ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೆಂಪೇಗೌಡ ಏರ್‌ಪೋರ್ಟ್‌ಗೆ ನೂತನ ರೈಲು: ಪ್ರಯಾಣಿಕರು ಏನಂದ್ರು?

|
Google Oneindia Kannada News

ಬೆಂಗಳೂರು, ಜನವರಿ 13: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರಿಗಾಗಿ ನೂತನವಾಗಿ ಆರಂಭಿಸಿರುವ ರೈಲು ಸೇವೆಗೆ ಪ್ರಯಾಣಿಕರು ಫುಲ್ ಖುಷ್ ಆಗಿದ್ದಾರೆ.

ಈ ರೈಲು ಕೇವಲ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಮಾತ್ರವಲ್ಲದೆ ಏರ್‌ಪೋರ್ಟ್‌ನಲ್ಲಿ ಕೆಲಸ ಮಾಡುವ ಸಾವಿರಾರು ಉದ್ಯೋಗಿಗಳಿಗೆ ಅನುಕೂಲವಾಗಿದೆ ಎಂದು ಪ್ರಯಾಣಿಕರೊಬ್ಬರು ಹೇಳಿದ್ದಾರೆ.

ಇಂದಿನಿಂದ ಕೆಂಪೇಗೌಡ ಏರ್‌ಪೋರ್ಟ್‌ಗೆ ರೈಲು ಸಂಚಾರ: ರೈಲು ನಿಲ್ದಾಣಕ್ಕೆ 12 ಬಸ್‌ಗಳ ಸೇವೆಇಂದಿನಿಂದ ಕೆಂಪೇಗೌಡ ಏರ್‌ಪೋರ್ಟ್‌ಗೆ ರೈಲು ಸಂಚಾರ: ರೈಲು ನಿಲ್ದಾಣಕ್ಕೆ 12 ಬಸ್‌ಗಳ ಸೇವೆ

ಕೆಎಸ್‌ಆರ್‌ನಿಂದ 10 ರೂಪಾಯಿ ಹಾಗೂ ಕಂಟೋನ್ಮೆಂಟ್‌ನಿಂದ 15 ರೂಪಾಯಿಗೆ ಹಾಲ್ಟ್ ಸ್ಟೇಷನ್ ತಲುಪಬಹುದಾಗಿದೆ.

Passengers Opinion About New Train To Kempegowda Airport

ಹಾಲ್ಟ್ ಸ್ಟೇಷನ್ ನಿಂದ ವಿಮಾನ ನಿಲ್ದಾಣಕ್ಕೆ 5 ಕಿಲೋಮೀಟರ್ ದೂರವಿದ್ದು, ಬಿಐಎಎಲ್ ನಿಂದ ಉಚಿತ ಬಸ್ ಸೇವೆ ಕಲ್ಪಿಸಲಾಗಿದೆ. ಈ ಸಂಬಂಧ ಟ್ವೀಟ್ ಮಾಡಿರುವ ರೈಲ್ವೆ ಸಚಿವ ಪಿಯೂಶ್ ಗೋಯಲ್, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಹಾಲ್ಟ್ ಸ್ಟೇಷನ್ ರೈಲು ನಿಲ್ದಾಣ ಪ್ರಯಾಣಿಕರ ಸೇವೆಗೆ ಇಂದಿನಿಂದ ಮುಕ್ತವಾಗಿದೆ.

ಇದರಿಂದ ಲಕ್ಷಾಂತರ ಜನರಿಗೆ ಅನುಕೂಲವಾಗಲಿದ್ದು, ಜನ ದಟ್ಟಣೆಯನ್ನು ಪರಿಣಾಮಕಾರಿಯಾಗಿ ತಗ್ಗಿಸುವಲ್ಲಿ ಸಹಕಾರಿಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ. ರೈಲುಗಳ ವೇಳಾಪಟ್ಟಿ, ಪ್ರಯಾಣಿಕರ ಆಸನ ವ್ಯವಸ್ಥೆ ಎಲ್ಲಾ ಮಾಹಿತಿ ರೈಲುಗಳ ವೇಳಾಪಟ್ಟಿ, ಪ್ರಯಾಣಿಕರ ಆಸನ ವ್ಯವಸ್ಥೆ ಎಲ್ಲಾ ಮಾಹಿತಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದ ಹಾಲ್ಟ್ ಸ್ಟೇಷನ್ ನಲ್ಲಿ ರೈಲುಗಳ ವೇಳಾಪಟ್ಟಿ, ಪ್ರಯಾಣಿಕರ ಆಸನ ವ್ಯವಸ್ಥೆ, ಟಿಕೆಟ್ ಕೌಂಟರ್ ನಿಂದ ಹಿಡಿದು ಎಲ್ಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

ಮುಂಜಾನೆ 4.45ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಹೊರಟ ರೈಲು 6 ಗಂಟೆ 2 ನಿಮಿಷಕ್ಕೆ ಕೆಐಎಡಿ ತಲುಪುತ್ತದೆ.

ವಿಮಾನಗಳ ದಟ್ಟಣೆ ಅವಧಿಗೆ ಅನುಗುಣವಾಗಿ ಈ ರೈಲುಗಳ ವೇಳಾಪಟ್ಟಿಯನ್ನು ಸಿದ್ದಪಡಿಸಲಾಗಿದೆ.ವಿಮಾನಗಳು ಹೆಚ್ಚು ಸಂಚರಿಸುವ ವೇಳೆ ಉಪನಗರ ರೈಲುಗಳು ಕಾರ್ಯಚರಣೆ ಮಾಡಲಿವೆ.

English summary
Newly introduced train service to Kempegowda halt station is a very good fast, eco-friendly and hassle-free mode of transport -not only to air travellers but also to thousands of people working in Airport.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X