Pavithra Gowda: ಕೋರ್ಟ್‌ಗೆ ಆಗಮಿಸಿದ ಪವಿತ್ರಾಗೌಡ ಮಗಳು

Pavithra Gowda: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಇಂದು (ಜೂನ್‌ 20) ಪೊಲೀಸ್‌ ಕಸ್ಟಡಿ ಅಂತ್ಯ ಹಿನ್ನೆಲೆ ದರ್ಶನ್‌ ಮತ್ತು ಗ್ಯಾಂಗ್‌ ಅನ್ನು 42ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ಪವಿತ್ರಾಗೌಡ ಮಗಳು ಕೋರ್ಟ್‌ಗೆ ತನ್ನ ಅಜ್ಜಿ ಜೊತೆ ಆಗಮನಿಸಿದ್ದರು.

ಇನ್ನು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಎ1 ಆರೋಪಿಯಾಗಿದ್ದ ಪವಿತ್ರಾಗೌಡ ಸೇರಿ ಒಟ್ಟು 10 ಮಂದಿಯನ್ನು ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ಕೋರ್ಟ್‌ ವಿಚಾರಣೆ ಹಿನ್ನೆಲೆ ಪವಿತ್ರಾಗೌಡನನ್ನು ನೋಡಲು ಮಗಳು ತನ್ನ ಅಜ್ಜಿ ಜೊತೆ ಕೋರ್ಟ್‌ಗೆ ಆಗಮಿಸಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

Pavitra Gowda s daughter arrived at court

ಪವಿತ್ರಾಗೌಡ ಮಗಳು ಖುಷಿ ಆಗಿದ್ದಾರೆ. ಪವಿತ್ರಾ ಗೌಡ, ಮೊದಲ ಪತಿ ಸಂಜಯ್ ಸಿಂಗ್ ಅವರಿಂದ ವಿಚ್ಛೇದನ ಪಡೆದುಕೊಂಡ ಬಳಿಕ ಮಗಳು ಖುಷಿ ಅಮ್ಮನ ಜೊತೆಗಿದ್ದರು. ಆದರೆ ಇದೀಗ ಪವಿತ್ರಾ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದು, ಇದರಿಂದ ಮಗಳು ತುಂಬಾ ಬೇಸರಗೊಂಡಿದ್ದಾಳೆ ಎನ್ನಲಾಗಿದೆ.

ಕಿಡ್ನ್ಯಾಪ್‌ ಕೇಸ್‌ನಲ್ಲಿ ಮೊದಲ ಆರೋಪಿಯಾದ ಪವಿತ್ರಾಗೌಡ, ಪವನ್‌, ರಾಘವೇಂದ್ರ, ಲಕ್ಷ್ಮಣ್‌, ದೀಪಕ್‌, ಕೇಶವ್‌, ನಂದೀಶ್‌, ಜಗದೀಶ್‌, ಅನುಕುಮಾರ್‌, ನಾಗರಾಜ್‌ ಒಟ್ಟು 10 ಮಂದಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶದ ನೀಡಿದೆ.

ವಿಡಿಯೋ ಭಾರೀ ವೈರಲ್‌: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಕ್ಷಣಕ್ಕೊಂದು ತಿರುವು ಪಡದುಕೊಳ್ಳುತ್ತಲೇ ಇದೆ. ಪ್ರಕರಣದ ಎ1 ಆರೋಪಿ ಪವಿತ್ರ ಗೌಡ ಆಗಿದ್ದು, ಎ2 ಆರೋಪಿ ನಟ ದರ್ಶನ್‌ ಆಗಿದ್ದಾರೆ. ಈಗಾಗಲೇ ಈ ಬಗ್ಗೆ ಹಲವರು ಪ್ರತಿಕ್ರಿಯೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಚಾರವನ್ನೇ ಇಟ್ಟುಕೊಂಡು ರೀಲ್ಸ್‌ ಮಾಡಿರುವ ವಿಡಿಯೋಗಳು ಭಾರೀ ವೈರಲ್‌ ಆಗುತ್ತಿವೆ. ಹಾಗೆಯೇ ಇದೀಗ ದರ್ಶನ್‌, ಪವಿತ್ರಾ ಗೌಡ ವಿಚಾರ ಯಕ್ಷಗಾನಕ್ಕೂ ಎಂಟ್ರಿ ಕೊಟ್ಟಿದ್ದು, ಈ ವಿಡಿಯೋ ಸಹ ಸಖತ್‌ ಸದ್ದು ಮಾಡುತ್ತಿವೆ.

ಈ ಪ್ರಕರಣ ಬರೀ ರಾಜ್ಯ ಅಲ್ಲದೆ, ಇಡೀ ದೇಶಾದ್ಯಂತ ಹರಡಿಬಿಟ್ಟಿದೆ. ಸುದ್ದಿ ಮಾಧ್ಯಮ, ಟ್ರೋಲ್‌ ಪೇಜ್‌, ಸಾಮಾಜಿಕ ಜಾಲತಾಣಗಳಲ್ಲಿ ಈ ಸುದ್ದಿಯದ್ದೇ ಚರ್ಚೆಯಾಗುತ್ತಿದದೆ. ಅಷ್ಟೇ ಅಲ್ಲದೆ ಇದೀಗ ನಟ ದರ್ಶನ್‌ ಮತ್ತು ಪವಿತ್ರಾ ವಿಚಾರ ಯಕ್ಷಗಾನ ಪ್ರಸಂಗಕ್ಕೂ ಎಂಟ್ರಿ ಕೊಟ್ಟಿದ್ದು, ಈ ವಿಡಿಯೋವೊಂದು ಭಾರೀ ವೈರಲ್‌ ಆಗುತ್ತಿದೆ. ಹಾಗಾದರೆ ಈ ವಿಡಿಯೋದಲ್ಲೆ ಏನಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

‌ಯಕ್ಷಗಾನ ಅಂದರೆ ಅದರದ್ದೇ ಆದ ಪ್ರಮುಖ ಶೈಲಿಗಳಿವೆ ಅಲ್ಲದೆ ಇದಕ್ಕೆ ಹೆಚ್ಚು ಪ್ರಾಮುಖ್ಯತೆ ಕೊಡಲಾಗುತ್ತದೆ. ಯಕ್ಷಗಾನ ಪ್ರಸಂಗದಲ್ಲಿ ಕೆಲವು ಬಾರಿ ಪ್ರಸಕ್ತ ವಿದ್ಯಮಾನಗಳ ಕುರಿತ ಹಾಸ್ಯಮಯ ಸಂಭಾಷಣೆಗಳನ್ನು ಕೂಡ ಮಾಡಲಾಗುತ್ತದೆ. ಈ ಸನ್ನಿವೇಶಗಳು ಪ್ರೇಕ್ಷಕರನ್ನು ರಂಜಿಸುತ್ತವೆ.

ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಯಕ್ಷಗಾನ ಪ್ರಸಂಗವೊಂದರಲ್ಲಿ ಪ್ರಜ್ವಲ್‌ ರೇವಣ್ಣ ಹೆಸರು ಸಹ ಪ್ರಸ್ತಾಪ ಆಗಿತ್ತು. ಈ ವಿಡಿಯೋ ಭಾರೀ ಸದ್ದು ಮಾಡಿತ್ತು. ಇದೀಗ ತುಳು ಯಕ್ಷಗಾನ ಬಯಲಾಟವೊಂದರಲ್ಲಿ ರಂಗಸ್ಥಳದಲ್ಲಿ ಹಾಸ್ಯಕಲಾವಿದರ ನಡುವೆ ನಡೆದ ಸಂಭಾಷಣೆಯಲ್ಲಿ ದರ್ಶನ್‌-ಪವಿತ್ರಾ ಹೆಸರು ಪ್ರಸ್ತಾಪ ಆಗಿದ್ದು, ಈ ವಿಡಿಯೋ ಸಹ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.

ಇನ್ನು ಈ ವಿಡಿಯೋವನ್ನು ಸ್ವಸ್ತಿಕ್‌ ಕನ್ಯಾಡಿ (@swasthik_kanyadi) ಎಂಬವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದು, "ಯಕ್ಷಗಾನದಲ್ಲಿ ದರ್ಶನ್-ಪವಿತ್ರ ಮ್ಯಾಟರ್‌" ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+