ವಿಮಾನ ನಿಲ್ದಾಣಕ್ಕೆ ಸಂಪರ್ಕ ರಸ್ತೆ ಕಾಮಗಾರಿ ಶೀಘ್ರ ಪೂರ್ಣ
ಬೆಂಗಳೂರು, ಫೆಬ್ರವರಿ 2 : ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಂಪರ್ಕ ರಸ್ತೆ ನಿರ್ಮಾಣದ ಕಾಮಗಾರಿ ಶೀಘ್ರ ಮೂರ್ಣಗೊಳ್ಳಲಿದೆ ಎಂದು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.
ಬಳ್ಳಾರಿ ರಸ್ತೆಯಲ್ಲ ವಾಹನ ದಟ್ಟಣೆ ತಪ್ಪಿಸಲು ಸಂಪರ್ಕ ರಸ್ತೆ ನಿರ್ಮಿಸಲಾಗುತ್ತಿದೆ. ಬೇಗೂರು ಬಳಿ ವಿದ್ಯುತ್ ಮಾರ್ಗ ಬದಲಾವಣೆಯಿಂದಾಗಿ ಕಾಮಗಾರಿ ವಿಳಂಬವಾಗಿದ್ದು, ಸಮಸ್ಯ ನಿವಾರಿಸುವ ಕಾರಣ ಶೀಘ್ರ ಪೂರ್ಣಗೊಳಿಸಿ ಸಂಚಾರಕ್ಕೆ ಮಕ್ತಗೊಳಿಸಲಾಗುವುದು ಎಂದರು.
ಸಂಪರ್ಕ ರಸ್ತೆಗೆ ಬೇಕಿರುವ ಜಮೀನು ಭೂಸ್ವಾಧೀನಕ್ಕೆ ರೈತರಿಗೆ ಹೆಚ್ಚಿನ ಪರಿಹಾರ ನೀಡಲಾಗಿದೆ. ಜಮೀನು ನೀಡಲು ಹಿಂದೇಟು ಹಾಕಿದ್ದ ರೈತರ ಮನವೊಲಿಸಿ ಪರಿಹಾರ ಮಂಜೂರು ಮಾಡಲಾಗಿದೆ. ಹೀಗಾಗಿ ಸೀಮಿತ ಜಾಗದಲ್ಲಿ ಕಾಮಗಾರಿಗೆ ಅಡ್ಡಿಯಾಗಿದ್ದೂ ನಿವಾರಣೆಯಾಗಿದೆ. ಪಿಡಬ್ಲ್ಯೂಡಿ ಇಲಾಖೆಯಿಂದ ರಸ್ತೆ ಸಿದ್ಧಪಡಿಸಲಾಗುತ್ತಿದೆ ಎಂದರು.













Click it and Unblock the Notifications