ಕೋವಿಡ್ ವರದಿ ಕೇಳದೆ ರೋಗಿಗೆ ಚಿಕಿತ್ಸೆ ನೀಡಲು ಸೂಚನೆ

ಬೆಂಗಳೂರು, ಜುಲೈ 15 : ಕೊರೊನಾ ವೈರಸ್ ಸೋಂಕಿತ ವ್ಯಕ್ತಿಯ ಪರೀಕ್ಷಾ ವರದಿ ಬಂದಿಲ್ಲದಿದ್ದರೂ ಆಸ್ಪತ್ರೆಗೆ ಕೂಡಲೇ ದಾಖಲು ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಕೋವಿಡ್ ವರದಿ ಬರುವ ತನಕ ಕಾಯುತ್ತಿರುವುದರಿಂದ ಚಿಕಿತ್ಸೆ ಸಿಗುವುದು ತಡವಾಗುತ್ತಿದೆ.

Recommended Video

      Facebook ತ್ಯಜಿಸಿ ಇಲ್ಲ ಸೇನೆಯಿಂದ ಹೊರನಡೆಯಿರಿ | Oneindia Kannada

      ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಈ ಕುರಿತು 108 ಆರೋಗ್ಯ ಕವಚ ಅಂಬ್ಯುಲೆನ್ಸ್ ಸೇವೆಯ ನೋಡೆಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಅವರು ಸುತ್ತೋಲೆಯನ್ನು ಸಹ ಬಿಡುಗಡೆ ಮಾಡಿದ್ದಾರೆ.

      ಉಸಿರಾಟದ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳನ್ನು ಕೋವಿಡ್ - 19 ಸೋಂಕಿತರು ಎಂದು ಪರಿಗಣಿಸಿ ಆಸ್ಪತ್ರೆಗೆ ದಾಖಲು ಮಾಡಬೇಕು. ಪರೀಕ್ಷೆಯ ವರದಿ ಬರುವ ತನಕ ಐಸೊಲೇಷನ್ ವಾರ್ಡ್‌ನಲ್ಲಿ ಅಗತ್ಯ ಚಿಕಿತ್ಸೆ ನೀಡಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

      Patients Should Treat Immediately Health Department

      ವ್ಯಕ್ತಿಗೆ ಕೋವಿಡ್ - 19 ಸೋಂಕು ದೃಢಪಟ್ಟಲ್ಲಿ ಕೋವಿಡ್ ವಾರ್ಡ್‌ಗೆ ಸ್ಥಳಾಂತರ ಮಾಡಬೇಕು. ಸೋಂಕು ಇಲ್ಲದಿದ್ದಲ್ಲಿ ಅಲ್ಲಿಯೇ ಚಿಕಿತ್ಸೆ ಮುಂದುವರೆಸಬೇಕು. ಇಂತಹ ಪ್ರಕರಣಗಳಲ್ಲಿ ಬಿಬಿಎಂಪಿ ಅಧಿಕಾರಿಗಳ ಪತ್ರ ಅಗತ್ಯ ಇರುವುದಿಲ್ಲ. ರೋಗಿಗಳ ಸಂಖ್ಯೆ ನೀಡದಿದ್ದರೂ ಮುಂದಿನ ಕ್ರಮ ಕೈಗೊಳ್ಳಬಹುದು ಎಂದು ತಿಳಿಸಲಾಗಿದೆ.

      ರೋಗಿಗಳು ಬಂದ ತಕ್ಷಣ ದಾಖಲು ಮಾಡಿಕೊಳ್ಳದ ಆಸ್ಪತ್ರೆಗಳ ವಿರುದ್ದ ವಿಪತ್ತು ನಿರ್ವಹಣಾ ಕಾಯ್ದೆ ಅನುಸಾರ ಕ್ರಮ ಕೈಗೊಳ್ಳಬೇಕು. ಕೋವಿಡ್ ಪರೀಕ್ಷೆ ವರದಿ ಬರುವ ತನಕ ಸರ್ಕಾರ ನಿಗದಿ ಮಾಡಿದ ದರದಲ್ಲಿಯೇ ಚಿಕಿತ್ಸೆ ನೀಡಬೇಕು ಎಂದು ತಿಳಿಸಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+