ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಮೂಲ್ಯ ಲಿಯೋನಾ ವಿರುದ್ಧ ರಾಜದ್ರೋಹ ಪ್ರಕರಣ ದಾಖಲು

|
Google Oneindia Kannada News

ಬೆಂಗಳೂರು, ಫೆಬ್ರವರಿ.21: ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ಅಮೂಲ್ಯ ಲಿಯೋನಾ ಹಿಂದೆ ಯಾರೋ ಇದ್ದರೂ ಅಂಥವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಬೆಂಗಳೂರು ಪಶ್ಚಿಮ ವಿಭಾಗ ಡಿಸಿಪಿ ರಮೇಶ್ ತಿಳಿಸಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಟಿಪ್ಪು ಸುಲ್ತಾನ್ ಯುನೈಟೆಡ್ ಫ್ರೆಂಟ್ ಆಯೋಜಿಸಿದ್ದ ಕಾರ್ಯಕ್ರಮದ ಸಂಪೂರ್ಣ ವಿಡಿಯೋವನ್ನು ಚಿತ್ರೀಕರಣ ಮಾಡಲಾಗಿದೆ. ಇದನ್ನು ಪರಿಶೀಲಿಸಿ ಅಮೂಲ್ಯ ಲಿಯೋನಾಗೆ ಪಾಕಿಸ್ತಾನ ಪರ ಘೋಷಣೆ ಕೂಗಲು ಪ್ರಚೋದನೆ ನೀಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಡಿಸಿಪಿ ರಮೇಶ್ ತಿಳಿಸಿದ್ದಾರೆ.

ವಿಡಿಯೋ: ವಿಡಿಯೋ: "ಪಾಕಿಸ್ತಾನ್ ಜಿಂದಾಬಾದ್ ಎಂದವಳ ಕೈ-ಕಾಲು ಮುರಿಯಿರಿ"

ಇನ್ನು, ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ನಡೆದ ಕಾರ್ಯಕ್ರಮದಲ್ಲಿ ಆಯೋಜಕರು ಅಮೂಲ್ಯ ಲಿಯೋನಾಗೆ ಪ್ರಚೋದಿಸಿದ್ದರೆ ಅವರ ವಿರುದ್ಧವೂ ಶಿಸ್ತು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Pakistan Zindabad: Sedition Case Against Amulya Leona Booked At Upparpete Police Station

ಉಪ್ಪಾರಪೇಟೆ ಠಾಣೆಯಲ್ಲಿ ಅಮೂಲ್ಯ ಲಿಯೋನಾ ವಿರುದ್ಧ ಪ್ರಕರಣ:

ಇನ್ನು, ಫ್ರೀಡಂ ಪಾರ್ಕ್ ನಲ್ಲಿ ನಡೆದ ಸಿಎಎ ಮತ್ತು ಎನ್ ಆರ್ ಸಿ ವಿರೋಧಿ ಕಾರ್ಯಕ್ರಮದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ಅಮೂಲ್ಯ ಲಿಯೋನಾ ವಿರುದ್ಧ ನಗರದ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 124ಎ 153 ಎ ಮತ್ತು 153 ಬಿ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.

English summary
Pakistan Zindabad: Sedition Case Against Amulya Leona Booked At Upparpete Police Station.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X