Get Updates
Get notified of breaking news, exclusive insights, and must-see stories!

ಪಿಎಸಿ ಸಮಿತಿ ತನಿಖೆಗೆ ಸ್ಪೀಕರ್ ಅಡ್ಡಿಪಡಿಸಿಲ್ಲ

ಬೆಂಗಳೂರು, ಮೇ 30: ಕೋವಿಡ್19 ಚಿಕಿತ್ಸೆಗಾಗಿ ಸರ್ಕಾರದ ವತಿಯಿಂದ ಖರೀದಿಸಲಾದ ವೈದ್ಯಕೀಯ ಉಪಕರಣ, ಔಷಧಿ, ಪಿಪಿಇ ಕಿಟ್‌ನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ತನಿಖೆಗೆ ವಿಧಾನಸಭೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ಮುಂದಾಗಿದೆ.

ಆದರೆ, ಸಮಿತಿಯ ತನಿಖೆಗೆ ಸ್ವತಃ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೇ ಸ್ಪಂದಿಸುತ್ತಿಲ್ಲ ಎಂಬ ದೂರುಗಳು ಕೇಳಿ ಬಂದಿದ್ದವು.

ತನಿಖೆಯ ಭಾಗವಾಗಿ ಬುಧವಾರ ಸಮಿತಿಯ ಅಧ್ಯಕ್ಷರಾಗಿರುವ ಶಾಸಕ ಎಚ್‌ ಕೆ ಪಾಟೀಲ್ ಹಾಗೂ ಇತರೆ ಸದಸ್ಯರು ವಿವಿಧ ಆಸ್ಪತ್ರೆಗಳಿಗೆ, ಸ್ಥಳಗಳಿಗೆ ಭೇಟಿ ನೀಡಬೇಕಿತ್ತು. ಆದರೆ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಈ ಭೇಟಿಯನ್ನು ತಡೆದಿದ್ದಾರೆ ಎಂದು ಎಚ್ ಕೆ ಪಾಟೀಲ್ ಆರೋಪಿಸಿದ್ದರು.

 PAC Investigation On Covid19 PPE Kits, Drugs Scam: Speaker Office Rejects Allegations

ಆದರೆ ಈ ಬಗ್ಗೆ ಶನಿವಾರ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಕೊರೊನಾವೈರಸ್ ಹರಡುವುದನ್ನು ತಡೆಯಲು ಎಲ್ಲೆಡೆ ಲಾಕ್‌ಡೌನ್ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಸಮಿತಿಗಳಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಉದ್ದೇಶದಿಂದ ಮೊದಲು ಸಭೆ ಸೇರದಂತೆ ಸೂಚಿಸಲಾಗಿತ್ತು. ನಂತರ ಸಮಿತಿ ಈ ಹಂತದಲ್ಲಿ ಸಾರ್ವಜನಿಕರನ್ನು ಭೇಟಿಯಾಗುವುದು ಸರಿ ಅಲ್ಲ ಎಂಬ ಉದ್ದೇಶದಿಂದ ಸಮಿತಿಯ ಭೇಟಿ ಕಾರ್ಯಕ್ರಮವನ್ನು ತಡೆಯಲಾಗಿತ್ತು ಎಂದು ಹೇಳಿದ್ದಾರೆ.

ಅದನ್ನು ಹೊರತುಪಡಿಸಿ ಸಮಿತಿಯ ಸಾರ್ವಜನಿಕ ಭೇಟಿ ಕಾರ್ಯಕ್ರಮಕ್ಕೆ ತಡೆ ನೀಡುವುದರ ಹಿಂದೆ ಯಾವುದೇ ಉದ್ದೇಶವಿಲ್ಲ. ಕೆಲ ಮಾಧ್ಯಮಗಳು ಸ್ಪೀಕರ್ ಮೇಲೆ ಅನುಮಾನ ವ್ಯಕ್ತಪಡಿಸಿ ವರದಿ ಮಾಡಿವೆ. ಸ್ಪೀಕರ್, ಸಮಿತಿ ತನಿಖೆ ನಡೆಸಲು ಸ್ವತಂತ್ರರು ಎಂದು ಹೇಳಿದ್ದಾರೆ ಎಂದು ಪ್ರಕಟಣೆಯಲ್ಲಿ ವಿಶಾಲಾಕ್ಷಿ ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+