ಕರ್ನಾಟಕದಲ್ಲಿ ಮತ್ತೊಂದು ಮುಖ್ಯ ಚುನಾವಣೆಯತ್ತ ಪಕ್ಷಗಳ ಕಣ್ಣು!
BBMP: ಕರ್ನಾಟಕದಲ್ಲಿ ಶನಿವಾರವಷ್ಟೇ ಮೂರು ಪ್ರಮುಖ ವಿಧಾನಸಭಾ ಕ್ಷೇತ್ರಗಳ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಎಲ್ಲಾ ರಾಜಕೀಯ ಲೆಕ್ಕಾಚಾರಗಳನ್ನು ಈ ಚುನಾವಣೆಯ ಫಲಿತಾಂಶ ತಲೆಕೆಳಗೆ ಮಾಡಿದೆ. ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಉಪ ಚುನಾವಣೆ ಮುಗಿದ ಬೆನ್ನಲ್ಲೇ ಇದೀಗ ಮತ್ತೊಂದು ಪ್ರಮುಖ ಚುನಾವಣೆಯ ಚರ್ಚೆ ಶುರುವಾಗುತ್ತಿದೆ.
ಅದೇ ಬಿಬಿಎಂಪಿ ( ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಚುನಾವಣೆ. ಕಳೆದ ನಾಲ್ಕು ವರ್ಷಗಳಿಂದ ಈ ಚುನಾವಣೆಯ ನಿರೀಕ್ಷೆಯಲ್ಲಿ ಬೆಂಗಳೂರಿನ ಜನತೆ ಹಾಗೂ ರಾಜಕೀಯ ನಾಯಕರು ಇದ್ದಾರೆ. ಈ ಚುನಾವಣೆಗೆ ಮೂರ್ಹತ ಕೂಡಿಬರುವ ನಿರೀಕ್ಷೆ ಹೆಚ್ಚಾಗಿದೆ. ಅದಕ್ಕೆ ಕಾರಣವೇನು ಎನ್ನುವ ವಿವರ ಇಲ್ಲಿದೆ.
ಕರ್ನಾಟಕದ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅದ್ಭುತವಾದ ಯಶಸ್ಸು ಗಳಿಸಿದೆ. ಕರ್ನಾಟಕದಲ್ಲಿ ಕಳೆದ ಮೂರು ತಿಂಗಳಿನಿಂದಲೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹಲವು ಗಂಭೀರ ಆರೋಪಗಳು ಕೇಳಿ ಬಂದಿದ್ದವು. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಎಫ್‌ಐಆರ್ ಸಹ ದಾಖಲಾಗಿತ್ತು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಹಳೇ ಹುಬ್ಬಳ್ಳಿಯಲ್ಲಿ ಕೇಸ್ ವಾಪಸ್ ಪಡೆದಿದ್ದು, ವಕ್ಫ್ ಆಸ್ತಿ ವಿವಾದ ಹಾಗೂ ಬಿಪಿಎಲ್ ಕಾರ್ಡ್‌ಗಳ ರದ್ದು ವಿಚಾರ ಸೇರಿದಂತೆ ಹಲವು ವಿಷಯಗಳು, ವಿವಾದ ಹಾಗೂ ಆರೋಪಗಳು ಕೇಳಿ ಬಂದಿದ್ದವು. ಇದೆಲ್ಲ ಈ ಉಪ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆ ಎಂದೇ ಅಂದಾಜಿಸಲಾಗಿತ್ತು. ಆದರೆ, ಅದೆಲ್ಲವೂ ಸುಳ್ಳಾಗಿದೆ.
ಈಗ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆದ್ದಿದೆ. ಈ ಗೆಲುವು ಮುಂದೆ ಬಿಬಿಎಂಪಿ ಚುನಾವಣೆಗೆ ಹೋಗುವುದಕ್ಕೆ ಹಾಗೂ ಅದಕ್ಕೆ ಬೇಕಾದ ಸಿದ್ಧತೆಗಳನ್ನು ಫಾಸ್ಟ್ ಮಾಡಲಿಕ್ಕೆ ಸಹಕಾರಿಯಾಗಲಿದೆ ಎಂದೇ ಹೇಳಲಾಗುತ್ತಿದೆ. ಬಿಬಿಎಂಪಿ (ಬೆಂಗಳೂರು ಮಹಾನಗರ ಪಾಲಿಕೆ) ಚುನಾವಣೆ ನಡೆಸಿ ನಾಲ್ಕು ವರ್ಷಗಳೇ ಕಳೆದಿವೆ. ಕಳೆದ ನಾಲ್ಕು ವರ್ಷಗಳಿಂದ ಬೆಂಗಳೂರಲ್ಲಿ ಮೇಯರ್, ಉಪ ಮೇಯರ್ ಹಾಗೂ ಪಾಲಿಕೆಯ ಸದಸ್ಯರು ಇಲ್ಲದೆ ಅಧಿಕಾರಿಗಳೇ ಆಡಳಿತ ನಡೆಸುತ್ತಿದ್ದಾರೆ.

ಪಾಲಿಕೆಯಲ್ಲಿ ಅಧಿಕಾರಿಗಳೇ ಆಡಳಿತ ನಡೆಸುತ್ತಿರುವುದು ಹಲವು ಸಮಸ್ಯೆಗಳಿಗೆ ಕಾರಣವಾಗಿದೆ. ಪಾಲಿಕೆಯ ಸದಸ್ಯರು (ಕೌನ್ಸಿಲರ್) ಇಲ್ಲದೆ ಸಮಸ್ಯೆಗಳನ್ನು ಯಾರ ಬಳಿ ಹೇಳಿಕೊಳ್ಳಬೇಕು ಎಂದು ತಿಳಿಯದೆ ಜನ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರಿನ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸೋತ ಮೇಲೆ ಬಿಬಿಎಂಪಿ ಚುನಾವಣೆ ಸದ್ಯಕ್ಕೆ ನಡೆಯುವುದು ಡೌಟ್ ಅಂತಲೇ ಹೇಳಲಾಗಿತ್ತು.
ಇನ್ನು ಪಾಲಿಕೆಯ ಚುನಾವಣೆ ಹಲವು ಕಾರಣಕ್ಕೆ ಮುಂದೂಡಲಾಗುತ್ತಿದೆ. ವಾರ್ಡ್‌ಗಳ ಸಂಖ್ಯೆ, ವಾರ್ಡ್‌ಗಳ ಮರು ವಿಂಗಡಣೆ ಹಾಗೂ ಮೀಸಲಾತಿ ಪಟ್ಟಿ ಸೇರಿದಂತೆ ಹಲವು ವಿಷಯಗಳಲ್ಲಿ ಗೊಂದಲ ಹಾಗೂ ಸ್ಪಷ್ಟತೆ ಕೊರತೆಯಿಂದ ಸಮಸ್ಯೆ ಮುಂದುವರಿದಿದೆ. ಪಾಲಿಕೆಯ ಚುನಾವಣೆ ನಡೆಸಬೇಕು ಎಂದು ಈ ಹಿಂದೆ ಕಾಂಗ್ರೆಸ್ ಕೌನ್ಸಿಲರ್‌ಗಳು ಕೋರ್ಟ್ ಮೆಟ್ಟಿಲೇರಿದ್ದೂ ಇದೆ. ಆದರೆ, ಇದೀಗ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿದ್ದರೂ, ಪಾಲಿಕೆ ಚುನಾವಣೆಯ ಗೊಂದಲಗಳನ್ನು ಬಗೆಹರಿಸುವ ಮನಸ್ಸು ಮಾಡ್ತಿಲ್ಲ.
-
ಕರ್ನಾಟಕದ ನೀರಾವರಿ ಯೋಜನೆಗೆ ಆಂಧ್ರ ಅಡ್ಡಗಾಲು: ಸಿಡಿದೆದ್ದ ಡಿಸಿಎಂ ಡಿ.ಕೆ.ಶಿವಕುಮಾರ್ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ












Click it and Unblock the Notifications