ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಗಾಂಜಾ ಸಾಗಿಸುತ್ತಿದ್ದವನ ಬಂಧನ
ಬೆಂಗಳೂರು, ಅಕ್ಟೋಬರ್ 19 : ತನ್ನ ಬ್ಯಾಗ್ ನಲ್ಲಿ ಗಾಂಜಾ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ.
ದೋಹಾಗೆ ಪ್ರಯಾಣ ಮಾಡಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ ಕೇರಳ ಮೂಲದ ಪೂಲಪರಂಬಿ ಹಂಸ ಮೊಹಮ್ಮದ್ (31) ಎನ್ನುವಾತನ ಬ್ಯಾಗ್ ನಲ್ಲಿ ಸುಮಾರು ಎರಡುವರೆ ಕೆ.ಜಿ ಗಾಂಜಾ ಪತ್ತೆಯಾಗಿದೆ. ಸ್ಕ್ರೀನಿಂಗ್ ನಲ್ಲಿ ಹ್ಯಾಂಡ್ ಬ್ಯಾಗ್ ಪರಿಶೀಲನೆ ಮಾಡುತ್ತಿದ್ದಾಗ ಆತನ ಬ್ಯಾಗ್ ನಲ್ಲಿ ಗಾಂಜಾ ಇರುವುದು ಬೆಳಕಿಗೆ ಬಂದಿದೆ.

ಏರ್ ಪೋರ್ಟ್ ಪೊಲೀಸರು ಗಾಂಜಾ ಸಮೇತ ಆರೋಪಿಯನ್ನು ವಶ ಪಡಿಸಿಕೊಂಡು ಪ್ರಕರಣವನ್ನು ದಾಖಲಿಸಿಕೊಂಡಯ ತನಿಖೆ ನಡೆಸಿದ್ದಾರೆ.












Click it and Unblock the Notifications