ಭಾರತದ ಖ್ಯಾತ ವಿಜ್ಞಾನಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಎಂ.ಆರ್.ಎಸ್.ರಾವ್ ಬೆಂಗಳೂರಿನಲ್ಲಿ ನಿಧನ, ಮಂಗಳವಾರ ಅಂತ್ಯಕ್ರಿಯೆ
ಬೆಂಗಳೂರು, ಆಗಸ್ಟ್, 14: ಭಾರತದ ಖ್ಯಾತ ವಿಜ್ಞಾನಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಎಂ.ಆರ್.ಎಸ್.ರಾವ್ ಎಂದೇ ಖ್ಯಾತರಾಗಿದ್ದ ಮಂಚನಹಳ್ಳಿ ರಂಗಸ್ವಾಮಿ ಸತ್ಯನಾರಾಯಣ ರಾವ್ ಅವರು ಭಾನುವಾರ ಸಂಜೆ 7 ಗಂಟೆಗೆ ಬೆಂಗಳೂರಿನ ಟಾಟಾ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದ್ದಾರೆ ಎಂದು ತಿಳಿದುಬಂದಿದೆ.
ಅವರು ತಮ್ಮ ಶಿಸ್ತು, ವೈಜ್ಞಾನಿಕ ಜ್ಞಾನ, ತಾಳ್ಮೆ, ಮೃದು-ಮಾತನಾಡುವ ಸ್ವಭಾವ ಮತ್ತು ಪಿಎಚ್‌ಡಿ ವಿದ್ಯಾರ್ಥಿಗಳ ಮಾರ್ಗದರ್ಶನಕ್ಕಾಗಿ ಹೆಸರುವಾಸಿಯಾಗಿದ್ದರು.
ಎಂ.ಆರ್.ಎಸ್.ರಾವ್ ಅವರು ಪತ್ನಿ ಪದ್ಮ ಎಸ್.ರಾವ್ ಮತ್ತು ಇಬ್ಬರು ಪುತ್ರರಾದ ಶರತ್ ಮತ್ತು ರೋಹನ್ ಅವರನ್ನು ಅಗಲಿದ್ದಾರೆ. ಇನ್ನು ಎಂ.ಆರ್.ಸತ್ಯನಾರಾಯಣ ರಾವ್ ಅವರ ಪುತ್ರರೊಬ್ಬರು ಬ್ರಿಸ್ಬೇನ್‌ನಿಂದ ಹಿಂದಿರುಗಿದ ನಂತರ ಅವರ ಅಂತ್ಯಕ್ರಿಯೆಯನ್ನು ಮಂಗಳವಾರ ನಡೆಸಲಾಗುವುದು ಎಂದು ಅವರ ಸಹೋದ್ಯೋಗಿಗಳು ಮಾಹಿತಿ ನೀಡಿದ್ದಾರೆ ಎಂದು ಡಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
ಎಂ.ಆರ್.ಎಸ್.ರಾವ್ ಜೀವನ
ಜನವರಿ 21, 1948ರಂದು ಮೈಸೂರಿನಲ್ಲಿ ಜನಿಸಿದ ರಾವ್ (75) ಭಾರತದಲ್ಲಿ ಕ್ರೊಮಾಟಿನ್ ಬಯಾಲಜಿ ಸಂಶೋಧನೆ ಪ್ರಾರಂಭಿಸಿದ ಮೊದಲ ವಿಜ್ಞಾನಿ ಎಂದೇ ಪ್ರಸಿದ್ದರಾಗಿದ್ದಾರೆ. ಅವರು ಜವಾಹರಲಾಲ್ ನೆಹರು ಉನ್ನತ ವೈಜ್ಞಾನಿಕ ಸಂಶೋಧನಾ ಕೇಂದ್ರದಲ್ಲಿ ಗೌರವ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮತ್ತು ಸಂಸ್ಥೆಯಲ್ಲಿ ಕ್ರೊಮಾಟಿನ್ ಜೀವಶಾಸ್ತ್ರ ಪ್ರಯೋಗಾಲಯವನ್ನು ಸಕ್ರಿಯವಾಗಿ ನಡೆಸಿದ್ದರು.
ವಿಜ್ಞಾನ ಮತ್ತು ಎಂಜಿನಿಯರಿಂಗ್ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳಿಗಾಗಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಅಲ್ಲದೆ ವಿಜ್ಞಾನ ಮತ್ತು ಸಂಶೋಧನಾ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಕರ್ನಾಟಕ ರಾಜ್ಯ ಸರ್ಕಾರವು ಸರ್.ಎಂವಿ ವಿಶ್ವೇಶ್ವರಯ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ಎಸ್.ರಾವ್ ಅವರು 2003-13ರಿಂದ ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಹಾಗೆಯೇ ಅನೇಕ ಕೇಂದ್ರ ಸರ್ಕಾರದ ವಿಜ್ಞಾನ ಸಮಿತಿಗಳ ಅಧ್ಯಕ್ಷರೂ ಆಗಿದ್ದರು. ಅಲ್ಲದೆ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್‌ನ ಎಲ್ಲಾ ಸಮಿತಿಗಳಲ್ಲಿಯೂ ಕಾರ್ಯನಿರ್ಹಿಸಿದ್ದರು.
ಪ್ರೊಫೆಸರ್ ರಾವ್ ಅವರು 1966ರಲ್ಲಿ ತಮ್ಮ BSc ಮತ್ತು 1968 ರಲ್ಲಿ ಎಂಎಸ್‌ಸಿ ಅನ್ನು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪೂರ್ಣಗೊಳಿಸಿದ್ದು, 1973ರಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (IISc) ಯಿಂದ ಜೀವರಸಾಯನಶಾಸ್ತ್ರದಲ್ಲಿ ಪಿಎಚ್‌ಡಿ ಮಾಡಿದರು. ನಂತರ 1974-76ರಿಂದ ಯುಎಸ್‌ಎನ ಬೇಲರ್ ಕಾಲೇಜ್ ಆಫ್ ಮೆಡಿಸಿನ್‌ನಲ್ಲಿ ಪೋಸ್ಟ್‌ಡಾಕ್ಟರಲ್ ಸಂಶೋಧನೆಯನ್ನು ಮಾಡಿದ್ದು, ಅಲ್ಲಿ ಸಹಾಯಕ ಪ್ರಾಧ್ಯಾಪಕರಾಗಿಯೂ ಕಾರ್ಯ ನಿರ್ಹಿಸಿದ್ದರು.
ನಂತರ ಅವರು ಭಾರತಕ್ಕೆ ಹಿಂದಿರುಗಿ IIScನಲ್ಲಿ ಬಯೋಕೆಮಿಸ್ಟ್ರಿ ವಿಭಾಗಕ್ಕೆ ಸೇರಿದರು. ತಮ್ಮ 30 ವರ್ಷಗಳ ಸಂಶೋಧನಾ ವೃತ್ತಿಯಲ್ಲಿ, ಪ್ರೊ.ರಾವ್ ಅವರು 35ಕ್ಕೂ ಹೆಚ್ಚು ಪಿಎಚ್‌ಡಿ ವಿದ್ಯಾರ್ಥಿಗಳು ಮತ್ತು ನೂರಾರು ಪ್ರಶಿಕ್ಷಣಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ













Click it and Unblock the Notifications