• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಗ್ರಾ.ಪಂಚಾಯತ್ ಉಪಚುನಾವಣೆ ಮತದಾರ ಕಾರ್ಮಿಕರಿಗೆ ವೇತನ ಸಹಿತ ರಜೆ

|

ಬೆಂಗಳೂರು, ಡಿಸೆಂಬರ್ 31: ಜನವರಿ 2 ರಂದು ರಾಜ್ಯದ ವಿವಿಧ ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳಿಗೆ ನಡೆಯಲಿರುವ ಉಪ ಚುನಾವಣೆಯ ಮತದಾನ ದಿನದಂದು ಅರ್ಹ ಮತದಾರ ಕಾರ್ಮಿಕರಿಗೆ ವೇತನ ಸಹಿತ ರಜೆಯನ್ನು ಘೋಷಿಸಿ ಕಾರ್ಮಿಕ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ದಾವಣಗೆರೆ ಜಿಲ್ಲೆ ಹರಪ್ಪನಹಳ್ಳಿ ತಾಲ್ಲೂಕು ಪಂಚಾಯಿತಿ 24 - ಹಲವಾಗಲು ಕ್ಷೇತ್ರ. ವಿಜಯಪುರ ಜಿಲ್ಲೆ ಸಿಂಧಗಿ ತಾಲ್ಲೂಕು ಪಂಚಾಯಿತಿ 32- ಮಲಘಾಣ ಕ್ಷೇತ್ರ ಮತ್ತು ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕು ಪಂಚಾಯಿತಿ, 11- ಮೈಲಾರ ಕ್ಷೇತ್ರಗಳಿಗೆ ವಿವಿಧ ಕಾರಣಗಳಿಂದ ಆಕಸ್ಮಿಕವಾಗಿ ತೆರವಾಗಿರುವ ಸದಸ್ಯರ ಸ್ಥಾನಗಳಿಗೆ ಉಪ ಚುನಾವಣೆಯನ್ನು ಮತ್ತು ಜನವರಿ ಮತ್ತು ಫೆಬ್ರವರಿ - 2019 ರ ಮಾಹೆಯಲ್ಲಿ ಅವಧಿ ಮುಕ್ತಾಯವಾಗುವ 8 ಗ್ರಾಮ ಪಂಚಾಯಿತಿಗಳಿಗೆ ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳಿಗೆ ಜನವರಿ 2 ರಂದು ಉಪ ಚುನಾವಣೆ ನಡೆಯಲಿದೆ.

2019ನೇ ಸಾಲಿನ ಕೇಂದ್ರ ಸರ್ಕಾರದ ರಜಾ ದಿನಗಳ ಪಟ್ಟಿ ಪ್ರಕಟ

ಮತದಾನ ನಡೆಯಲಿರುವ ಸದರಿ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನೋಂದಾಯಿತರಾದ ಅರ್ಹ ಮತದಾರರಾಗಿರುವ ಎಲ್ಲಾ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಪಟ್ಟ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳು ಆದೇಶದನುಸಾರ ಪ್ರಜಾಪ್ರತಿನಿಧಿ ಕಾಯ್ದೆ 1951 ರ ಕಲಂ 135ಬಿ ರನ್ವಯ ಮತ್ತು ರ್ನಾಟಕ ಪಂಚಾಯತ್ ರಾಜ್ (ಚುನಾವಣೆಯನ್ನು ನಡೆಸುವ) ನಿಯಮಗಳು, 1993 ರ ನಿಯಮ 114 ರನ್ವಯ ಮತದಾನ ನಡೆಯಲಿರುವ ಕ್ಷೇತ್ರಗಳಲ್ಲಿ ಅರ್ಹರಿರುವ ಎಲ್ಲಾ ಕಾರ್ಮಿಕ ಮತದಾರರಿಗೆ ದಿನಾಂಕ: 02-01-2019 (ಬುಧವಾರ) ರಂದು ವೇತನ ಸಹಿತ ರಜೆ ನೀಡಿ, ಎಲ್ಲಾ ಅರ್ಹ ಕಾರ್ಮಿಕರು ಸಂವಿಧಾನಾತ್ಮಕ/ಶಾಸನಾತ್ಮಕ ಹಕ್ಕಾದ ಮತವನ್ನು ಕಾನೂನಿನ್ವಯ ಚಲಾಯಿಸಲು ಅನುವು ಮಾಡಿಕೊಟ್ಟು ಚುನಾವಣಾ ಆಯೋಗದ ಆದೇಶವನ್ನು ನಿಯಮಾನುಸಾರ ಪಾಲಿಸಲು ಸೂಚಿಸಿ ಕಾರ್ಮಿಕ ಇಲಾಖಾ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2019ರ ಸಾರ್ವತ್ರಿಕ ರಜಾದಿನಗಳ ಪಟ್ಟಿ: ಭರಪೂರ ಸರಣಿ ರಜೆಯ ಸಂಭ್ರಮ

ತುರ್ತು ಸೇವೆಗೆ ಅನ್ವಯಿಸುವುದಿಲ್ಲ

ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ ಈ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರುಗಳು ಚುನಾವಣಾ ಕಾರ್ಯಕ್ಕೆ ಹಾಜರಾಗತಕ್ಕದ್ದು ಎಂದು ಆದೇಶದಲ್ಲಿ ತಿಳಿಸಲಾಗಿದೆ.(ಕೃಪೆ: ಕರ್ನಾಟಕ ವಾರ್ತೆ)

English summary
Labour commission has declared paid holiday on Jan 2 to eligible voters for Gram Panchayat and Taluk Panchayat by-elections in various places in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
X