Padmanabhanagar: ಇಂದು ಸಿದ್ದರಾಮಯ್ಯ-ಡಿಕೆಶಿ ಜಂಟಿ ಸುದ್ದಿಗೋಷ್ಠಿ, ಬಿಜೆಪಿ ವಿರುದ್ಧದ ತಂತ್ರ ಬಹಿರಂಗ ಸಾಧ್ಯತೆ
ಬೆಂಗಳೂರು, ಏಪ್ರಿಲ್ 20: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಕಾಂಗ್ರೆಸ್ ತೀವ್ರ ಪೈಪೋಟಿ ಒಡ್ಡಲಿದೆ. ಪದ್ಮನಾಭನಗರ ಕ್ಷೇತ್ರದ ಕಾಂಗ್ರೆಸ್ ಸ್ಪರ್ಧೆ ಹಾಗೂ ಪಕ್ಷ ಸೇರ್ಪಡೆ ಕುರಿತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಮಹತ್ವದ ಜಂಟಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ಜೆಡಿಎಸ್‌ನಿಂದ ಬಿಜೆಪಿ ಸೇರಿದ್ದ ವಿಧಾನ ಪರಿಷತ್ ಸದಸ್ಯ ಹುಣಸೂರು ಕ್ಷೇತ್ರ ಪ್ರತಿನಿಧಿಸಿದ್ದ ಎಚ್ ವಿಶ್ವನಾಥ್ ಅವರು ಇಂದು ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ ಇದೆ. ಜೊತೆಗೆ ಕೊನೆ ಕ್ಷಣದವರೆಗೆ ಪದ್ಮನಾಭನಗರದ ಕ್ಷೇತ್ರದ ಸ್ಪರ್ಧೆ ಕುರಿತು ಗುಟ್ಟು ಬಿಟ್ಟುಕೊಡದ ಕಾಂಗ್ರೆಸ್ ಅಲ್ಲಿಂದ ಸಂಸದ ಡಿ.ಕೆ ಸುರೇಶ್ ಅವರನ್ನು ಇಲ್ಲವೇ ಬೇರೆ ಯಾರನ್ನು ಕಣಕ್ಕಿಳಿಸುತ್ತದೆ ಎಂಬುದರ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಘೋಷಣೆ ಮಾಡುವ ನಿರೀಕ್ಷೆಗಳು ಇವೆ.

ಕನಕಪುರದಲ್ಲಿ ಡಿಕೆ ಶಿವಕುಮಾರ್ ಅವರಿಗೆ ಸಚಿವ ಆರ್.ಅಶೋಕ್ ಅವರನ್ನು ಕಣಕ್ಕಿಳಿಸುವ ಮೂಲಕ ಬಿಜೆಪಿ ಟಕ್ಕರ್ ನೀಡಿದೆ. ಅದಕ್ಕೆ ಪ್ರತಿಯಾಗಿ ಆರ್.ಅಶೋಕ್ ಅವರು ಪ್ರತಿನಿಧಿಸುವ ಕ್ಷೇತ್ರ ಪದ್ಮನಾಭನಗರದಲ್ಲಿ ಬಿಜೆಪಿಗೆ ಶಾಕ್ ಕೊಡಲು ಕಾಂಗ್ರೆಸ್ ತಂತ್ರ ರೂಪಿಸಿದೆ ಎಂದು ತಿಳಿದು ಬಂದಿದೆ. ಈ ಎಲ್ಲ ಕಾರಣಗಳಿಂದ ಸುದ್ದಿಗೋಷ್ಠಿ ಹೆಚ್ಚು ಮಹತ್ವ ಪಡೆದುಕೊಂಡಿದೆ.











Click it and Unblock the Notifications