ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಆರೋಪ: ತನಿಖೆಗೆ ಮೂರು ವಿಶೇಷ ತಂಡ

ಬೆಂಗಳೂರು, ಫೆಬ್ರವರಿ.28: ನಿನ್ನೆವರೆಗೂ ರಾಜ್ಯಸಭಾ ಫಲಿತಾಂಶವೇ ಸುದ್ದಿಯಲ್ಲಿತ್ತು. ಆದರೆ ಫಲಿತಾಂಶ ಬಂದ ಕೆಲವೇ ನಿಮಿಷಗಳಲ್ಲಿ ಸುದ್ದಿ ಚಿತ್ರಣವೇ ಬದಲಾಗಿದೆ. ಕಾಂಗ್ರೆಸ್ ಪಕ್ಷದ ಸಂಸದ ಸೈಯದ್‌ ನಾಸೀರ್ ಹುಸೇನ್ ಅವರ ಗೆಲುವಿನ ಸಂಭ್ರಮಾಚರಣೆ ದೊಡ್ಡ ವಿವಾದಕ್ಕೆ ಕಾರಣವಾಗಿದೆ.

ಕಾಂಗ್ರೆಸ್‌ ಸಂಸದ ಸೈಯದ್‌ ನಾಸೀರ್ ಹುಸೇನ್ ಅವರ ಸಂಭ್ರಮಾಚರಣೆಯಲ್ಲಿ ದಾಯಾದಿ ರಾಷ್ಟ್ರ ಪಾಕಿಸ್ತಾನದ ಪರ ಘೋಷಣೆ ಕೂಗಲಾಗಿದೆ ಎಂದು ವಿರೋಧ ಪಕ್ಷ ಬಿಜೆಪಿ ಆಡಳಿತರೂಢ ಕಾಂಗ್ರೆಸ್ ವಿರುದ್ಧ ಗಂಭಿರ ಆರೋಪ ಮಾಡಿದೆ. ಜೊತೆಗೆ ರಾಜ್ಯಾದ್ಯಂತ ಪ್ರತಿಭಟನೆಯನ್ನು ನಡೆಸುತ್ತಿದೆ. ಇದೇ ವೇಳೆ ಘಟನೆಯ ತನಿಖೆಗೆ ಬೆಂಗಳೂರು ಪೊಲೀಸರು ವಿಶೇಷ ತನಿಖಾ ತಂಡಗಳನ್ನು ರಚಿಸಿದ್ದಾರೆ.

Pakistan Zindabad slogan: Police formed three special teams for investigation

ವಿಶೇಷ ತನಿಖಾ ತಂಡ ರಚನೆ

ರಾಜ್ಯಸಭೆ ಚುನಾವಣೆಯ ಫಲಿತಾಂಶದ ನಂತರ ಸಂಭ್ರಮಾಚರಣೆ ವೇಳೆ ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಕೇಳಿ ಬಂದಿರುವ ಕಾರಣ ಪ್ರಕರಣದ ತನಿಖೆಗೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಶೇಖರ್ ತಿಳಿಸಿದ್ದಾರೆ.

ಘಟನೆ ತೀವ್ರಗತಿಯನ್ನು ಪಡೆಯುತ್ತಿದ್ದ ಕಾರಣ ಮಂಗಳವಾರ ತಡರಾತ್ರಿವರೆಗೂ ಠಾಣೆಯಲ್ಲೇ ಉಳಿದುಕೊಂಡಿದ್ದ ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಪೊಲೀಸ್ ಸಿಬ್ಬಂದಿಯ ಜೊತೆ ಚರ್ಚೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ. ಪ್ರಕರಣದ ಮುಂದಿನ ಆಯಾಮ ಹಾಗೂ ತನಿಖೆಗೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ಗೃಹ ಸಚಿವ ಪರಮೇಶ್ವರ್ ಅವರಿಗೆ ಕಾನೂನು, ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಬುಧವಾರ ಬೆಳಗ್ಗೆ ಗೃಹ ಸಚಿವರ ನಿವಾಸಕ್ಕೆ ತೆರಳಿ ಮಾಹಿತಿ ನೀಡಿದ್ದಾರೆ. ಇನ್ನು, ವಿಧಾನಸೌಧದ ಕಾರಿಡಾರ್‌ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ಅಪರಿಚಿತ ವ್ಯಕ್ತಿಯ ವಿರುದ್ಧ ಪೊಲೀಸರು ಮಂಗಳವಾರ ಸ್ವಯಂ ಪ್ರೇರಿತ ಎಫ್‌ಐಆರ್ ದಾಖಲಿಸಿದ್ದಾರೆ.

ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನು ಆಧರಿಸಿ ಎಫ್‌ಐಆರ್ ದಾಖಲಿಸಲಾಗಿದೆ. ನಂತರ ಬಿಜೆಪಿ ಎಂಎಲ್‌ಸಿ ಎನ್‌.ರವಿಕುಮಾರ್‌, ವಿಪಕ್ಷ ಮುಖ್ಯ ಸಚೇತಕ ಹಾಗೂ ಶಾಸಕ ದೊಡ್ಡನಗೌಡ ಪಾಟೀಲ್‌ ಕೂಡ ಕಾಂಗ್ರೆಸ್‌ ಸಂಸದ ಸೈಯದ್‌ ನಾಸೀರ್‌ ಹುಸೇನ್‌ ವಿರುದ್ಧ ವಿಧಾನಸೌಧ ಪೊಲೀಸರಿಗೆ ದೂರು ನೀಡಿದ್ದು, ಮಾಧ್ಯಮಗಳೊಂದಿಗೆ ಮಾತನಾಡುವಾಗ ಅವರ ಬೆಂಬಲಿಗರೇ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿದ್ದಾರೆ.

ಆದರೆ, ಸಂಸದ ಸೈಯದ್‌ ನಾಸೀರ್ ಹುಸೇನ್ ಬೆಂಬಲಿಗರು ಆರೋಪವನ್ನು ನಿರಾಕರಿಸಿದ್ದಾರೆ. "ನಾಸಿರ್ ಸಾಬ್ ಜಿಂದಾಬಾದ್" ಎಂದು ಕೂಗಿರುವುದಾಗಿಯೂ, ಪೊಲೀಸರು ಮತ್ತು ಬಿಜೆಪಿ ಪದಾಧಿಕಾರಿಗಳು ಆರೋಪಿಸಿದಂತೆ "ಪಾಕಿಸ್ತಾನ ಜಿಂದಾಬಾದ್" ಎಂದು ಕೂಗಿಲ್ಲ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+