Breaking ಬೆಂಗಳೂರಲ್ಲಿ 'ಪಾಕಿಸ್ತಾನ್ ಜಿಂದಾಬಾದ್' ಎಂದ ಯುವತಿ
ಬೆಂಗಳೂರು ಫೆಬ್ರವರಿ 20: ಬಹಿರಂಗ ಸಭೆಯಲ್ಲಿ ಎಡಪಂಥೀಯ ಚಿಂತಕಿ ಯುವತಿಯೊಬ್ಬಳು 'ಪಾಕಿಸ್ತಾನ್ ಜಿಂದಾಬಾದ್' ಎಂದು ಘೋಷಣೆ ಕೂಗಿರುವ ಘಟನೆ ಬೆಂಗಳೂರಿನಲ್ಲಿ ಗುರುವಾರ ಸಂಜೆ ನಡೆದಿದೆ.
ಕೇಂದ್ರ ಸರ್ಕಾರ ಸಿಎಎ ಹಾಗೂ ಎನ್ ಆರ್ ಸಿ ವಿರೋಧಿಸಿ ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಹಿಂದೂ-ಮುಸ್ಲಿಂ-ಸಿಖ್- ಈಸಾಯಿ ಫೆಡರೇಷನ್ ಬೆಂಗಳೂರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ವಿವಾದ ಸೃಷ್ಟಿಯಾಗಿದೆ.
ಹೈದರಾಬಾದ್ ಸಂಸದ ಅಸಾದುದ್ದೀನ್ ಒವೈಸಿ ವೇದಿಕೆ ಆಗಮಿಸುತ್ತಿದ್ದಂತೆ ವೇದಿಕೆ ಮೇಲೆ ಆಸನರಾಗಿದ್ದ ಯುವ ಹೋರಾಟಗಾರ್ತಿ ಅಮೂಲ್ಯ ಲಿಯೋನ್ ಎಂಬಾಕೆ ಮೈಕ್ ಕೈಗೆತ್ತಿಕೊಂಡು ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಮೂರು ಘೋಷಣೆ ಕೂಗುತ್ತಿದ್ದಂತೆ ಕೂಡಲೇ ಒವೈಸಿ ಮೈಕ್ ಕಸಿದುಕೊಳ್ಳಲು ಪ್ರಯತ್ನಿಸಿದರು.

ಇಷ್ಡಾದರೂ ಮಾತನಾಡುವುದನ್ನು ಮುಂದುವರೆಸಿದ ಅಮೂಲ್ಯನನ್ನು ಬಲವಂತದಿಂದ ಮೈಕ್ ಕಸಿದುಕೊಳ್ಳಲಾಯಿತು. ಈ ವೇಳೆ ಸ್ಥಳದಲ್ಲಿ ನುಕು ನುಗ್ಗಲು ಅರಂಭವಾಯಿತು. ತದ ನಂತರ ಪೊಲೀಸರು ಮಧ್ಯಪ್ರವೇಶಿಸಿ ಆಕೆಯನ್ನು ವಶಕ್ಕೆ ಪಡೆದುಕೊಂಡರು. ಸ್ಥಳದಲ್ಲಿ ಉದ್ವಿಗ್ನ ವಾತಾವಾರಣ ನಿರ್ಮಾಣವಾಗಿದೆ.












Click it and Unblock the Notifications