ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿ ನೇಣಿಗೆ ಶರಣು

ಮೃತ ಕೈದಿಯನ್ನು ರಾಜೇಶ್ ಮುಖ್ಯ(26) ಎಂದು ಗುರುತಿಸಲಾಗಿದೆ. ಭಾನುವಾರ ಬೆಳಗ್ಗೆ 4 ಗಂಟೆ ಸುಮಾರಿಗೆ ರಾಜೇಶ್ ಜೈಲಿನ ಶೌಚಾಲಯಕ್ಕೆ ತೆರಳಿ ಕಿಟಕಿಯ ಸರಳಿಗೆ ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಣ್ಣೂರು ಪೊಲೀಸರು ಈತನನ್ನು ಶನಿವಾರ ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಈತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಶನಿವಾರ ರಾತ್ರಿ 7 ಗಂಟೆ ಸುಮಾರಿಗೆ ಈತನನ್ನು ಜೈಲಿಗೆ ತಂದು ಬಿಡಲಾಗಿತ್ತು.
ಉತ್ತರ ಭಾರತ ಮೂಲದವರಾದ ರಾಜೇಶ್, ಭಾನುವಾರ ಬೆಳಗ್ಗೆ ಕಾರಾಗೃಹದ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಜೇಶ್ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಕೇಂದ್ರ ಕಾರಾಗೃಹದಲ್ಲಾದ ಈ ಆತ್ಮಹತ್ಯೆ ಅನೇಕ ಅನುಮಾನಗಳನ್ನು ಹುಟ್ಟುಹಾಕಿದೆ. ಕೈದಿಯ ಆತ್ಮಹತ್ಯೆಗೆ ಕಾರಣವೇನೆಂಬುದು ತಿಳಿದುಬಂದಿಲ್ಲ. ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಕೆಲವು ದಿನಗಳ ಹಿಂದೆ ಸೈಕೋ ಕಿಲ್ಲರ್ ಜಯಶಂಕರ್ ಜೈಲಿನಿಂದ ಸಿನೀಮಯ ರೀತಿಯಲ್ಲಿ ಪರಾರಿಯಾಗಿದ್ದ ನಂತರ, ಪೊಲೀಸರು ಆತನನ್ನು ಬಂಧಿಸಿದ್ದರು. ನಂತರ ಜೈಲಿನಲ್ಲಿ ಭಾರೀ ಬಂದೋಬಸ್ತ್ ಏರ್ಪಡಿಸಲಾಗಿದೆ. ಆದರೂ, ಖೈದಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. (ಬೆಂಗಳೂರಿನಿಂದ ಸೈಕೋ ಕಿಲ್ಲರ್ ಜೈ ಶಂಕರ್ ಪರಾರಿ)












Click it and Unblock the Notifications