ಬೆಂಗಳೂರು; ಪಾಸ್‌ ಪೋರ್ಟ್‌ ಸೇವಾ ಕೇಂದ್ರ ಮೇ. 15ರಿಂದ ಆರಂಭ

ಬೆಂಗಳೂರು, ಮೇ 14 : ಬೆಂಗಳೂರು ನಗರದಲ್ಲಿ ಪಾಸ್‌ ಪೋರ್ಟ್ ಸೇವಾ ಕೇಂದ್ರಗಳು ಮೇ 15ರಿಂದ ಆರಂಭವಾಗಲಿವೆ. ಕಚೇರಿಗೆ ಬರುವವರು ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಾದೇಶಿಕ ಪಾಸ್ ಅಧಿಕಾರಿ ಭರತ್ ಕುಮಾರ್ ಕುಥಾಟಿ ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ. ಬೆಂಗಳೂರು ನಗರದ ಲಾಲ್ ಬಾಗ್ ಮತ್ತು ಮಾರತ್ತಹಳ್ಳಿ ಸೇವಾ ಕೇಂದ್ರಗಳು ಶುಕ್ರವಾರದಿಂದ ಕಾರ್ಯಾರಂಭ ಮಾಡಲಿವೆ.

ಪಾಸ್‌ ಪೋರ್ಟ್ ಕಚೇರಿಗೆ ಬರುವ ಎಲ್ಲರೂ ಮೊಬೈಲ್‌ನಲ್ಲಿ ಆರೋಗ್ಯ ಸೇತು ಅಪ್ಲಿಕೇಶನ್ ಡೌನ್ ಲೋಡ್ ಮಾಡಿಕೊಂಡಿರಬೇಕು. ಸ್ಯಾನಿಟೈಸರ್ ಅನ್ನು ತಂದಿರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Passport Seva Kendra To Open In Bengaluru On May 15

ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕಚೇರಿಯಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಪಾಡಬೇಕು ಎಂದು ಪಾಸ್ ಪೋರ್ಟ್ ಸೇವಾ ಕಚೇರಿ ಹೇಳಿದೆ.

ಕೊರೊನಾ ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಿದ ಬಳಿಕ ಪಾಸ್ ಪೋರ್ಟ್ ಅರ್ಜಿಗಳ ವಿಲೇವಾರಿ ಸ್ಥಗಿತವಾಗಿತ್ತು. ಮತ್ತೊಂದು ಕಡೆ ವಿಮಾನಗಳ ಸಂಚಾರವೂ ರದ್ದಾಗಿದೆ.

ಪ್ರಸ್ತುತ ಯಾವುದೇ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನಗಳು ಹಾರಾಟ ನಡೆಸುತ್ತಿಲ್ಲ. ವಂದೇ ಭಾರತ್ ಮಿಷನ್ ಅಡಿ ವಿದೇಶದಲ್ಲಿರುವ ಭಾರತೀಯರನ್ನು ಕರೆತರಲಾಗುತ್ತಿದೆ. ವಿವಿಧ ದೇಶಗಳಲ್ಲಿ ವೀಸಾ ನೀಡುವ ಪ್ರಕ್ರಿಯೆಯನ್ನು ಸಹ ಸ್ಥಗಿತಗೊಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+