ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಾಕಿಸ್ತಾನ ಜಿಂದಾಬಾದ್ ಎಂದಿದ್ದ ಅಮೂಲ್ಯಳ ಜಾಮೀನು ಅರ್ಜಿ ತಿರಸ್ಕೃತ

|
Google Oneindia Kannada News

ಬೆಂಗಳೂರು, ಜೂನ್ 11: ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಸಿಎಎ, ಎನ್‌ಆರ್‌ಸಿ ವಿರೋಧಿಸಿ ಸಂಸದ ಅಸಾದುದ್ದಿನ್ ಓವೈಸಿ ಭಾಗಿಯಾಗಿದ್ದ ಸಮಾವೇಶದಲ್ಲಿ ಅಮೂಲ್ಯ ಲಿಯೋನಾ 'ಪಾಕಿಸ್ತಾನ ಜಿಂದಾಬಾದ್' ಎಂದು ಘೋಷಣೆ ಕೂಗಿ ಕೆಂಗಣ್ಣಿಗೆ ಗುರಿಯಾಗಿದ್ದಳು.

Recommended Video

Amulya leona bail plea rejected by the High Court | Karnataka High Court | Oneindia Kannada

ಆಕೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಫೆಬ್ರವರಿ 20 ರಂದು ನಡೆದ ಸಿಎಎ, ಎನ್‌ಆರ್‌ಸಿ ವಿರೋಧಿಸಿ ನಡೆದ ಸಮಾವೇಶದಲ್ಲಿ ಅವಳು ಭಾಗಿಯಾಗಿದ್ದಳು. ಒಂದೊಮ್ಮೆ ಆಕೆಗೆ ಜಾಮೀನು ದೊರೆತರೆ ಬೇರೆ ರೀತಿಯ ಅಪರಾಧಗಳಲ್ಲಿ ತನ್ನನ್ನು ತೊಡಗಿಸಿಕೊಳ್ಳುವ ಸಾಧ್ಯತೆ ಇದೆ. ಇದರಿಂದ ಸಮಾಜಕ್ಕೂ ಒಳಿತಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಪಾಕಿಸ್ತಾನ್ ಜಿಂದಾಬಾದ್: ಅಮೂಲ್ಯ ಲಿಯೋನಾ ಮನೆ ಮೇಲೆ ಕಲ್ಲುತೂರಾಟಪಾಕಿಸ್ತಾನ್ ಜಿಂದಾಬಾದ್: ಅಮೂಲ್ಯ ಲಿಯೋನಾ ಮನೆ ಮೇಲೆ ಕಲ್ಲುತೂರಾಟ

ಅಮೂಲ್ಯ ಅವರ ವಿರುದ್ಧ ದೇಶದ್ರೋಹ ಹಾಗೂ ಸಮಾಜದಲ್ಲಿ ದ್ವೇಷ ಹೊತ್ತಿಸುವ ಆರೋಪವಿದೆ. ಒಂದೊಮ್ಮೆ ಅಮೂಲ್ಯಳಿಗೆ ಜಾಮೀನು ದೊರೆತರೆ ಆಕೆ ತಲೆಮರೆಸಿಕೊಳ್ಳುವ ಸಾಧ್ಯತೆ ಇದೆ ಎಂದು ನ್ಯಾ. ವಿದ್ಯಾಧರ್ ಶಿರಹಟ್ಟಿ ಅಭಿಪ್ರಾಯಪಟ್ಟಿದ್ದಾರೆ. ಆಕೆ ಪಾಕಿಸ್ತಾನ್ ಜಿಂದಾಬಾದ್ ಎಂದ ಕೆಲವೇ ಕ್ಷಣಗಳಲ್ಲಿ ಹಿಂದೂಸ್ತಾನ್ ಜಿಂದಾಬಾದ್ ಎಂದು ಘೋಷಣೆ ಬದಲಾಯಿಸಿದ್ದಳು. ಆಕೆಯ ಕೈಲಿದ್ದ ಮೈಕನ್ನು ಕಸಿದುಕೊಳ್ಳಲಾಗಿತ್ತು.

Pakistan Zindabad Slogan Bail Plea Of Amulya Rejected

ಅಮೂಲ್ಯ ಮೂಲತಃ ಚಿಕ್ಕಮಗಳೂರಿನ ಕೊಪ್ಪದ ಹುಡುಗಿ. ಆಕೆಗೆ ಇನ್ನೂ 20 ವಯಸ್ಸು. ಆದರೆ ಎಡಪಂಥೀಯ ಚಿಂತಕಿ ಅಂತ ಕರೆಸಿಕೊಂಡ ಅಮೂಲ್ಯ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತಾ ಶಾ ವಿರುದ್ಧ ಮಾತನಾಡುವುದನ್ನೇ ಕಾಯಕ ಮಾಡಿಕೊಂಡಿದ್ದಾಳೆ.

ಸಿಎಎ ವಿರೋಧಿ ಹೋರಾಟದಲ್ಲಿ ಗುರುತಿಸಿಕೊಂಡು ಹೋದಲ್ಲಿ ಬಂದಲ್ಲಿ ಮೈಕ್ ತಾನೇ ಕೇಳಿ ಪಡೆದುಕೊಂಡು ಮಾತನಾಡುತ್ತಿದ್ದಳು. ಅದರಂತೆ ಫ್ರೀಡಂ ಪಾರ್ಕ್ ನಲ್ಲಿ ನಡೆದ ಸಿಎಎ ವಿರೋಧಿ ಹೋರಾಟದಲ್ಲಿ ಅಮೂಲ್ಯ ಇದ್ದಕ್ಕಿದ್ದಂತೆ ಕಾಣಿಸಿಕೊಂಡು 'ಪಾಕಿಸ್ತಾನ್ ಜಿಂದಾಬಾದ್' ಎಂದು ಘೋಷಣೆ ಕೂಗಿದ್ದಳು.

English summary
A court here has rejected the bail plea of a college student accused of sedition after she chanted Pakistan Zindabad on stage. The incident occurred on February 20 in the city during a rally which was held to protest against the amended citizenship law.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X