ಬೆಂಗಳೂರಿನಲ್ಲಿ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಪ್ಯಾರಾಮೆಡಿಕಲ್‌ ವಿದ್ಯಾರ್ಥಿ ಬಂಧನ

ಬೆಂಗಳೂರು, ಜುಲೈ 18: ದಕ್ಷಿಣ ಬೆಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೊಬ್ಬನನ್ನು ಬಂಧಿಸಿರುವ ಪೊಲೀಸರು ಆತನಿಂದ 20 ಲಕ್ಷ ರೂಪಾಯಿಯನ್ನು ವಶಪಡಿಸಿಕೊಂಡಿದ್ದಾರೆ.

ಕೆಂಗೇರಿ ಬಳಿಯ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ಕೇರಳ ಮೂಲದ 23 ವರ್ಷದ ಬೆಸ್ಟಿನ್ ರಾಯ್ ಎಂಬ ವಿದ್ಯಾರ್ಥಿ ಎರಡು ವರ್ಷಗಳಿಂದ ಬೆಂಗಳೂರಿನಲ್ಲಿದ್ದು, ಕೆಂಗೇರಿಯಲ್ಲಿ ಅಪಾರ್ಟ್‌ಮೆಂಟ್ ಬಾಡಿಗೆಗೆ ಪಡೆದಿದ್ದ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Paramedical student arrested for selling drugs in Bengaluru

ಅವನು ವಿವಿಧ ಕಾಲೇಜು ವಿದ್ಯಾರ್ಥಿಗಳು ಮತ್ತು ಯುವಕರಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದನು. ಈ ರೀತಿಯಲ್ಲಿ ಆತನ ನಿಯಮಿತವಾಗಿ ಡ್ರಗ್ಸ್ ಸರಬರಾಜು ಮಾಡುವ ಜಾಲವನ್ನು ನಿರ್ಮಿಸಿದ್ದನು. ಆತ ನಗರದ ಹಲವಾರು ಕಡೆಗಳಲ್ಲಿ ಕಾಲೇಜುಗಳ ಸುತ್ತ ಡ್ರಗ್ಸ್‌ ಮಾರಾಟದಲ್ಲಿ ಸಕ್ರಿಯನಾಗಿದ್ದನು. ಅಲ್ಲದೆ ಔಷಧಗಳನ್ನು ಮಾರಾಟ ಮಾಡಲು ಹೆಚ್ಚಿನ ವಿಶ್ವವಿದ್ಯಾಲಯಗಳಿಗೆ ಭೇಟಿ ನೀಡುತ್ತಿದ್ದನು ಎಂದು ತಿಳಿದು ಬಂದಿದೆ.

ಸ್ವತಃ ಬೆಸ್ಟಿನ್‌ ರಾಯ್ ಮಾದಕ ವ್ಯಸನಿಯಾಗಿದ್ದು, ವಿದ್ಯಾರ್ಥಿಗಳಿಗಾಗಿ ನಿಷಿದ್ಧ ವಸ್ತುಗಳನ್ನು ಸಂಗ್ರಹಿಸಿದ್ದನು. ಇದೇ ಮೊದಲ ಬಾರಿಗೆ ಆತನನ್ನು ಬಂಧಿಸಲಾಗಿದೆ. ಆತ ಮಾದಕ ದ್ರವ್ಯಗಳನ್ನು ಪಡೆದ ಮೂಲ ಇನ್ನೂ ಪತ್ತೆಯಾಗಿಲ್ಲ. ಈ ಸಂಬಂಧ ಬಸವನಗುಡಿ ಪೊಲೀಸರು ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (ಎನ್‌ಡಿಪಿಎಸ್) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ದಕ್ಷಿಣ ಆಫ್ರಿಕಾದ ಪ್ರಜೆ ಬಂಧನ:

ಕಾಡುಗೋಡಿಯಲ್ಲಿ ಕೊಕೇನ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ದಕ್ಷಿಣ ಆಫ್ರಿಕಾದ ಪ್ರಜೆಯೊಬ್ಬನನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

ಕಾಡುಗೋಡಿ ನಿವಾಸಿಯಾಗಿದ್ದ ಮಾರ್ಕ್ ಎಂಬಾತನಿಂದ 1 ಲಕ್ಷ ಮೌಲ್ಯದ 70 ಗ್ರಾಂ ಕೊಕೇನ್ ಹಾಗೂ ಸ್ಕೂಟರ್ ಜಪ್ತಿ ಮಾಡಿದ್ದಾರೆ. ಮಾರ್ಕ್ ಬ್ಯುಸಿನೆಸ್ ವೀಸಾದ ಮೇಲೆ ಬೆಂಗಳೂರಿನಲ್ಲಿದ್ದನು. ಅವನು ಇಲ್ಲಿ ತ್ವರಿತವಾಗಿ ಹಣ ಗಳಿಸಲು ಡ್ರಗ್ಸ್ ಮಾರಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಕಾಡುಗೋಡಿ ವ್ಯಾಪ್ತಿಯಲ್ಲಿ ಮಾರ್ಕ್‌ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿಯ ಮಹಿಳಾ ಮತ್ತು ಮಾದಕ ದ್ರವ್ಯ ದಳದ ಸಿಬ್ಬಂದಿ ಮಾರ್ಕ್ ನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಆತ ಡ್ರಗ್ಸ್ ಸಂಗ್ರಹಿಸಲು ಡಿಕ್ಷನರಿಯಂತೆ ಕಾಣುವಂತೆ ಮಾರ್ಪಡಿಸಿದ ಲಾಕರ್ ಅನ್ನು ಬಳಸುತ್ತಿದ್ದನು. ಈ ಮೂಲಕ ಕೊಕೇನ್ ಸಂಗ್ರಹಿಸುವ ಸಣ್ಣ ಜಾಲವನ್ನು ಸೃಷ್ಟಿಸಿದ್ದನು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (ಎನ್‌ಡಿಪಿಎಸ್) ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+