ಕೊಡಗಿನ ಮಕ್ಕಳ ಶಿಕ್ಷಣಕ್ಕಾಗಿ ಮಿಡಿದ ಸಾವಿತ್ರಿ ಬಾ ಪುಲೆ ಚಿತ್ರ ತಂಡ

ಕೊಡಗಿನ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಪೀಪಲ್ ಫಾರ್ ಪೀಪಲ್ ಸಂಸ್ಥೆ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ಆಯೋಜಿಸಿದ್ದ ಸಾವಿತ್ರಿ ಬಾ ಪುಲೆ ಚಲನಚಿತ್ರ ಪ್ರದರ್ಶನ ಏರ್ಪಡಿಸಿತ್ತು. ಕಾರ್ಯಕ್ರಮದ ಫೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದ ವಸತಿಶಾಲೆಗಳ ಕಾರ್ಯನಿರ್ವಾಹಕ ಅಧ್ಯಕ್ಷರಾದ ನಂದನ್ ಕುಮಾರ್ ಅವರು ಸಂತ್ರಸ್ತ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡುವ ಬಗ್ಗೆ ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ಆಶ್ವಾಸನೆ ನೀಡಿದರು.

'ನಮ್ಮದು ಎಂದುಕೊಂಡಿದ್ದ ಮನೆ, ತೋಟ, ಸಮಸ್ತ ಆಸ್ತಿ ಎಲ್ಲವೂ ಪ್ರಾಕೃತಿಕ ದುರಂತದಲ್ಲಿ ಕೊಚ್ಚಿಕೊಂಡು ಹೋಗಿದೆ. ಹೀಗಾಗಿ ತುಂಬಾ ಓದಿ ಏನಾದರೂ ಸಾಧಿಸಬೇಕೆಂಬ ಆಸೆ ದಿಕ್ಕೆಟ್ಟಂತಾಗಿದೆ' ಎಂಬ ಮಾತುಗಳನ್ನಾಡಿದ್ದು ಕೊಡಗಿನ ಮಕ್ಕಂದೂರು ಗ್ರಾಮದ ಸುರಕ್ಷಾ ಎಂಬ ಬಾಲಕಿ.

ಚಿತ್ರನಟಿ ತಾರಾ ಮಾತನಾಡಿ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಹೋರಾಡಿದ ಧೀಮಂತ ಮಹಿಳೆ ಸಾವಿತ್ರಿ ಬಾ ಪುಲೆಯ ಕುರಿತಾದ ಈ ಚಲನಚಿತ್ರ ಪ್ರದರ್ಶನ ಕೊಡಗಿನ ಮಕ್ಕಳಿಗಾಗಿ ನಡೆಸುತ್ತಿರುವುದು ಹೆಚ್ಚು ಅರ್ಥಪೂರ್ಣ. ಸಾವಿತ್ರಿ ಬಾ ಪುಲೆಯವರಿಗೆ ಸಲ್ಲಿಸುವ ಗೌರವ. ಕೊಡಗಿನ ಮಕ್ಕಳಿಗಾಗಿ ಹೆಬ್ಬೆಟ್ಟು ರಾಮಕ್ಕ ಚಲನಚಿತ್ರ ಪ್ರದರ್ಶನವನ್ನೂ ಏರ್ಪಡಿಸಲಾಗುವುದು ಎಂಬ ಭರವಸೆ ನೀಡಿದರು.

ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಅಗತ್ಯ ನೆರವು

ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಅಗತ್ಯ ನೆರವು

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಸ್. ಜಿ ಸಿದ್ದರಾಮಯ್ಯನವರು ಕೊಡಗಿನ ಮಕ್ಕಳ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ತುರ್ತಾಗಿ ಮುಖ್ಯಮಂತ್ರಿಯವರೊಂದಿಗೆ ಸಭೆ ನಡೆಸಿ ವಾಸ್ತವ ಚಿತ್ರಣ ಕಟ್ಟಿಕೊಟ್ಟು ಸರ್ಕಾರದಿಂದ ಹೆಚ್ಚಿನ ಸಹಾಯದ ಅಗತ್ಯದ ಬಗ್ಗೆ ಮನವರಿಕೆ ಮಾಡಿಕೊಡುವುದಾಗಿ ಹೇಳಿದರು.

ಶಾಸಕರಾದ ಅರುಣ್ ಶಹಾಪುರ ಅವರು ಅಧಿವೇಶನದಲ್ಲೂ ಕೊಡಗಿನ ಸಮಸ್ಯೆಯ ಗಂಭೀರತೆ ಗಮನಕ್ಕೆ ಬಂದಿರಲಿಲ್ಲ. ಆದರೆ ಈಗ ಅರ್ಥವಾಗಿದೆ. ಇದನ್ನು ಗಂಭೀರವಾಗಿ ತೆಗೆದುಕೊಂಡು ಸರ್ಕಾರದಿಂದ ಹೆಚ್ಚಿನ ಸಹಾಯ ದೊರಕಿಸಿಕೊಡುವುದಾಗಿ ಹೇಳಿದರು.

ಎಲ್ಲೆಡೆಯಿಂದ ನೆರವು ಹರಿದು ಬರುತ್ತಿವೆ

ಎಲ್ಲೆಡೆಯಿಂದ ನೆರವು ಹರಿದು ಬರುತ್ತಿವೆ

ಪೀಪಲ್ ಫಾರ್ ಪೀಪಲ್ ಸಂಸ್ಥೆ ನಡೆಸಿದ ಈ ಚಲನಚಿತ್ರ ಪ್ರದರ್ಶನದ ತಕ್ಷಣದ ಫಲಶೃತಿ ಎಂಬಂತೆ ನಟ ಪ್ರಕಾಶ್ ರಾಜ್ ಅವರು ಪ್ರಕಾಶ್ ರಾಜ್ ಫೌಂಡೇಶನ್ ವತಿಯಿಂದ 4.89ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ ಮತ್ತು ನಿವೃತ್ತ ಪೊಲೀಸ್ ಅಧಿಕಾರಿ ಗೋಪಾಲ್ ಹೊಸೂರು 5 ಮಂದಿ ಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿ ತೆಗೆದುಕೊಳ್ಳುವ ಭರವಸೆ ನೀಡಿರುವುದಾಗಿ ಪೀಪಲ್ ಫಾರ್ ಪೀಪಲ್ ಸಂಸ್ಥೆಯ ಅಧ್ಯಕ್ಷರಾದ ಚಕ್ರವರ್ತಿ ಚಂದ್ರಚೂಡ್ ತಿಳಿಸಿದರು.

ಅನೇಕ ಗಣ್ಯರು ಭಾಗವಹಿಸಿದ್ದರು

ಅನೇಕ ಗಣ್ಯರು ಭಾಗವಹಿಸಿದ್ದರು

ಎಂ. ಎಸ್. ಮೂರ್ತಿ ಅಂತಾರಾಷ್ಟ್ರೀಯ ಕಲಾವಿದ, ಮಾವಳ್ಳಿ ಶಂಕರ್ ಡಿಎಸ್ ಎಸ್ ಮುಖಂಡರು, ಬಿ. ಗೋಪಾಲ್ ಡಿಎಸ್ ಎಸ್ ಮುಖಂಡರು, ಡಾ. ರಾಜಪ್ಪ ದಳವಾಯಿ, ಡಾ. ಕೆ ಸಿ ಶಿವಾರೆಡ್ಡಿ, ಡಾ. ಟಿ ಗೋವಿಂದರಾಜು, ರಂಗಕರ್ಮಿ ಮಲ್ಲಿಕಾರ್ಜುನ ಸ್ವಾಮಿ ಮಹಾಮನೆ, ಕಾಂಗ್ರೆಸ್ ವಕ್ತಾರರಾದ ನಟರಾಜ್ ಗೌಡ, ಸೂರ್ಯ ಮುಕುಂದರಾಜ್, ಕನ್ನಡಪರ ಸಂಘಟನೆಗಳ ಸದಸ್ಯರು ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಹೆಬ್ಬೆಟ್ ರಾಮಕ್ಕ ಚಲನಚಿತ್ರ ಬೆನಿಫಿಟ್ ಪ್ರದರ್ಶನಕ್ಕೆ ಅವಕಾಶ ಕೊಡುವುದಾಗಿ ಇದೇ ವೇಳೆ ಘೋಷಿಸಿದರು...

ಕೊಡಗಿಗಾಗಿ ನೆರವಾಗಲು ಪೀಪಲ್ ಫಾರ್ ಪೀಪಲ್

ಕೊಡಗಿಗಾಗಿ ನೆರವಾಗಲು ಪೀಪಲ್ ಫಾರ್ ಪೀಪಲ್

ಕೊಡಗಿನ ಅನಾಹುತಕ್ಕೆ ನೆರವಾಗಲು ಪತ್ರಕರ್ತ, ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ಹಾಗೂ ಸಮಾನ ಮನಸ್ಕರ ನೇತೃತ್ವದಲ್ಲಿ ಆರಂಭವಾದ ಪೀಪಲ್ ಫಾರ್ ಕೊಡಗು ತಂಡವು ರಂಗಸಪ್ತಾಹ ಹೆಸರಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಂಡು ಯಶಸ್ಸು ಗಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+