ತುಂಬಿ ತುಳುಕುತ್ತಿದೆ ರಾಣಿ ಚೆನ್ನಮ್ಮ ಎಕ್ಸ್‌ಪ್ರೆಸ್: ಇನ್ನೊಂದು ರೈಲಿಗೆ ಆಗ್ರಹ
ಬೆಂಗಳೂರು, ಆಗಸ್ಟ್ 9 : ಬೆಂಗಳೂರು ಬೆಳಗಾವಿ ಮಧ್ಯೆ ನಿತ್ಯ ಸಂಚರಿಸುವ ರಾಣಿ ಚೆನ್ನಮ್ಮ ಎಕ್ಸ್‌ಪ್ರೆಸ್ ರೈಲಿನಲ್ಲಿ ಮಿತಿಮೀರಿದ ಪ್ರಯಾಣಿಕರ ಸಂದಣಿಯಿಂದ ತೊಂದರೆಯಾಗುತ್ತಿದ್ದು, ಮತ್ತೊಂದು ರೈಲನ್ನು ಆರಂಭಿಸಬೇಕೆಂದು ಬೆಳಗಾವಿ ಹಾಗೂ ಹುಬ್ಬಳ್ಳಿ ಭಾಗದ ಪ್ರಯಾಣಿಕರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ರೈಲ್ವೆ ಸಚಿವ ಪಿಯೂಷ್ ಗೋಯಲ್, ಸಂಸದ ಪ್ರಹ್ಲಾದ್ ಜೋಶಿ, ನೈಋತ್ಯ ರೈಲ್ವೆ ವಲಯದ ವ್ಯವಸ್ಥಾಪಕ ನಿರ್ದೇಶಕರು,ಹುಬ್ಬಳ್ಳಿ ಮತ್ತು ಬೆಂಗಳೂರು ವಿಭಾಗದ ವಿಭಾಗೀಯ ರೈಲ್ವೆ ಪ್ರಬಂಧಕರಿಗೆ ಪತ್ರ ಬರೆದಿದ್ದು, ಪ್ರತಿದಿನ ರಾತ್ರಿ ಈ ಮಾರ್ಗದಲ್ಲಿ ಮತ್ತೊಂದು ಎಕ್ಸ್‌ಪ್ರೆಸ್ ರೈಲನ್ನು ಓಡಿಸಬೇಕೆಂದು ಮನವಿ ಮಾಡಿದ್ದಾರೆ.
Sir this is everday rush in Ranichennamma exp btw Belagavi & Bengaluru. Pls provide additional overnight train to decongest this train. @drmubl @drmsbc @GMSWR @JoshiPralhad @AnanthKumar_BJP @RailwaySeva @PiyushGoyal @RailMinIndia #Hubbali #Belagavi #Bengaluru #Karnataka pic.twitter.com/LwkLKg2wUE
— Karnataka Rail Users (@KARailway) August 9, 2018
ಬೆಂಗಳೂರಿನಿಂದ ಮಹಾರಾಷ್ಟ್ರದ ಕೊಲ್ಹಾಪುರದ ನಡುವೆ ಸಂಚರಿಸುವ ಈ ಎಕ್ಸ್ ಪ್ರೆಸ್ ರೈಲು ಪ್ರತಿದಿನ ಬೆಳಗಾವಿಯಿಂದ ಹೊರಡುವಾಗಲೇ ಸಂಪೂರ್ಣವಾಗಿ ತುಂಬಿ ಹೋಗಿರುತ್ತದೆ. ಇದರಿಂದ ಮುಂದೆ ಹತ್ತುವ ಪ್ರಯಾಣಿಕರಿಗೆ ಅನನುಕೂಲ ಉಂಟಾಗುತ್ತಿದೆ. ಅದರಲ್ಲಿಯೂ ವೃದ್ಧರು, ಮಕ್ಕಳು ಸಂಚರಿಸುವುದೂ ತುಂಬಾ ಕಷ್ಟವಾಗಿದೆ ಎಂದು ಕರ್ನಾಟಕ ರೈಲ್ವೆ ಬಳಕೆದಾರರ ಸಂಘ ತಿಳಿಸಿದೆ.

ಇದರಿಂದ ಖಾಸಗಿ ಬಸ್‌ಗಳ ಮಾಫಿಯಾವನ್ನು ತಡೆಗಟ್ಟಬಹುದು ಎಂದು ಕರ್ನಾಟಕ ರೈಲ್ ಯೂಸರ್ಸ್ ಟ್ವಿಟ್ಟರ್ ಅಭಿಯಾನ ಆರಂಭಿಸಿದೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಟ್ಯಾಗ್ ಮಾಡುವ ಮೂಲಕ ಟ್ವೀಟ್ ಮಾಡಿದ್ದಾರೆ.
ಇದಕ್ಕೆ ಸಾವಿರಾರು ಪ್ರಯಾಣಿಕರು ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಬೆಂಗಳೂರಿನಿಂದ ಬೆಳಗಾವಿಗೆ ಚೆನ್ನಮ್ಮ ಎಕ್ಸ್‌ಪ್ರೆಸ್‌ನಲ್ಲಿ ತೆರಳಲು 340ರೂ. ದರವಿದೆ, ಅದೇ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ತೆರಳಲು 569 ರೂ. ತೆರಬೇಕಾಗುತ್ತದೆ.
-
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
Amrit Bharat Express 3.0: ಹೊಸ ವಿನ್ಯಾಸ, ಎಸಿ ಕೋಚ್ ಸಹಿತ ಅಮೃತ್ ಭಾರತ್ ರೈಲು ಸೇವೆ -
Railway Alert: ಚನ್ನಸಂದ್ರ ನಿಲ್ದಾಣದಲ್ಲಿ ಕಾಮಗಾರಿ, ವಿವಿಧ ರೈಲುಗಳ ಮಾರ್ಗ ಬದಲಾವಣೆ, ಸಂಚಾರ ರದ್ದು -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post











Click it and Unblock the Notifications