ಲಘು ವಾಹನಗಳ ಸಂಚಾರಕ್ಕೆ ಪೀಣ್ಯ ಫ್ಲೈ ಓವರ್ ಮುಕ್ತ
ಬೆಂಗಳೂರು, ಫೆಬ್ರವರಿ 17; ಬೆಂಗಳೂರು ನಗರದ ವಾಹನ ಸವಾರರಿಗೆ ಸಿಹಿಸುದ್ದಿ. ಸುಮಾರು 56 ದಿನಗಳ ಬಳಿಕ ಡಾ. ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ ಲಘು ವಾಹನಗಳ ಸಂಚಾರಕ್ಕೆ ಬುಧವಾರ ಮುಕ್ತವಾಗಿದೆ.
ಪೀಣ್ಯ ಎಲಿವೇಡೆಡ್ ಮೇಲ್ಸೆತುವೆಯ 102 ಮತ್ತು 103ನೇ ಕಂಬಗಳ ನಡುವೆ ತಾಂತ್ರಿಕ ದೋಷವಿದೆ ಎಂದು ಡಿಸೆಂಬರ್ 26ರಂದು ಫ್ಲೈ ಓವರ್ ಎರಡೂ ಕಡೆ ವಾಹನ ಸಂಚಾರ ಬಂದ್ ಮಾಡಲಾಗಿತ್ತು. ಎನ್‌ಎಚ್‌ಎಐ ದುರಸ್ತಿ ಕಾಮಗಾರಿ ಪೂರ್ಣಗೊಳಿಸಿದೆ.
ಬುಧವಾರ ಸಂಜೆಯಿಂದಲೇ ಕಾರು, ಬೈಕ್, ಆಟೋಗಳ ಸಂಚಾರಕ್ಕೆ ಫ್ಲೈ ಓವರ್ ಮೇಲೆ ಅವಕಾಶ ನೀಡಲಾಗಿದೆ. ಬಸ್, ಲಾರಿ ಸೇರಿದಂತೆ ಭಾರೀ ವಾಹನಗಳ ಸಂಚಾರಕ್ಕೆ ಅನುಮತಿ ಇಲ್ಲ. ಪೀಣ್ಯ ಸಂಚಾರಿ ಠಾಣೆ ಪೊಲೀಸರು ಈ ಕುರಿತು ಟ್ವೀಟ್ ಮಾಡಿದ್ದಾರೆ.

ಸುಮಾರು 56 ದಿನಗಳಿಂದ ಪೀಣ್ಯ ಫ್ಲೈ ಓವರ್ ಮೇಲೆ ಎರಡೂ ಕಡೆ ವಾಹನ ಸಂಚಾರ ಬಂದ್ ಆಗಿತ್ತು. ಇದರಿಂದಾಗಿಗ ಹೊರ ಜಿಲ್ಲೆಗಳಿಂದ ಬೆಂಗಳೂರು ನಗರಕ್ಕೆ ಬರುವ ಮತ್ತು ಬೆಂಗಳೂರು ನಗರದಿಂದ ಹೊರ ಹೋಗುವ ವಾಹನಗಳಿಗೆ ತೊಂದರೆಯಾಗಿತ್ತು. ಪ್ರತಿದಿನ ಕಿ. ಮೀ. ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಲ್ಲುತ್ತಿದ್ದವು.
ಫ್ಲೈ ಓವರ್ ದುರಸ್ತಿ ಕಾರ್ಯದ ಬಳಿಕ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ತಜ್ಞರ ತಂಡ ಫ್ಲೈ ಓವರ್ ಮೇಲೆ ಲಾರಿಗಳನ್ನು ಓಡಿಸಿ ಭಾರದ ಸುರಕ್ಷತಾ ಪರೀಕ್ಷೆ ನಡೆಸಿದೆ. ಫ್ಲೈ ಓವರ್ ಭಾರೀ ವಾಹನಗಳ ಸಂಚಾರಕ್ಕೆ ಸುರಕ್ಷಿತವಲ್ಲ ಎಂದು ಹೇಳಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತು ವಿಧಾನಸಭೆಯಲ್ಲಿಯೇ ಮಾಹಿತಿ ನೀಡಿದ್ದಾರೆ. "ಮೇಲ್ಸೆತುವೆ ನಿರ್ಮಾಣ ಮಾಡುವಾಗ ಗುಣಮಟ್ಟ ಪಾಲನೆ ಮಾಡಿಲ್ಲ. ಕಳಪೆ ಕಾಮಗಾರಿಯಿಂದ ಈಗ ಸಮಸ್ಯೆ ಉಂಟಾಗಿದೆ. ಭಾರೀ ವಾಹನಗಳು ಸಂಚಾರ ನಡೆಸಿದಾಗ ಕಂಬಗಳ ಒಳಗಿನ ಕೇಬಲ್ ಬಾಗುತ್ತದೆ. ಆದ್ದರಿಂದ ಭಾರೀ ವಾಹನಗಳ ಸಂಚಾರಕ್ಕೆ ಫ್ಲೈ ಓವರ್ ಸುರಕ್ಷಿತವಲ್ಲ ಎಂಬ ವರದಿ ಬಂದಿದೆ" ಎಂದು ಹೇಳಿದ್ದಾರೆ.
ಆದ್ದರಿಂದ ಪೀಣ್ಯ ಫ್ಲೈ ಓವರ್‌ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಭಾರೀ ವಾಹನಗಳು ಫ್ಲೈ ಓವರ್ ಕೆಳಗಿನ ರಸ್ತೆಯಲ್ಲಿಯೇ ಸಂಚಾರ ನಡೆಸಬೇಕಿದೆ. ಭಾರೀ ವಾಹನಗಳು ಫ್ಲೈ ಓವರ್ ಮೇಲೆ ಸಂಚಾರ ನಡೆಸದಂತೆ ಸಂಚಾರಿ ಪೊಲೀಸರು ಅಗತ್ಯ ಕ್ರಮ ಕೈಗೊಂಡಿದ್ದಾರೆ.
10 ವರ್ಷದ ಹಿಂದೆ ಸುಮಾರು 100 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾದ ಪೀಣ್ಯ ಫ್ಲೈ ಓವರ್‌ನಲ್ಲಿ 116 ಪಿಲ್ಲರ್‌ಗಳಿವೆ. ಪಿಲ್ಲರ್ ನಂ 102 ಮತ್ತು 103ರ ಮಧ್ಯೆ 8ನೇ ಮೈಲಿಯ ಸ್ವಾತಿ ಪೆಟ್ರೋಲ್ ಬಂಕ್ ಬಳಿ ಫ್ಲೈ ಓವರ್‌ಗೆ ಅಳವಡಿಸಿರುವ ಕೇಬಲ್ ದುರಸ್ತಿಗಾಗಿ ವಾಹನ ಸಂಚಾರ ಬಂದ್ ಮಾಡಲಾಗಿತ್ತು.
ಈಗ ಐಐಎಸ್‌ಸಿಯ ತಜ್ಞರು ಎಲ್ಲಾ ಪಿಲ್ಲರ್‌ಗಳ ಸುರಕ್ಷತೆ ಬಗ್ಗೆ ಮತ್ತೊಂದು ವರದಿ ನೀಡಲಿದ್ದಾರೆ. ಬಳಿಕ ಫ್ಲೈ ಓವರ್ ಮೇಲೆ ಭಾರೀ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡುವ ಕುರಿತು ಸರ್ಕಾರ ಅಂತಿಮ ತೀರ್ಮಾನವನ್ನು ಕೈಗೊಳ್ಳಲಿದೆ.
ಅಲ್ಲಿಯ ತನಕ ಬೈಕ್, ಕಾರು, ಆಟೋ, ಟೆಂಪೋ ಟ್ರಾವೆಲರ್‌ಗಳ ಸಂಚಾರಕ್ಕೆ ಮಾತ್ರ ಫ್ಲೈ ಓವರ್ ಮುಕ್ತವಾಗಿದೆ. ಕೆಎಸ್ಆರ್‌ಟಿಸಿ, ಬಿಎಂಟಿಸಿ, ಖಾಸಗಿ ಬಸ್, ಲಾರಿ, ದೊಡ್ಡ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಅವಕಾಶವಿಲ್ಲ.
ಗೊರಗುಂಟೆಪಾಳ್ಯದಲ್ಲಿಯೇ ಸಂಚಾರಿ ಪೊಲೀಸರು ಭಾರೀ ವಾಹನಗಳ ಫ್ಲೈ ಓವರ್ ಹತ್ತುವುದನ್ನು ನಿರ್ಬಂಧಿಸಲು ನಿಯಂತ್ರಣ ಪೋಲ್ ಆಳವಡಿಕೆ ಮಾಡಿದ್ದಾರೆ. ಮೂರು ಮೀಟರ್‌ಗಿಂತ ಎತ್ತರ ಇರುವ ವಾಹನಗಳು ಫ್ಲೈ ಓವರ್ ಮೇಲೆ ಸಂಚಾರ ನಡೆಸಲು ಸಾಧ್ಯವಿಲ್ಲ.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications