India
  • search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆಕ್ಸಿಜನ್ ಕಾನ್ಸಂಟ್ರೇಟರ್ಸ್ ಕೊಡುಗೆ ನೀಡಿದ ಮಲ್ಟಿಪ್ಲೆಕ್ಸ್ ಸಮೂಹ ಸಂಸ್ಥೆ

|
Google Oneindia Kannada News

ಬೆಂಗಳೂರು, ಜೂನ್ 7: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಇಳಿಕೆಯಾಗಲು ಮಲ್ಟಿಪ್ಲೆಕ್ಸ್ ಸಮೂಹ ಸಂಸ್ಥೆಗಳ ವತಿಯಿಂದ ಹತ್ತು ಆಕ್ಸಿಜನ್ ಕಾನ್ಸಂಟ್ರೇಟರ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು.

ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆ ಬೆಂಗಳೂರು ಕೇಂದ್ರ ಕಾರಾಗೃಹದ ಆರೋಗ್ಯ ಕೇಂದ್ರಕ್ಕೆ ಮತ್ತು ತುಮಕೂರು ಜಿಲ್ಲಾಡಳಿತಕ್ಕೆ ತಲಾ ಐದು ಆಕ್ಸಿಜನ್ ಕಾನ್ಸಂಟ್ರೇಟರ್‌ಗಳನ್ನು ಒದಗಿಸಲಾಯಿತು.

ಬೆಂಗಳೂರು ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರಾದ ಡಾ.ಪಿ.ರಂಗನಾಥ್ ಮಾತನಾಡಿ, "ಪ್ರಸ್ತುತ ಕೋವಿಡ್ ಮಹಾಮಾರಿ ನಿರ್ವಹಣೆಯಲ್ಲಿ ಅಗತ್ಯವಾಗಿ ಬೇಕಾದ ಆಕ್ಸಿಜನ್ ಕಾನ್ಸಂಟ್ರೇಟರ್ ಒದಗಿಸಿರುವುದು ಅತ್ಯಂತ ಸಂತೋಷದ ವಿಷಯವಾಗಿದ್ದು, ಇದಕ್ಕಾಗಿ ಮಲ್ಟಿಪ್ಲೆಕ್ಸ್ ಸಂಸ್ಥೆಗೆ ಧನ್ಯವಾದ ಸಲ್ಲಿಸುವುದಾಗಿ" ಹೇಳಿದರು.

ಕಾರಾಗೃಹ ಇಲಾಖೆಯ ಮಹಾನಿರ್ದೇಶಕರಾದ ಅಲೋಕ್ ಮೋಹನ್ ಅವರ ಸೂಚನೆಯಂತೆ ಕಾರಾಗೃಹದ ಆರೋಗ್ಯ ಕೇಂದ್ರಕ್ಕೆ ಆಕ್ಸಿಜನ್ ಕಾನ್ಸಂಟ್ರೇಟರ್‌ಗಳನ್ನು ಒದಗಿಸಿರುವುದಾಗಿ ಮಲ್ಟಿಪ್ಲೆಕ್ಸ್ ಸಂಸ್ಥೆ ತಿಳಿಸಿದೆ.

Bengaluru: Oxygen Concentrators Contribution From Multiplex Group

ಈ ಸಂದರ್ಭದಲ್ಲಿ ಕಾರಾಗೃಹ ಆರೋಗ್ಯ ಕೇಂದ್ರದ ಮುಖ್ಯ ಆರೋಗ್ಯಾಧಿಕಾರಿ ಡಾ.ಉಮಾ, ಅಧೀಕ್ಷಕರಾದ ಲತಾ, ವೈದ್ಯಾಧಿಕಾರಿ ಡಾ. ಸಂತೋಷ್, ಡಾ. ಪ್ರಮೀಳಾ, ಸಹಾಯಕ ಅಧೀಕ್ಷಕರಾದ ಪರಮೇಶ್, ಮಹಾದೇವನಾಯಕ್, ಶ್ರೀಶೈಲ ಮೇಟಿ ಉಪಸ್ಥಿತರಿದ್ದರು.

ಶ್ರೀಕ್ಷೇತ್ರ ಧರ್ಮಸ್ಥಳ ವತಿಯಿಂದ ಚಿತ್ರದುರ್ಗ ಜಿಲ್ಲಾಡಳಿತಕ್ಕೆ 2 ಟನ್ ಆಕ್ಸಿಜನ್ ಹಸ್ತಾಂತರ
ಶ್ರೀಕ್ಷೇತ್ರ ಧರ್ಮಸ್ಥಳ ವತಿಯಿಂದ ಚಿತ್ರದುರ್ಗ ಸರ್ಕಾರಿ ಜಿಲ್ಲಾಸ್ಪತ್ರೆಗೆ 2 ಟನ್ ಪ್ರಾಣವಾಯು ಆಕ್ಸಿಜನ್‌ನ್ನು ಉಚಿತವಾಗಿ ಸೋಮವಾರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರ ಮೂಲಕ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ವತಿಯಿಂದ 2 ಟನ್ ಉಚಿತ ಪ್ರಾಣವಾಯು ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಶ್ರೀಕ್ಷೇತ್ರ ಧರ್ಮಸ್ಥಳ ವತಿಯಿಂದ ಈಗಾಗಲೇ 10 ಆಕ್ಸಿಜನ್ ಕಾನ್ಸಂಟ್ರೇಟರ್ಸ್‌ಗಳನ್ನು ನೀಡಿದ್ದಾರೆ. ಇಂದು ಜಿಲ್ಲಾಡಳಿತಕ್ಕೆ 2 ಟನ್ ಆಕ್ಸಿಜನ್‌ನ್ನು ನೀಡಲಾಗಿದ್ದು, ಜಿಲ್ಲಾಡಳಿತದ ಪರವಾಗಿ ಧನ್ಯವಾದ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಚ್.ಜೆ ಬಸವರಾಜಪ್ಪ, ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ರೂಪಾ ಜನಾರ್ಧನ್, ನಾಗರಾಜ್ ಸಂಗ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಸಂಸ್ಥೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.

English summary
Ten oxygen concentrators were Contribution by the Multiplex group.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X