ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಸ್ಮಾರ್ಟ್ ಸಿಟಿಯಾಗಿ ಪೀಣ್ಯ, ವೈಟ್‌ಫೀಲ್ಡ್ ಅಭಿವೃದ್ಧಿ'

|
Google Oneindia Kannada News

ಬೆಂಗಳೂರು, ಜೂ. 26 : ಸ್ಮಾರ್ಟ್ ಸಿಟಿ ಯೋಜನೆಗೆ ಬೆಂಗಳೂರು ನಗರವನ್ನು ಆಯ್ಕೆ ಮಾಡಿಕೊಳ್ಳಲಾಗುವುದಿಲ್ಲ. ಆದ್ದರಿಂದ ಪೀಣ್ಯ ಮತ್ತು ವೈಟ್‌ಫೀಲ್ಡ್‌ ಅನ್ನು ಈ ಯೋಜನೆಯಡಿ ಅಭಿವೃದ್ಧಿ ಪಡಿಸುವಂತೆ ಕೇಂದ್ರ ನಗರಾಭಿವೃದ್ಧಿ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಗುರುವಾರ ಪೀಣ್ಯ ಕೈಗಾರಿಕಾ ಸಂಘ ಹಮ್ಮಿಕೊಂಡಿದ್ದ ಪಿಐಎ ಎಕ್ಸ್‌ಪೋ-2015ಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿಗಳು ಪೀಣ್ಯ ಮತ್ತು ವೈಟ್‌ಫೀಲ್ಡ್‌ಅನ್ನು ಸ್ಮಾರ್ಟ್‌ ಸಿಟಿಗಳಾಗಿ ಅಭಿವೃದ್ಧಿಪಡಿಸುವಂತೆ ಕೇಂದ್ರ ನಗರಾಭಿವೃದ್ಧಿ ಸಚಿವ ಎಂ.ವೆಂಕಯ್ಯನಾಯ್ಡು ಅವರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು. [ಸಿಎಂ ಬೆಂಗಳೂರು ರೌಂಡ್ಸ್ : ಪೀಣ್ಯ ಅಭಿವೃದ್ಧಿಗೆ 100 ಕೋಟಿ]

peenya

ಕೇಂದ್ರ ಸರ್ಕಾರ 100 ಸ್ಮಾರ್ಟ್‌ ಸಿಟಿಗಳನ್ನು ನಿರ್ಮಿಸಲು ಯೋಜನೆ ರೂಪಿಸಿದೆ. ಬೆಂಗಳೂರನ್ನು ಸ್ಮಾರ್ಟ್‌ ಸಿಟಿಯಾಗಿ ಅಭಿವೃದ್ಧಿಪಡಿಸಲಾಗುವುದಿಲ್ಲ. ಆದ್ದರಿಂದ ಪೀಣ್ಯ ಮತ್ತು ವೈಟ್‌ಫೀಲ್ಡ್‌ ಆಯ್ಕೆ ಮಾಡಿಕೊಳ್ಳುವಂತೆ ಚರ್ಚೆ ನಡೆಸಲಾಗಿದೆ ಎಂದರು. [ಪೀಣ್ಯ ಇಂಡಸ್ಟ್ರಿ-ನಾಗಸಂದ್ರ ಮೆಟ್ರೋ ಪ್ರಯಾಣದರ ಪಟ್ಟಿ]

ಪೀಣ್ಯದಲ್ಲಿ ಟೌನ್ ಶಿಪ್ ನಿರ್ಮಾಣ : ಪೀಣ್ಯ ಕೈಗಾರಿಕಾ ಪ್ರದೇಶದ ಅಭಿವೃದ್ಧಿಗಾಗಿ 100 ಕೋಟಿ ರೂ.ಗಳ ಯೋಜನೆಯನ್ನು ಘೋಷಣೆ ಮಾಡಲಾಗಿದೆ. ಪೀಣ್ಯದಲ್ಲಿ ಟೌನ್‌ಶಿಪ್‌ ನಿರ್ಮಾಣ ಮಾಡಲು ಗಂಭೀರ ಚಿಂತನೆ ನಡೆಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು. [ನಗರಗಳನ್ನು 'ಸ್ಮಾರ್ಟ್' ಮಾಡುವ 3 ಯೋಜನೆಗೆ ಚಾಲನೆ]

ಮುಂಗಾರು ಅಧಿವೇಶನ ಮುಗಿದ ಬಳಕ ಪೀಣ್ಯದ ಕೈಗಾರಿಕೋದ್ಯಮಿಗಳ ಸಮಸ್ಯೆ ಆಲಿಸಿ, ಪರಿಹರಿಸುವ ಸಂಬಂಧ ಕ್ರಮ ಕೈಗೊಳ್ಳಲಾಗುತ್ತದೆ. ಕೈಗಾರಿಕಾ ಸಂಘಗಳು ಹಾಗೂ ಪ್ರಮುಖ ಉದ್ಯಮಿಗಳೊಂದಿಗೆ ಸಂವಾದ ಕಾರ್ಯಕ್ರಮವನ್ನು ನಡೆಸಲಾಗುತ್ತದೆ ಎಂದು ವಿವರಣೆ ನೀಡಿದರು.

English summary
Karnataka Chief Minister Siddaramaiah said, Peenya and Whitefield will develop as smart cities. We have discuss about this project with union minister of Urban Development M.Venkaiah Naidu.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X