊಳಿಸಲು ಪ್ರಯತ್ನಿಸುತ್ತೇವೆ ಎಂದು ಅಲೋಕ್ ಕುಮಾರ್ ಈ ಮೊದಲು ಹೇಳಿದ್ದರು.












Click it and Unblock the Notifications