Pavithra Gowda: ರಿಮ್ಯಾಂಡ್ ಕಾಪಿಯಲ್ಲಿ ಬಯಲಾಯ್ತು ಅ'ಪವಿತ್ರಾ'ಳ ಸ್ಫೋಟಕ ಮಾಹಿತಿ
ರೇಣುಕಾಸ್ವಾಮಿ ಕೊಲೆ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಈಗಾಗಲೇ ಜೈಲು ಹಕ್ಕಿಯಾಗಿದ್ದು, ಎ2 ಆರೋಪಿ ನಟ ದರ್ಶನ್ ಪೊಲೀಸ್ ಕಸ್ಟಡಿಯಲ್ಲಿದ್ದಾನೆ. ಇನ್ನು ಇದೀಗ ಜೈಲುಪಾಲಾಗಿರುವ ಪವಿತ್ರಾಳ ಬಗ್ಗೆ ಸ್ಫೋಟಕ ಮಾಹಿತಿಯೊಂದು ಬಟಾ ಬಯಲಾಗಿದೆ. ಇಲ್ಲಿದೆ ನೋಡಿ ಮಾಹಿತಿ.
ಚಿತದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಪಾಲಾಗಿರುವ ಪವಿತ್ರಾಗೌಡ ಕುರಿತು ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ರೇಣುಕಾಸ್ವಾಮಿ ಕೊಲೆಗೆ ಸಂಚು ರೂಪಿಸಿದ್ದೇ ಪವಿತ್ರಾಗೌಡ ಎಂದು ಪೊಲೀಸ್ ರಿಮ್ಯಾಂಡ್ ಕಾಪಿಯಲ್ಲಿ ಬಯಲಾಗಿದೆ. ಹಾಗಾದರೆ ಆ ಕಾಪಿಯಲ್ಲಿ ಏನಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಈಗಾಗಲೇ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತ ಎ1 ಆರೋಪಿ ಪವಿತ್ರಾ ಗೌಡ ಅವರೇ, ರೇಣುಕಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಂಚುಕೋರಾಗಿದ್ದಾರೆ. ನಟ ದರ್ಶನ್ ಹಾಗೂ ಇತರೆ ಆರೋಪಿಗಳಿಗೆ ಪ್ರಚೋದನೆ ನೀಡಿ ಕೊಲೆ ಮಾಡಿಸಿರುವುದು ಇದೀಗ ಪೊಲೀಸರ ತನಿಖೆಯಿಂದ ಹೊರಬಿದ್ದಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಕೊಲೆ ಪ್ರಕರಣದ ಆರೋಪಿಯೊಬ್ಬನ ಮೊಬೈಲ್‌ನಲ್ಲಿ ಮಹತ್ವದ ಸಾಕ್ಷಿ ಸಿಕ್ಕಿದೆ ಎನ್ನಲಾಗಿದ್ದು, ಅದನ್ನು ಆರೋಪಿಗೆ ಕಳುಹಿಸಿದವರು ಯಾರು ಎಂಬ ಬಗ್ಗೆ ಮಾಹಿತಿ ತಿಳಿಯಲು ವಿಚಾರಣೆ ಮುಂದುವರೆಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಎ1 ಆರೋಪಿಯೇ ಕೃತ್ಯಕ್ಕೆ ಪ್ರಮುಖ ಕಾರಣ ಆಗಿದ್ದು, ಈಕೆಯು ಪ್ರಚೋದನೆ ನೀಡಿ ಇತರೆ ಆರೋಪಿಗಳೊಂದಿಗೆ ಸೇರಿ ಕೊಲೆಗೆ ಸಂಚು ರೂಪಿಸಿರುವುದು ಮತ್ತು ಕೃತ್ಯದಲ್ಲಿ ಭಾಗಿಯಾಗಿರುವುದು ತನಿಖೆಯಲ್ಲಿ ದೃಢಪಟ್ಟಿದೆ ಎನ್ನುವ ಸ್ಫೋಟಕ ಮಾಹಿತಿಯೊಂದು ಬಯಲಾಗಿದೆ.
ಇನ್ನು ಎ2 ಆರೋಪಿ ತನ್ನ ಹಣ ಮತ್ತು ಇತರೆ ಆರೋಪಿಗಳನ್ನು ಒಳಗೊಂಡ ತನ್ನ ಅಭಿಮಾನಿ ಬಳಗವನ್ನು ಬಳಸಿಕೊಂಡು ಕೃತ್ಯದಲ್ಲಿ ಭಾಗಿಯಾಗಿ ಹಾಗೂ ಭಾಗಿಯಾಗಿಸಿ ನೆಲದ ಕಾನೂನನ್ನು ದುರುಪಯೊಗಪಡಿಸಿಕೊಂಡಿರುವುದು ಸಾಕ್ಷ್ಯಾಧಾರಗಳಿಂದ ಕಂಡುಬಂದಿದೆ ಎಂದು ರಿಮ್ಯಾಂಡ್ ಕಾಪಿಯಲ್ಲಿ ಮಾಹಿತಿ ಬಟಾ ಬಯಲಾಗಿದೆ.












Click it and Unblock the Notifications