ಪದ್ಮಶ್ರೀ ಪುರಸ್ಕೃತೆ ಸೂಲಗಿತ್ತಿ ನರಸಮ್ಮ ನಿಧನ

ಬೆಂಗಳೂರು, ಡಿಸೆಂಬರ್ 25: ಗ್ರಾಮೀಣಭಾಗದ ಜನರಿಗೆ ನರ್ಸ್ ಆಗಿದ್ದ ಸೂಲಗಿತ್ತಿ ನರಸಮ್ಮ(98) ಮಂಗಳವಾರ ನಿಧನಹೊಂದಿದ್ದಾರೆ.

ಸುಮಾರು 15 ಸಾವಿರಕ್ಕೂ ಹೆಚ್ಚು ಹೆರಿಗೆ ಮಾಡಿಸಿದ ಕೀರ್ತಿ ಅವರದ್ದು, ವೈದ್ಯರು ಇಲ್ಲದ ಕಾಲದಲ್ಲಿ ವೈದ್ಯರಂತೆ ಹೆರಿಗೆ ಮಾಡಿಸಿದ್ದರು. 2018ರಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಇವರು ಭಾಜನರಾಗಿದ್ದರು.ಕಳೆದ 25 ದಿನಗಳಿಂದ ಬಿಜಿಎಸ್ ಆಸ್ಪತ್ರೆಯಲ್ಲಿ ಉಸಿರಾಟದ ತೊಂದರೆ, ವಯೋಸಹಜ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು.

Padmashree awardee Sulagitti Narasamma is no more

ಸೋಮವಾರ ರಾತ್ರಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಆರಂಭಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ 3 ಗಂಟೆಗೆ ನರಸಮ್ಮ ಅವರು ನಿಧನ ಹೊಂದಿದ್ದಾರೆ.

ಸೂಲಗಿತ್ತಿ ನರಸಮ್ಮ ಮೂಲತಃ ತುಮಕೂರಿನ ಪಾವಗಡದವರು, ಅವರ ಈ ಕೆಲಸವನ್ನು ಪರಿಗಣಿಸಿ ಭಾರತ ಸರ್ಕಾರ 2018ರಲ್ಲಿ ಪದ್ಮಶ್ರೀ ಹಾಗೂ 2013ರಲ್ಲಿ ವಯೋಶ್ರೇಷ್ಟ ಸಮ್ಮಾನ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಿದೆ. ಇವರು ತುಮಕೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಅನ್ನು ಪಡೆದಿದ್ದಾರೆ.

ನರಸಮ್ಮ ಅವರು ಅಲೆಮಾರಿ ಜನಾಂಗಕ್ಕೆ ಸೇರಿದವರು. ಆ ಜನಾಂಗದ ಅದೆಷ್ಟೋ ಮಹಿಳೆಯರು ಕೃಷ್ಣಾಪುರಕ್ಕೆ ಬಂದು ನರಸಮ್ಮ ಅವರಲ್ಲಿ ಆಶ್ರಯ ಪಡೆದು ಹೆರಿಗೆ ಮಾಡಿಸಿಕೊಂಡಿದ್ದಾರೆ.

ಗರ್ಭಿಣಿಯರಿಗೆ ನೈಸರ್ಗಿಕ ಆಯುರ್ವೇದ ಔಷಧಗಳನ್ನು ಕೂಡ ತಯಾರಿಸಿ ಕೊಡುತ್ತಿದ್ದರು. ಗರ್ಭಿಣಿಯರ ಭ್ರೂಣದ ನಾಡಿಮಿಡಿತ ಅರ್ಥ ಮಾಡಿಕೊಂಡು, ಅದರ ಆರೋಗ್ಯ, ಮಗುವಿನ ತಲೆ ಯಾವ ಕಡೆಗಿದೆ, 8-9 ತಿಂಗಳಲ್ಲಿ ಮಗು ಗಂಡೊ-ಹೆಣ್ಣೊ ಎಂದು ಕೂಡ ಹೇಳುವಷ್ಟು ನಿಪುಣರು.

ಸೂಲಗಿತ್ತಿ ನರಸಮ್ಮ ನಿಧನಕ್ಕೆ ಮುಖ್ಯಮಂತ್ರಿ ಶೋಕ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೂಲಗಿತ್ತಿ ನರಸಮ್ಮ ಅವರ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ತುಮಕೂರು ಜಿಲ್ಲೆ ಪಾವಗಡ ತಾಲ್ಲೂಕಿನವರಾದ ನರಸಮ್ಮ ಈ ಭಾಗದ ಸಾವಿರಾರು ಗ್ರಾಮೀಣ ಮಹಿಳೆಯರಿಗೆ ಉಚಿತವಾಗಿ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದರು.

ಅವರ ಆತ್ಮಕ್ಕೆ ಭಗವಂತ ಶಾಂತಿ ಕರುಣಿಸಲಿ ಹಾಗೂ ಕುಟುಂಬಕ್ಕೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಗಳು ತಮ್ಮ ಸಂದೇಶ ದಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+