ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಾದರಾಯನಪುರ ಗಲಭೆ; ಆರೋಪಿಗಳಿಗೆ ಎಚ್ಚರಿಕೆಯೊಂದಿಗೆ ಜಾಮೀನು

|
Google Oneindia Kannada News

ಬೆಂಗಳೂರು, ಮೇ 29: ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಸಿಕ್ಕಿದೆ. ಕ್ವಾರಂಟೈನ್‌ಗೆ ಬರಲು ಒಪ್ಪದ ಜನರು ಬಿಬಿಎಂಪಿ, ಆರೋಗ್ಯ ಇಲಾಖೆ ಅಧಿಕಾರಿಗಳ ಮೇಲೆ ಹಲ್ಲೆಗೆ ಪ್ರಯತ್ನ ನಡೆಸಿದ್ದರು.

ಕರ್ನಾಟಕ ಹೈಕೋರ್ಟ್ ಪಾದರಾಯನಪುರ ಗಲಭೆಗೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಎಲ್ಲಾ 126 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಿದೆ. ಎಲ್ಲಾ ಆರೋಪಿಗಳಿಗೂ ಕಡ್ಡಾಯವಾಗಿ ಕೋವಿಡ್ - 19 ಪರೀಕ್ಷೆ ನಡೆಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.

ಚಿತ್ರಗಳು : ಗಲಭೆ ಬಳಿಕ ಪಾದರಾಯನಪುರ ಕಂಡಿದ್ದು ಹೀಗೆಚಿತ್ರಗಳು : ಗಲಭೆ ಬಳಿಕ ಪಾದರಾಯನಪುರ ಕಂಡಿದ್ದು ಹೀಗೆ

ವೈದ್ಯಕೀಯ ಪರೀಕ್ಷೆಯಲ್ಲಿ ಕೊರೊನಾ ವೈರಸ್ ಸೋಂಕಿನ ಲಕ್ಷಣ ಕಂಡು ಬಂದರೆ ಸರ್ಕಾರದ ನಿಯಮದಂತೆ ಕ್ರಮ ಕೈಗೊಳ್ಳಬೇಕು. ಆರೋಪಿಗಳು ಕೋವಿಡ್ - 19 ಮಾರ್ಗಸೂಚಿ ಪಾಲನೆ ಮಾಡದಿದ್ದರೆ ಜಾಮೀನು ರದ್ದು ಮಾಡುವುದಾಗಿ ಹೈಕೋರ್ಟ್ ಎಚ್ಚರಿಕೆ ನೀಡಿದೆ.

ಪಾದರಾಯನಪುರ ಗಲಭೆ ಪ್ರಕರಣ: 137 ಆರೋಪಿಗಳ ವಿರುದ್ದ ಚಾರ್ಜ್ ಶೀಟ್ಪಾದರಾಯನಪುರ ಗಲಭೆ ಪ್ರಕರಣ: 137 ಆರೋಪಿಗಳ ವಿರುದ್ದ ಚಾರ್ಜ್ ಶೀಟ್

ವೈದ್ಯಕೀಯ ಪರೀಕ್ಷೆಯಲ್ಲಿ ಕೊರೊನಾ ವೈರಸ್ ಸೋಂಕಿನ ಲಕ್ಷಣ ಕಂಡು ಬಂದರೆ ಸರ್ಕಾರದ ನಿಯಮದಂತೆ ಕ್ರಮ ಕೈಗೊಳ್ಳಬೇಕು. ಆರೋಪಿಗಳು ಕೋವಿಡ್ - 19 ಮಾರ್ಗಸೂಚಿ ಪಾಲನೆ ಮಾಡದಿದ್ದರೆ ಜಾಮೀನು ರದ್ದು ಮಾಡುವುದಾಗಿ ಹೈಕೋರ್ಟ್ ಎಚ್ಚರಿಕೆ ನೀಡಿದೆ.

ಪಾದರಾಯನಪುರ ಗಲಭೆ; 25 ಪೊಲೀಸರಿಗೆ ಕ್ವಾರಂಟೈನ್ ಪಾದರಾಯನಪುರ ಗಲಭೆ; 25 ಪೊಲೀಸರಿಗೆ ಕ್ವಾರಂಟೈನ್

ಜಾಮೀನಿಗಾಗಿ ಅರ್ಜಿ

ಜಾಮೀನಿಗಾಗಿ ಅರ್ಜಿ

ಪಾದರಾಯನಪುರ ಗಲಭೆಗೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಎಲ್ಲಾ ಆರೋಪಿಗಳ ಪರವಾಗಿ ಇಸ್ಮಾಯಿಲ್ ಜವೀವುಲ್ಲಾ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಆರೋಪಿಗಳಿಗೆ ಎಚ್ಚರಿಕೆ

ಆರೋಪಿಗಳಿಗೆ ಎಚ್ಚರಿಕೆ

ಆರೋಪಿಗಳು 1 ಲಕ್ಷ ರೂ. ಬಾಂಡ್, ಇಬ್ಬರ ಶ್ಯೂರಿಟಿ ನೀಡಬೇಕು ಎಂಬ ಷರತ್ತಿನೊಂದಿಗೆ ಜಾಮೀನು ಮಂಜೂರು ಮಾಡಲಾಗಿದೆ. ಎಲ್ಲಾ ಆರೋಪಿಗಳಿಗೆ ಕಡ್ಡಾಯವಾಗಿ ಕೋವಿಡ್ - 19 ಪರೀಕ್ಷೆ ಮಾಡಬೇಕು. ಸರ್ಕಾರದ ಮಾರ್ಗಸೂಚಿ ಪಾಲನೆ ಮಾಡಲು ಒಪ್ಪದಿದ್ದರೆ ಜಾಮೀನು ರದ್ದು ಮಾಡಲಾಗುತ್ತದೆ ಎಂದು ನ್ಯಾಯಾಲಯ ಎಚ್ಚರಿಕೆ ನೀಡಿದೆ.

ಚೆಕ್ ಪೋಸ್ಟ್ ನಾಶ, ಹಲ್ಲೆಗೆ ಯತ್ನ

ಚೆಕ್ ಪೋಸ್ಟ್ ನಾಶ, ಹಲ್ಲೆಗೆ ಯತ್ನ

ಕ್ವಾರಂಟೈನ್‌ ಮಾಡಲು ಜನರನ್ನು ಕರೆತರಲು ಬಿಬಿಎಂಪಿ, ಆರೋಗ್ಯ ಇಲಾಖೆ ಅಧಿಕಾರಿಗಳು ಹೋದಾಗ ಅವರ ಮೇಲೆ ಹಲ್ಲೆಗೆ ಪ್ರಯತ್ನ ನಡೆಸಲಾಗಿತ್ತು. ಸೀಲ್ ಡೌನ್ ಮಾಡಿ ಬಡಾವಣೆಗೆ ಹಾಕಿದ್ದ ಚೆಕ್ ಪೋಸ್ಟ್‌ಗಳನ್ನು ನಾಶ ಮಾಡಲಾಗಿತ್ತು. ಈ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 126 ಜನರನ್ನು ಬಂಧಿಸಲಾಗಿತ್ತು.

ಬಿಗಿ ಪೊಲೀಸ್ ಬಂದೋಬಸ್ತ್

ಬಿಗಿ ಪೊಲೀಸ್ ಬಂದೋಬಸ್ತ್

ಗಲಭೆ ಬಳಿಕ ಪಾದರಾಯನಪುರದಲ್ಲಿ 'ಗರುಡಾ' ಪಡೆಯನ್ನು ನಿಯೋಜನೆ ಮಾಡಲಾಯಿತು. ಪೊಲೀಸ್ ಭದ್ರತೆಯನ್ನು ಜನರನ್ನು ಕರೆತಂದು ಕ್ವಾರಂಟೈನ್ ಮಾಡಲಾಯಿತು. ಗಲಭೆ ಕುರಿತು ಪೊಲೀಸರು ಇನ್ನೂ ತನಿಖೆ ನಡೆಸುತ್ತಿದ್ದಾರೆ.

English summary
High court of Karnataka granted conditional bail for 126 accused of Bengaluru Padarayanapura violence. Tension prevailed in areaa on April 19 after residents refused to accompany the BBMP team for quarantine.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X