• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಯಾರ್ರಿ ಅವನು ಮುನಿರತ್ನ? ನಮಗೆ ಗಾಡ್‌ಫಾದರ್‌ ಆಗೋದಕ್ಕೆ!

|

ಬೆಂಗಳೂರು, ಅ. 29: ಜೆಡಿಎಸ್ ಬಗ್ಗೆ ಯಾವತ್ತಿಗೂ ಲಘುವಾಗಿ ಮಾತನಾಡಬೇಡಿ, 2018ರಲ್ಲಿ ನನ್ನ ಬಗ್ಗೆ ಲಘುವಾಗಿ ಮಾತನಾಡಿ ಬಳಿಕ ನನ್ನ ಮನೆ ಬಾಗಿಲಿಗೆ ಬಂದು ನೀವೇ ಮುಖ್ಯಮಂತ್ರಿ ಆಗಿ ಎಂದು ಬೇಡಿಕೊಂಡಿರುವುದು ನೆನಪಿರಲಿ. ಈ ಪಕ್ಷಕ್ಕೆ ಲಕ್ಷಾಂತರ ಬಡವರ ಶ್ರೀರಕ್ಷೆ ಇದೆ ಎಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಮೇಲೆ ವಾಗ್ದಾಳಿ ನಡೆಸಿದರು.

ರಾಜರಾಜೇಶ್ವರಿ ನಗರ ವಾರ್ಡ್‌ನ ಬಯಲು ರಂಗಮಂದಿರದಲ್ಲಿ ಜೆಡಿಎಸ್‌ ಅಭ್ಯರ್ಥಿ ವಿ. ಕೃಷ್ಣಮೂರ್ತಿ ಅವರ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಿಖಿಲ್‌ಗೆ ಮುನಿರತ್ನ ನಿಮ್ಮ ಗಾಡ್‌ಫಾದರ್ ಅಲ್ವಾ ಎಂದು ಕೇಳಿದ್ರಂತೆ, ಅವನ್ಯಾರು ನಮಗೆ ಗಾಡ್‌ಫಾದರ್‌ ಆಗೋದಕ್ಕೆ. ಯಾವತ್ತಿದ್ದರೂ ನಮ್ಮ ಗಾಡ್‌ಫಾದರ್ ಅಂದರೆ ಜನಗಳೆ ಎಂದರು. ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ವಿರುದ್ಧ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.

ನಮ್ಮದು 10 ಪರ್ಸೆಂಟ್ ಸರ್ಕಾರ ಅಲ್ಲ

ನಮ್ಮದು 10 ಪರ್ಸೆಂಟ್ ಸರ್ಕಾರ ಅಲ್ಲ

ಸಿದ್ದರಾಮಯ್ಯ ಸರಕಾರವನ್ನು ಪ್ರಧಾನಿ ಮೋದಿ ಬಂದು 10 ಪರ್ಸೆಂಟ್ ಸರಕಾರ ಎಂದರು, ಕಾಂಗ್ರೆಸ್‌ನವರು ಬಿಜೆಪಿ ಸರಕಾರವನ್ನು 10 ಪರ್ಸೆಂಟ್ ಗವರ್ನಮೆಂಟ್ ಎಂದರು. ಆದರೆ, ನಮ್ಮ ಸರಕಾರವನ್ನು ಯಾರೂ ಪರ್ಸೆಂಟೇಜ್ ಸರಕಾರ ಎಂದಿಲ್ಲ. ಬೆಂಗಳೂರು ಹಾಗೂ ಮೈಸೂರು ಹೊರವಲಯದ ಅಭಿವೃದ್ಧಿಗಾಗಿ 2006ರಲ್ಲಿ 25 ಸಾವಿರ ಕೋಟಿ ರೂ. ಅನುದಾನ ನೀಡಿದ್ದೆ. ಅದರ ಪ್ರತಿಫಲವೇ ಆರ್‌ಆರ್‌ ನಗರದಲ್ಲಿ ಇಷ್ಟೊಂದು ಅಭಿವೃದ್ಧಿ ಕಾರ್ಯಗಳು ಆಗಿವೆ ಎಂದರು.

ಜನರ ಜೀವನಕ್ಕೆ ದೀಪ ಬೆಳಗಿಸಲಿಲ್ಲ

ಜನರ ಜೀವನಕ್ಕೆ ದೀಪ ಬೆಳಗಿಸಲಿಲ್ಲ

ಇವತ್ತು ಮೋದಿಯವರು ಭಾರತವನ್ನು ಬಾಂಗ್ಲಾದೇಶದ ಜೊತೆ ತಲಾ‌ ಆದಯದಲ್ಲಿ ಪೈಪೋಟಿ ಮಾಡುವ ಪರಿಸ್ಥಿತಿಗೆ ತಂದಿದ್ದಾರೆ. ಕೊರೊನಾ ಕಾಲದಲ್ಲಿ ದೀಪ ಬೆಳಗಿಸಿ, ಚಪ್ಪಾಳೆ ತಟ್ಟಿ ಎಂದು ಮೋದಿ ಹೇಳಿದರು. ಆದರೆ, ಬಿಜೆಪಿಯವರು ತಮ್ಮ ಮನೆಗೆ ದೀಪ ಬೆಳಗಿಸಿಕೊಂಡರೆ ಹೊರತು ಜನರ ಜೀವನಕ್ಕೆ ದೀಪ ಬೆಳಗಿಸಲಿಲ್ಲ ಎಂದು ಕೇಂದ್ರ ಸರಕಾರದ ವಿರುದ್ಧ ಕಿಡಿಕಾರಿದರು.

ಬೆನ್ನಿಗೆ ಚೂರಿ ಹಾಕಿದ ಮುನಿರತ್ನ

ಬೆನ್ನಿಗೆ ಚೂರಿ ಹಾಕಿದ ಮುನಿರತ್ನ

ಇನ್ನು, ಜೆಡಿಎಸ್‌ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಮಾತನಾಡಿ, ಕುಮಾರಣ್ಞನವರು ಈ ಕ್ಷೇತ್ರಕ್ಕೆ 450 ಕೋಟಿ ರೂ. ಅನುದಾನ ನೀಡಿದರೂ ಮುನಿರತ್ನ ಪಕ್ಷ ಬದಲಾಯಿಸಿ, ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದ್ದಾರೆ. ಕಳೆದ ಚುನಾವಣೆಯಲ್ಲಿ ರಾಮಚಂದ್ರಪ್ಪ ಅವರ ಮುಖ ನೋಡಿ ಜೆಡಿಎಸ್‌ಗೆ 65,000 ವೋಟ್‌ ಬಿದ್ದಿದ್ದಿಲ್ಲ. ರಾಮಚಂದ್ರಪ್ಪ ಅಂತ ಹೆಸರು ಇಟ್ಕೊಂಡು ರಾವಣನ ಕೆಲಸ ಅವರು ಮಾಡಿದ್ದಾರೆ. ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಟಿಕೆಟ್ ನೀಡಿರುವುದು ತಪ್ಪಾ..? ಎಂದು ಪ್ರಶ್ನಿಸಿದ ಅವರು, ಮಾರಾಟ ಆಗಿರೋರು ನಾವಲ್ಲ. ಬಿಜೆಪಿ ಮತ್ತು ಕಾಂಗ್ರೆಸ್‌ನವರು ಎಂದು ಹೇಳಿದರು.

ದೇವೇಗೌಡರಿಂದ ಬೆಂಗಳೂರಿಗೆ ಹೈಟೆಕ್ ಸ್ವರ್ಶ

ದೇವೇಗೌಡರಿಂದ ಬೆಂಗಳೂರಿಗೆ ಹೈಟೆಕ್ ಸ್ವರ್ಶ

ಇದೇ ಸಂದರ್ಭದಲ್ಲಿ ಮಾತನಾಡಿದ ಮಳವಳ್ಳಿ ಶಾಸಕ ಅನ್ನದಾನಿ, ಮಾಜಿ ಪ್ರಧಾನಿ ದೇವೇಗೌಡರು ಬೆಂಗಳೂರಿಗೆ ಹೈಟೆಕ್ ಸ್ವರ್ಶ ನೀಡಿದ್ದಾರೆ. ನಮ್ಮ ರಾಜ್ಯದಲ್ಲಿ ಕುಮಾರಣ್ಣನಿಗೆ ಯಾರು ಸಾಟಿಯಿಲ್ಲ. ಅವರು ನೀಡಿದಂತಹ ಯೋಜನೆಗಳನ್ನು ಮತ್ತಾರಿಗೂ ನೀಡುವುದಕ್ಕೆ ಆಗಲ್ಲ. ತಮ್ಮನ್ನೇ ತಾವು ಮಾರಿಕೊಂಡವರು ಮುಂದೊಂದು ದಿನ ರಾಜ್ಯ ಹಾಗೂ ಆರ್‌ಆರ್‌ ನಗರ ಕ್ಷೇತ್ರವನ್ನು ಮಾರುವುದಿಲ್ಲ ಎಂಬುದಕ್ಕೆ ಏನು ಗ್ಯಾರಂಟಿ ಎಂದು ಪ್ರಶ್ನಿಸಿದರು.

English summary
The party has the protection of millions of poor people, said former CM HD Kumaraswamy indirectly led a barrage over former CM Siddaramaiah. HDK campaigned for in JDS candidate V. Krishnamurthy in Rajarajeshwari Nagar. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X