ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಸಗೊಬ್ಬರ ಕೊರತೆ: ಎಚ್ ಡಿಕೆ ಟ್ವೀಟ್ ಏಟಿಗೆ ಸಚಿವರ ಸಮಜಾಯಿಷಿ!

|
Google Oneindia Kannada News

ಬೆಂಗಳೂರು, ಆಗಸ್ಟ್.20: ರಾಜ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆ, ರೈತರಿಗೆ ಗೊಬ್ಬರ ಪೂರೈಕೆಯಲ್ಲಿ ಅವ್ಯವಸ್ಥೆ ವಿಚಾರವನ್ನೇ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ಅಸ್ತ್ರವಾಗಿ ಬಳಸಿಕೊಂಡಿದ್ದಾರೆ.

Recommended Video

Dubai ಫ್ಲೈಟ್ ಹತ್ತಿದ RCB ಪ್ಲೇಯರ್ಸ್ | Oneindia Kannada

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಟ್ವೀಟ್ ಅಸ್ತ್ರಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಪ್ರತ್ಯಸ್ತ್ರ ಹೂಡಿದ್ದಾರೆ. "ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರೇ, ಸರ್ಕಾರಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಸುವಲ್ಲಿ ನಮ್ಮ ಸರ್ಕಾರ ಸಮರ್ಥವಿದೆ. ಈಗಾಗಲೇ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ರೈತರಿಗೂ ಯೂರಿಯಾ ಗೊಬ್ಬರ ಪೂರೈಸುವಲ್ಲಿ ಸಶಕ್ತವಾಗಿದೆ. ಆಡಿದ ಮಾತು ಬಿಟ್ಟ ಬಾಣ ಕಳೆದ ಸಮಯ ಮತ್ತು ಕೈತಪ್ಪಿ ಹೋದ ಅವಕಾಶ ಇವು ಎಂದಿಗೂ ಮರಳಿ ಬಾರವು" ಎಂದು ಟ್ವೀಟ್ ಮಾಡಿದ್ದಾರೆ.

ರೈತರು ಹಿಡಿಶಾಪ ಹಾಕುವ ಮೊದಲು ಯಡಿಯೂರಪ್ಪ ಎಚ್ಚೆತ್ತುಕೊಳ್ಳಲಿ: ಎಚ್ಡಿಕೆರೈತರು ಹಿಡಿಶಾಪ ಹಾಕುವ ಮೊದಲು ಯಡಿಯೂರಪ್ಪ ಎಚ್ಚೆತ್ತುಕೊಳ್ಳಲಿ: ಎಚ್ಡಿಕೆ

ಇದಕ್ಕೂ ಮೊದಲು "ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಲ್ಲಿ ಏದುಸಿರು ಬಿಡುತ್ತಿರುವ ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ರಸಗೊಬ್ಬರ, ವಿಶೇಷವಾಗಿ ಯೂರಿಯಾ, ಸಮರ್ಪಕವಾಗಿ ಪೂರೈಸಲು ತಕ್ಷಣ ಕ್ರಮ ಕೈಗೊಳ್ಳಬೇಕು" ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದರು.

Oxygen Shortage At Govt Hospital: Minister Dr Sudhakar Reaction About HDK Tweet

ಗ್ರಾಮೀಣ ಪ್ರದೇಶದಲ್ಲಿ ಕೃತಕ ಗೊಬ್ಬರ ಅಭಾವ:

"ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರ ಕೊರತೆ ಎದುರಾಗಿದ್ದು ರೈತರು ಕಂಗಾಲಾಗಿದ್ದಾರೆ. ಕೆಲವೆಡೆ ಕೃತಕ ಅಭಾವ ಸೃಷ್ಟಿಸಿ ದುಬಾರಿ ದರಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು. ಗೊಬ್ಬರ ಸಿಗದ ರೈತರು ಹಿಡಿಶಾಪ ಹಾಕುವ ಮೊದಲು ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು" ಎಂದು ಸರ್ಕಾರವನ್ನು ಎಚ್ ಡಿಕೆ ಎಚ್ಚರಿಸಿದ್ದರು.

"ವಾಡಿಕೆಗಿಂತ ಈ ಬಾರಿ ರಾಜ್ಯದಾದ್ಯಂತ ಶೇಕಡ 25ರಷ್ಟು ಹೆಚ್ಚು ಬಿತ್ತನೆ ಆಗಿದೆ. ಕೃಷಿ ಇಲಾಖೆ ಇದನ್ನು ಅಂದಾಜಿಸುವಲ್ಲಿ ಎಡವಿರುವುದು ಮೇಲ್ನೋಟಕ್ಕೆ ಗೋಚರವಾಗುತ್ತದೆ. ಬಾಯಿಮಾತಿನ ಅನುಕಂಪಕ್ಕಿಂತ ರಸಗೊಬ್ಬರ ಪೂರೈಕೆಗೆ ಯಾವ ಕ್ರಮ ಕೈಗೊಳ್ಳಲಾಗಿದೆ? ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು" ಎಂದು ಪ್ರಶ್ನೆ ಮಾಡಿದ್ದರು.

"ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಗೊಬ್ಬರ ಕೊರತೆಯಿಂದ ಬಿತ್ತನೆ ಕಾರ್ಯ ನಿಲ್ಲಿಸದಂತೆ ತುರ್ತು ಸೂಕ್ತ ವ್ಯವಸ್ಥೆ ಮಾಡುವಂತೆ ಒತ್ತಾಯಿಸುತ್ತೇನೆ" ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದರು.

English summary
Oxygen Shortage At Govt Hospital: Minister Dr Sudhakar Reaction About HDK Tweet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X