Pavithra Gowda: ಜಾಮೀನು ಅರ್ಜಿ ಹಿಂಪಡೆದ ಪವಿತ್ರಾ ಗೌಡ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ದರ್ಶನ್ ಗೆಳತಿ ಪವಿತ್ರಾ ಗೌಡ ಪರ ವಕೀಲರು ಜಾಮೀನು ಅರ್ಜಿ ಹಿಂಪಡೆದಿದ್ದಾರೆ. ಶುಕ್ರವಾರ ಹೈಕೋರ್ಟ್‌ನ ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರ ಪೀಠದಲ್ಲಿ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಈಗಾಗಲೇ ಚಾರ್ಜ್‌ಶೀಟ್ ಸಲ್ಲಿಕೆಯಾಗಿರುವ ಕಾರಣ, ನ್ಯಾಯಾಧೀಶರ ಸೂಚನೆಯಂತೆ ಜಾಮೀನು ಅರ್ಜಿಯನ್ನು ಹಿಂಪಡೆಯಲಾಗಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ, ಚಾರ್ಜ್‌ಶೀಟ್ ಸಲ್ಲಿಸುವ ಮೊದಲು ಜಾಮೀನು ಅರ್ಜಿ ಸಲ್ಲಿಕೆ ಮಾಡಲಾಗಿದೆ. ಚಾರ್ಜ್‌ಶೀಟ್ ಸಲ್ಲಿಸಿರುವ ಕಾರಣ, ಸೆಷನ್ಸ್ ಕೋರ್ಟ್‌ನಲ್ಲಿ ಜಾಮೀನು ಅರ್ಜಿಯನ್ನು ಸಲ್ಲಿಸಬಹುದು ಎಂದು ಸೂಚನೆ ಕೊಟ್ಟರು. ನ್ಯಾಯಾಧೀಶರು ಸೂಚನೆ ಕೊಟ್ಟ ಬಳಿಕ ಪವಿತ್ರಾ ಗೌಡ ಪರ ವಕೀಲ ಟಾಮಿ ಸೆಬಾಸ್ಟಿಯನ್ ಜಾಮೀನು ಅರ್ಜಿಯನ್ನು ಹಿಂಪಡೆದಿದ್ದಾರೆ. ಸೆಷನ್ಸ್ ಕೋರ್ಟ್‌ನಲ್ಲಿ ಈಗ ಪವಿತ್ರಾ ಗೌಡ ಪರ ವಕೀಲರು ಜಾಮೀನು ಅರ್ಜಿಯನ್ನು ಸಲ್ಲಿಸುವ ಸಾಧ್ಯತೆ ಇದೆ.
ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ಸರ್ಕಾರಿ ಅಭಿಯೋಜಕರಾದ ಪಿ. ಪ್ರಸನ್ನಕುಮಾರ್, "ಪ್ರಕರಣಕ್ಕೆ ಸಂಬಂಧಪಟ್ಟಂತೆ 4 ಸಾಔಇರ ಪುಟಗಳ ಚಾರ್ಜ್‌ಶೀಟ್ ಅನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದು, ಚಾರ್ಜ್‌ಶೀಟ್‌ನಲ್ಲಿರುವ ಅಂಶಗಳನ್ನು ಪರಿಶೀಲನೆ ಮಾಡಿ ಕೋರ್ಟ್ ಮುಂದಿನ ಕ್ರಮ ಜರುಗಿಸಲಿದೆ. ಆರೋಪಿ ಪವಿತ್ರಾ ಗೌಡ ವಿಚಾರಾಣಾ ನ್ಯಾಯಾಲಯದಲ್ಲೇ ಜಾಮೀನು ಅರ್ಜಿ ಸಲ್ಲಿಸಬಹುದು" ಎಂದು ವಾದಿಸಿದರು.

ನ್ಯಾಯಾಂಗ ಬಂಧನ ವಿಸ್ತರಣೆ
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನ ಸೆಪ್ಟೆಂಬರ್ 17ರವರೆಗೂ ವಿಸ್ತರಣೆ ಮಾಡಲಾಗಿದೆ. ಪವಿತ್ರಾ ಗೌಡ ಪರ ವಕೀಲರು ಮುಂದಿನ ವಿಚಾರಣೆ ವೇಳೆಗೆ ಸೆಷನ್ಸ್ ನ್ಯಾಯಾಲಯದಲ್ಲೇ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.
ದರ್ಶನ್ ಜಾಮೀನು ಅರ್ಜಿ ಯಾವಾಗ?
ಎ2 ಆರೋಪಿಯಾಗಿರುವ ದರ್ಶನ್ ಅವರ ಪರ ವಕೀಲರು ಜಾಮೀನು ಅರ್ಜಿ ಯಾವಾಗ ಸಲ್ಲಿಸುತ್ತಾರೆ ಎನ್ನುವುದು ಈಗ ಪ್ರಶ್ನೆಯಾಗಿದೆ. ಕೆಲವು ದಿನಗಳ ಹಿಂದಷ್ಟೇ ಆರೋಪ ಪಟ್ಟಿ ವಕೀಲರ ಕೈ ಸೇರಿದ್ದು, ಎಲ್ಲವನ್ನೂ ಪರಿಶೀಲನೆ ಮಾಡಿದ ಬಳಿಕವಷ್ಟೇ ದರ್ಶನ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಈ ಮೊದಲು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಜೈಶಂಕರ್ ಆಗಸ್ಟ್ 31ರಂದು ವಜಾಗೊಳಿಸಿದ್ದರು. ಬಳಿಕ ಪವಿತ್ರಾ ಪರ ವಕೀಲರು ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು.












Click it and Unblock the Notifications