ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಧು ಕಣಕ್ಕಿಳಿದರೆ ಕಾಂಗ್ರೆಸ್ ದುರ್ಬಲ ಅನ್ನೋಕಾಗಲ್ಲ: ಪರಮೇಶ್ವರ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 15: ಶಿವಮೊಗ್ಗ ಹಾಗೂ ಬಳ್ಳಾರಿಯಲ್ಲಿ ಅಭ್ಯರ್ಥಿಗಳ ನಿರ್ಧಾರ ಕಾಂಗ್ರೆಸ್‌ ರಣನೀತಿಯಲ್ಲೊಂದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದರು.

ಶಿವಮೊಗ್ಗ ಉಪ ಚುನಾವಣೆ : ನಾಮಪತ್ರ ಸಲ್ಲಿಸಿದ ಬಿ.ವೈ.ರಾಘವೇಂದ್ರ ಶಿವಮೊಗ್ಗ ಉಪ ಚುನಾವಣೆ : ನಾಮಪತ್ರ ಸಲ್ಲಿಸಿದ ಬಿ.ವೈ.ರಾಘವೇಂದ್ರ

ವಿಧಾನಸೌಧದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಉಗ್ರಪ್ಪ ಅವರನ್ನು ಬಳ್ಳಾರಿಯಲ್ಲಿ, ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಕಣಕ್ಕಿಳಿಸಿದ್ದೇವೆ. ಇದು ಚುನಾವಣೆ ರಣನೀತಿ. ಇದನ್ನು‌ಕಾಂಗ್ರೆಸ್‌ ದುರ್ಬಲ‌ ಎಂದು ವ್ಯಾಖ್ಯಾನಿಸುವುದು ಸರಿಯಲ್ಲ. ಈ ರಣನೀತಿಯ ಹಿಂದಿನ‌ ಉದ್ದೇಶ ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಿಳಿಯಲಿದೆ ಎಂದರು.

ಮೈಸೂರು ದಸರಾ - ವಿಶೇಷ ಪುರವಣಿ

ಮಂಡ್ಯ ಹಾಗೂ ರಾಮನಗರದಲ್ಲಿ ಉಪಯುಕ್ತ ಕೆಲಸಕ್ಕೆ ಹೊಂದಾಣಿಕೆ ಮುಖ್ಯವಾಗಿದೆ. ಹೀಗಾಗಿ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ ಬಾಲಕೃಷ್ಣ ಬಿಜೆಪಿ ಸೇರ್ಪಡೆ ವಿಚಾರ ತಿಳಿದಿಲ್ಲ. ಅವರು ನಮ್ಮ ಸಿದ್ಧಾಂತ ಒಪ್ಪಿ ನಮ್ಮ ಪಕ್ಷಕ್ಕೆ ಬಂದಿದ್ದಾರೆ ಎಂದರು.

ಮಧ್ಯರಾತ್ರಿಯೇ ದೇವೇಗೌಡರಿಂದ ಬಿ ಫಾರಂ ಪಡೆದ ಮಧು ಬಂಗಾರಪ್ಪ ಮಧ್ಯರಾತ್ರಿಯೇ ದೇವೇಗೌಡರಿಂದ ಬಿ ಫಾರಂ ಪಡೆದ ಮಧು ಬಂಗಾರಪ್ಪ

Parameshwar defends Congress is stronger in Shimoga

ಮೊದಲು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕಿಮ್ಮನೆ ರತ್ನಾಕರ, ಕಾಗೋಡು ತಿಮ್ಮಪ್ಪ ಕಣಕ್ಕಿಳಿಯುತ್ತಾರೆ ಎನ್ನಲಾಗಿದ್ದು ಬಳಿಕ ಅವರು ಚುನಾವಣೆಯಿಂದ ಹಿಂದೆ ಸರಿದರು ಆಗ ಅನಿವಾರ್ಯವಾಗಿ ಜೆಡಿಎಸ್ ನಿಂದ ಒಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕಾಯಿತು.

ಶಿವಮೊಗ್ಗ ಲೋಕಸಭಾ ಕಣದಲ್ಲಿ ಮಾಜಿ ಸಿಎಂಗಳ ಮಕ್ಕಳ ಕಾದಾಟ ಶಿವಮೊಗ್ಗ ಲೋಕಸಭಾ ಕಣದಲ್ಲಿ ಮಾಜಿ ಸಿಎಂಗಳ ಮಕ್ಕಳ ಕಾದಾಟ

ಹಾಗಾಗಿ ಜೆಡಿಎಸ್‌ನಿಂದ ಮಧು ಬಂಗಾರಪ್ಪ ಅವರನ್ನು ಚುನಾವಣಾ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಯಿತು. ಇದರಿಂದ ಕಾಂಗ್ರೆಸ್ ದುರ್ಬಲವಾಗುತ್ತದೆ ಎಂದು ಹೇಳುವುದು ತಪ್ಪು ಎಂದು ಹೇಳಿದರು.

English summary
Deputy chief minister Dr.G.Parameshwara has defended the Congress party decision to filed Madhu Bangarappa of JDS in Shivamogga parliamentary constituency in by election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X