ಹೇಗಿದೆ ನೋಡಿ ಬಿಜೆಪಿಯ ಕರ್ನಾಟಕ ಪರಿವರ್ತನಾ ಯಾತ್ರೆಯ ಐಷಾರಾಮಿ ಬಸ್ಸು!
Recommended Video

ಬೆಂಗಳೂರು, ನವೆಂಬರ್ 02: 2018 ರ ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕರ್ನಾಟಕ ಬಿಜೆಪಿ ಆರಂಭಿಸಿರುವ ಪರಿವರ್ತನಾ ಯಾತ್ರೆಗೆ ಬೆಂಗಳೂರಿನಲ್ಲಿ ಇಂದು(ನ.2) ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅಧಿಕೃತ ಚಾಲನೆ ನೀಡಲಿದ್ದಾರೆ.
ಚಿತ್ರಗಳು: ರಾಜ್ಯದಲ್ಲಿ ಹೊಸ ಅಲೆ ಎಬ್ಬಿಸಲಿರುವ ಬಿಜೆಪಿಯ ಪರಿವರ್ತನಾ ಯಾತ್ರೆ
ಒಟ್ಟು 75 ದಿನಗಳ ಕಾಲ ನಡೆಯಲಿರುವ ಪರಿವರ್ತನಾ ಯಾತ್ರೆ ಬೆಂಗಳೂರಿನ ತುಮಕೂರು ರಸ್ತೆಯಲ್ಲಿರುವ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನ.2 ರಿಂದ ಆರಂಭವಾಗಿ ಇಡೀ ರಾಜ್ಯ ಸುತ್ತಿ ಜ.28 ರಂದು ಮತ್ತೆ ರಾಜಧಾನಿ ಬೆಂಗಳೂರಿಗೆ ವಾಪಸಾಗಿ ಮುಕ್ತಾಯಗೊಳ್ಳಲಿದೆ.
ಪರಿವರ್ತನಾ ಯಾತ್ರೆಯ ಪ್ರಮುಖ ಆಕರ್ಷಣೆ ಎಂದರೆ ಕೇವಲ 19 ದಿನಗಳಲ್ಲಿ ನಿರ್ಮಿಸಲಾದ ಐಷಾರಾಮಿ ಬಸ್ಸು! ಪರಿವರ್ತನಾ ಯಾತ್ರೆಗಾಗಿಯೇ ನಿರ್ಮಿಸಲಾದ ಈ ಬಸ್ಸು ನವೆಂಬರ್ 1 ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಗೆ ಬಂದಿದೆ.
ಕೇಸರಿ ಬಣ್ಣದ ಈ ಐಷಾರಾಮಿ ಬಸ್ಸಿನ ವಿಶೇಷತೆಗಳ ಕುರಿತ ಕೆಲವು ಮಾಹಿತಿ ನಿಮಗಾಗಿ ಇಲ್ಲಿದೆ...

ಐಷಾರಾಮಿ ಬಸ್ಸಿನ ವೆಚ್ಚ ಬರೋಬ್ಬರಿ 90 ಲಕ್ಷ ರೂ.
ಪರಿವರ್ತನಾ ಯಾತ್ರೆಗೆ ಬಳಸುತ್ತಿರುವ ಬಸ್ಸನ್ನು ಕೇವಲ 19 ದಿನಗಳಲ್ಲಿ ತಯಾರಿಸಲಾಗಿದ್ದು, ಬಸ್ ನಿರ್ಮಾಣಕ್ಕೆ ತಗುಲಿದ ವೆಚ್ಚ ಬರೋಬ್ಬರಿ 90 ಲಕ್ಷ ರೂ. 70 ಕ್ಕೂ ಹೆಚ್ಚು ಕೆಲಸಗಾರರು ಹಗಲಿರುಳೂ ಶ್ರಮಿಸಿ ಕೇವಲ 19 ದಿನಗಳಲ್ಲಿ ಬಸ್ ಅನ್ನು ಪರಿವರ್ತನಾ ಯಾತ್ರೆಗಾಗಿ ಸಿದ್ಧಗೊಳಿಸಿದ್ದಾರೆ.

ಅತ್ಯಾಧುನಿಕ ಸೌಲಭ್ಯ
ಪ್ರಯಾಣಿಕರಿಗೆ ಯಾವುದೇ ರೀತಿಯ ಅನಾನುಕೂಲತೆಯಾಗದ ರೀತಿಯಲ್ಲಿ ಸೀಟುಗಳನ್ನು ಸಿದ್ಧಪಡಿಸಲಾಗಿದ್ದು, ಪ್ರಚಾರದ ನಂತರ ವಿಶ್ರಾಂತಿ ಪಡೆಯಲು ಅನುಕೂಲಕರವಾಗಿದೆ. ಹಾಗೆಯೇ ಬಸ್ಸಿನಲ್ಲಿ ಟಾಯ್ಲೆಟ್, ಟಿವಿ, ಮೈಕ್ ಸೇರಿದಂತೆ ಹಲವು ಸೌಲಭ್ಯಗಳಿವೆ.

ಕೇಸರಿ ಬಣ್ಣದ ರಥ
ಬಸ್ಸು ಕೇಸರಿ ಬಣ್ಣದಿಂದ ಕಂಗೊಳಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ರಾಜ್ಯಾಧ್ಯಕ್ಷ ಯಡಿಯೂರಪ್ಪನವರ ಚಿತ್ರಗಳು ಬಸ್ಸಿನಲ್ಲಿ ರಾರಾಜಿಸುತ್ತಿದೆ.

ಕನ್ನಡಿಗರ ಭರವಸೆಯ ಸರ್ಕಾರ
"ಕನ್ನಡಿಗರ ಭರವಸೆಯ ಸರ್ಕಾರಕ್ಕೆ ನಾವು ಬದ್ಧ" ಎಂಬ ಒಕ್ಕಣೆಯ ಜೊತೆಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಯಾವೆಲ್ಲ ಕಲ್ಯಾಣ ಕಾರ್ಯಗಳಿಗೆ ಆದ್ಯತೆ ನೀಡುತ್ತದೆ ಎಂಬ ಬಗ್ಗೆಯೂ ಕೆಲವು ಸಾಲುಗಳನ್ನು ಬಸ್ಸಿನಲ್ಲಿ ಬರೆಯಲಾಗಿದೆ.

ಪರಿವರ್ತನೆಗಾಗಿ ಯಾತ್ರೆ!
2018 ರ ವಿಧಾನಸಭಾ ಚುನಾವಣೆಗಾಗಿ ಭರದ ಸಿದ್ಧತೆ ನಡೆಸುತ್ತಿರುವ ಬಿಜೆಪಿಯ ಈ ರಥಯಾತ್ರೆ ಕರ್ನಾಟಕದ ಹಳ್ಳಿ ಹಳ್ಳಿಗಳನ್ನೂ ಸಂಪರ್ಕಿಸಲಿದೆ. ಇನ್ನು ಎರಡೂವರೆ ತಿಂಗಳು ಕೆಎ 01, ಎಎಚ್ 4545 ನಂಬರಿನ ಐಶಶಾರಾಮಿ ಬಸ್ಸು ರಸ್ತೆ ರಸ್ತೆಗಳಲ್ಲಿ ಕಣ್ಣು ಕುಕ್ಕಿದರೆ ಅಚ್ಚರಿಯೇನಿಲ್ಲ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Annamalai: ಅಣ್ಣಾಮಲೈ ಮತ್ತು ರಾಜಕೀಯ ಉನ್ಮಾದ: ಶಿವಕುಮಾರ್ ಮೆಣಸಿನಕಾಯಿ ಬರಹ -
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್












Click it and Unblock the Notifications