ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆನ್ ಲೈನ್ ಮೂಲಕ ಬಿಬಿಎಂಪಿಗೆ ಆಸ್ತಿ ತೆರಿಗೆ ಕಟ್ಟುವುದು ಹೇಗೆ?

|
Google Oneindia Kannada News

ಬೆಂಗಳೂರು, ಮೇ 13 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಸ್ತಿ ತೆರಿಗೆ ಪಾವತಿ ಮಾಡುವ ಜನರಿಗೆ ಶೇ 5ರಷ್ಟು ರಿಯಾಯಿತಿಯನ್ನು ನೀಡಿದೆ. ಮೇ 31ರ ತನಕ ಆಸ್ತಿ ತೆರಿಗೆ ಪಾವತಿ ಮಾಡುವವರು ಈ ಸೌಲಭ್ಯವನ್ನು ಪಡೆಯಬಹುದಾಗಿದೆ.

Recommended Video

ಹಾಸನದಲ್ಲಿ ಕೊರೊನಾ ಕೇಸ್ ಪತ್ತೆಯಾಗ್ತಿದ್ದಂತೆ ಮಲೆನಾಡಿಗರು ಮಾಡ್ತಿರೋ ಕೆಲಸ ನೋಡಿ | Hassan | Oneindia Kannada

ಕೊರೊನಾ ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಜನರ ಸಂಚಾರಕ್ಕೆ ಹಲವಾರು ನಿರ್ಬಂಧಗಳನ್ನು ಹಾಕಲಾಗಿದೆ. ಆದ್ದರಿಂದ, ಜನರು ಆನ್‌ಲೈನ್ ಮೂಲಕ ಆಸ್ತಿ ತೆರಿಗೆ ಪಾವತಿ ಮಾಡಲು ಬಿಬಿಎಂಪಿ ಅವಕಾಶ ನೀಡಿದೆ.

ಲಾಕ್‌ಡೌನ್: ಆನ್‌ಲೈನ್‌ನಲ್ಲಿ ಬೆಸ್ಕಾಂ ಬಿಲ್ ಪಾವತಿ ಹೇಗೆ?ಲಾಕ್‌ಡೌನ್: ಆನ್‌ಲೈನ್‌ನಲ್ಲಿ ಬೆಸ್ಕಾಂ ಬಿಲ್ ಪಾವತಿ ಹೇಗೆ?

2020-21ನೇ ಸಾಲಿನ ಆಸ್ತಿ ತೆರಿಗೆಯನ್ನು ಮೇ 31ರೊಳಗೆ ಸಂಪೂರ್ಣವಾಗಿ ಪಾವತಿ ಮಾಡಿ ಶೇ 5ರಷ್ಟು ರಿಯಾಯಿತಿ ಪಡೆಯಿರಿ ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ. ಆಸ್ತಿ ತೆರಿಗೆಯನ್ನು ಸಕಾಲದಲ್ಲಿ ಪಾವತಿ ಮಾಡಿ, ಬೆಂಗಳೂರು ಅಭಿವೃದ್ಧಿಗೆ ಕೈ ಜೋಡಿಸಿ ಎಂದು ಬಿಬಿಎಂಪಿ ಜನರಲ್ಲಿ ಮನವಿ ಮಾಡಿದೆ.

ಮಾಸ್ಕ್ ಧರಿಸುವುದು ಕಡ್ಡಾಯ; ದಂಡದ ಮೊತ್ತ ಇಳಿಸಿದ ಬಿಬಿಎಂಪಿ ಮಾಸ್ಕ್ ಧರಿಸುವುದು ಕಡ್ಡಾಯ; ದಂಡದ ಮೊತ್ತ ಇಳಿಸಿದ ಬಿಬಿಎಂಪಿ

ಆಸ್ತಿ ತೆರಿಗೆ ಪಾವತಿ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ವೆಬ್ ಸೈಟ್‌ಗೆ ಭೇಟಿ ನೀಡಬಹುದಾಗಿದೆ. ಆಸ್ತಿ ತೆರಿಗೆ ಪಾವತಿ ಬಗ್ಗೆ ಯಾವುದೇ ಗೊಂದಲಗಳು ಇದ್ದರೂ 080-22660000 ಸಹಾಯವಾಣಿಗೆ ಜನರು ಕರೆ ಮಾಡಬಹುದಾಗಿದೆ.

ಮಾಸ್ಕ್ ಧರಿಸದ ವ್ಯಕ್ತಿಗಳಿಂದ ಬಿಬಿಎಂಪಿ ಸಂಗ್ರಹಿಸಿದ ದಂಡ ಎಷ್ಟು?ಮಾಸ್ಕ್ ಧರಿಸದ ವ್ಯಕ್ತಿಗಳಿಂದ ಬಿಬಿಎಂಪಿ ಸಂಗ್ರಹಿಸಿದ ದಂಡ ಎಷ್ಟು?

ಆಸ್ತಿ ತೆರಿಗೆ ಪಾವತಿ ಮಾಡುವುದು ಹೇಗೆ?

ಆಸ್ತಿ ತೆರಿಗೆ ಪಾವತಿ ಮಾಡುವುದು ಹೇಗೆ?

2020-21ನೇ ಸಾಲಿನ ಆರ್ಥಿಕ ವರ್ಷವು ದಿನಾಂಕ 1/4/2020 ರಿಂದ ಆರಂಭಗೊಂಡಿದ್ದು, ಆಸ್ತಿ ತೆರಿಗೆಯನ್ನು ಆನ್‌ಲೈನ್ ಅಥವ ಆಯ್ದ ಬ್ಯಾಂಕ್ ಶಾಖೆಗಳಲ್ಲಿ ಚಲನ್ ಪಡೆದು ಪಾವತಿ ಮಾಡಬಹುದಾಗಿದೆ. ಆನ್‌ಲೈನ್ ಮೂಲಕ ಆಸ್ತಿ ತೆರಿಗೆಯನ್ನು ಪಾವತಿ ಮಾಡಲು bbmptax.karnataka.gov.in ವೆಬ್ ಸೈಟ್‌ಗೆ ಭೇಟಿ ನೀಡಬಹುದಾಗಿದೆ.

ಯಾವುದೇ ಶುಲ್ಕ ವಿಧಿಸುವುದಿಲ್ಲ

ಯಾವುದೇ ಶುಲ್ಕ ವಿಧಿಸುವುದಿಲ್ಲ

ಡೆಬಿಟ್ ಕಾರ್ಡ್ ಮತ್ತು ಯುಪಿಐ ಪಾವತಿಗಳ ಮೂಲಕ ಆನ್‌ಲೈನ್‌ನಲ್ಲಿ ಆಸ್ತಿ ತೆರಿಗೆ ಪಾವತಿಸುವ ತೆರಿಗೆದಾರರಿಗೆ ಯಾವುದೇ ಅಧಿಕ ಶುಲ್ಕವನ್ನು ವಿಧಿಸುವುದಿಲ್ಲ.

2020-21ನೇ ಸಾಲಿನ ಸಂಪೂರ್ಣ ಆಸ್ತಿ ತೆರಿಗೆಯನ್ನು 31/5/2020ರೊಳಗೆ ಪಾವತಿಸಿದಲ್ಲಿ ಶೇ 5 ರಷ್ಟು ರಿಯಾಯಿತಿ ಪಡೆಯಬಹುದಾಗಿದೆ.

ಯಾವ-ಯಾವ ಬ್ಯಾಂಕ್ ಮೂಲಕ ಪಾವತಿ?

ಯಾವ-ಯಾವ ಬ್ಯಾಂಕ್ ಮೂಲಕ ಪಾವತಿ?

ಆಸ್ತಿ ತೆರಿಗೆಯನ್ನು ಕೆನರಾ ಬ್ಯಾಂಕ್, ಎಚ್‌ಡಿಎಫ್‌ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಮತ್ತು ಆಕ್ಸಿಸ್ ಬ್ಯಾಂಕ್‌ಗಳ ಆಯ್ದ ಶಾಖೆಗಳಲ್ಲಿ ಪಾವತಿಸಬಹುದಾಗಿದೆ. (ಆಯ್ದ ಬ್ಯಾಂಕ್ ಶಾಖೆಗಳ ವಿವರಗಳನ್ನು ಪಾಲಿಕೆಯ ವೆಬ್ ಸೈಟ್‌ನಲ್ಲಿ ಪ್ರಕಟಿಸಲಾಗಿದೆ).

ಸ್ವಯಂ ಘೋಷಣೆ ಆಸ್ತಿ ತೆರಿಗೆ

ಸ್ವಯಂ ಘೋಷಣೆ ಆಸ್ತಿ ತೆರಿಗೆ

ಸ್ವಯಂ ಘೋಷಣೆ ಆಸ್ತಿ ತೆರಿಗೆ ಪದ್ಧತಿ ಅಡಿಯಲ್ಲಿ ಇದುವರೆಗೂ ಆಸ್ತಿ ತೆರಿಗೆ ಪಾವತಿಸದೇ ಇರುವ ತೆರಿಗೆದಾರರು ಸಂಬಂಧಪಟ್ಟ ಸಹಾಯಕ ಕಂದಾಯ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. ಬಿಬಿಬಿಎಂಪಿ ವೆಬ್ ಸೈಟ್‌ನಲ್ಲಿ ಸಹಾಯಕ ಕಂದಾಯ ಅಧಿಕಾರಿಗಳ ವಿವರ ಮತ್ತು ದೂರವಾಣಿ ಸಂಖ್ಯೆಯನ್ನು ಪ್ರಕಟಿಸಲಾಗಿದೆ.

English summary
In a announcement BBMP said that pay your property tax for the year 2020-21 before May 31 and get a 5% rebate. People can pay it online or through challans at designated banks.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X