ಕುಡಿಯುವ ನೀರಿಲ್ಲದೇ ಜನ ಬೆಂಗಳೂರಿಗೆ ಬಾಯ್ ಹೇಳುತ್ತಿದ್ದಾರೆ: ಆರ್.ಅಶೋಕ್

ಬೆಂಗಳೂರು, ಮಾರ್ಚ್ 28: ಬೆಂಗಳೂರು ನಗರಕ್ಕೆ ಬಿಜೆಪಿಯು ಅಗತ್ಯ ಮೂಲ ಸೌಲಭ್ಯ ನೀಡಿತ್ತು. ಆದರೆ ಅಧಿಕಾರಕ್ಕೆ ಬಂದು ಕಳೆದ ಹತ್ತು ತಿಂಗಳಲ್ಲಿ ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ಬಾಯ್ ಬಾಯ್ ಬೆಂಗಳೂರು ಮಾಡಿದೆ. ನಿಮಗೆ ನಗರದ ಜನರ ಬಳಿ ಹೋಗಿ ಮತಯಾಚಿಸುವ ಧೈರ್ಯವಿದೆಯೇ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದರು.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಆರ್‌.ಅಶೋಕ್ ಅವರು ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ ನಡೆಸಿದರು. ನಂತರ ಆರ್.ಅಶೋಕ್ ಸುದ್ದಿಗಾರರ ಬಳಿ ಮಾತನಾಡಿದರು.

People- Many Companies Say Bye for Bengaluru Due to Water Issue Says R Ashok

ಬೆಂಗಳೂರಿನಲ್ಲಿ ಜನರ ಬಳಿ ಹೋಗಿ ಮತ ಯಾಚಿಸುವ ಧೈರ್ಯ ಬಿಜೆಪಿಗೆ ಇದೆ. ಆದರೆ ಕಾಂಗ್ರೆಸ್‌ಗೆ ಅಂತಹ ಧೈರ್ಯವಿಲ್ಲ. ಅಲ್ಲದೆ ಜನರು ಕಾಂಗ್ರೆಸ್‌ಗೆ ಬಾಯ್‌ ಬಾಯ್‌ ಹೇಳಲು ತೀರ್ಮಾನಿಸಿದ್ದಾರೆ. ನೀರಿನ ಸಮಸ್ಯೆ ಸೃಷ್ಟಿಯಾಗಿ ಜನರು ಬೆಂಗಳೂರಿಗೆ ಬಾಯ್ ಹೇಳುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಬೆಂಗಳೂರಲ್ಲಿ ಬಿಜೆಪಿಯಿಂದ ಸಾಕಷ್ಟು ಕೆಲಸ

ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಸಿಕ್ಕಿದೆ. ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ಮೆಟ್ರೊ ಯೋಜನೆಯನ್ನು ಅಟಲ್‌ ಬಿಹಾರಿ ವಾಜಪೇಯಿ ಅವರು ನೀಡಿದರು. ಬೆಂಗಳೂರಿಗೆ ವಿಮಾನ ನಿಲ್ದಾಣವನ್ನೂ ನೀಡಿದ್ದಾರೆ. ಉಪನಗರ ರೈಲು ಯೋಜನೆ, ಕಾವೇರಿ ಕುಡಿಯುವ ನೀರಿನ ಯೋಜನೆಯನ್ನು ಬಿಜೆಪಿ ನೀಡಿದೆ.

ಈ ಮೇಲಿನ ಎಲ್ಲ ಕಾರಣಗಳಿಂದಾಗಿ ಜನರ ಬಳಿ ಹೋಗಿ ಮತಯಾಚಿಸುವ ಹಕ್ಕು ಬಿಜೆಪಿಗೆ ಇದೆ. ಆದರೆ ಕಾಂಗ್ರೆಸ್‌ ಸರ್ಕಾರ ಕಳೆದ ಹತ್ತು ತಿಂಗಳಲ್ಲಿ ಬ್ರ್ಯಾಂಡ್‌ ಬೆಂಗಳೂರು ಎಂದು ಹಾರ್ಮ್ ಬೆಂಗಳೂರನ್ನು ಸೃಷ್ಟಿಸಿದೆ. ಈಗ ಬಾಯ್‌ ಬಾಯ್‌ ಬೆಂಗಳೂರು ಮಾಡಿದ್ದು, ಕುಡಿಯುವ ನೀರಿಲ್ಲದೆ ಜನರು ನಗರವನ್ನು ಬಿಟ್ಟು ಹೊರಟಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

People- Many Companies Say Bye for Bengaluru Due to Water Issue Says R Ashok

ಬೆಂಗಳೂರು ಬಿಟ್ಟು ಹೋಗುತ್ತಿವೆ ಕಂಪನಿಗಳು

ಕೇರಳ ಸರ್ಕಾರದಿಂದ ಐಟಿ ಕಂಪನಿಗಳ ಮುಖ್ಯಸ್ಥರಿಗೆ ಪತ್ರ ಬಂದಿದೆ. ಬೆಂಗಳೂರಲ್ಲಿ ಮುಖ ತೊಳೆಯಲು ಕೂಡ ನೀರಲ್ಲದಿರುವುದರಿಂದ ನಮ್ಮಲ್ಲಿಗೆ ಬನ್ನಿ ಎಂದು ಆಹ್ವಾನಿಸಿದ್ದಾರೆ. ಅನೇಕ ಕಂಪನಿಗಳು ನಗರವನ್ನು ಬಿಟ್ಟು ಹೋಗುತ್ತಿವೆ. ಕಾಂಗ್ರೆಸ್‌ನ ದುರಾಡಳಿತ, ದುರ್ವರ್ತನೆಯನ್ನು ನೋಡಿ ಜನರು ಕಾಂಗ್ರೆಸ್‌ಗೆ ಬಾಯ್‌ ಬಾಯ್‌ ಹೇಳಲಿದ್ದಾರೆ ಎಂದು ಭವಿಷ್ಯ ನುಡಿದರು.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷ ಬಲವಂತವಾಗಿ ಅಭ್ಯರ್ಥಿಯನ್ನು ಎಳೆದು ತಂದು ನಿಲ್ಲಿಸಿದೆ. ಇದು ಅವರ ಚುನಾವಣಾ ಗಂಭೀರತೆ ಏನೆಂದು ತೋರಿಸುತ್ತದೆ. ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ಪರವಾಗಿ ಚುನಾವಣೆ ಪ್ರಚಾರ ನಡೆಸುವ ಕುರಿತು ಸಭೆಯಲ್ಲಿ ಚರ್ಚೆ ಆಗಿದೆ ಎಂದು ಮಾಹಿತಿ ನೀಡಿದರು.

ಬೆಂ.ದಕ್ಷಿಣ ಕ್ಷೇತ್ರದಲ್ಲಿ ಅಧಿಕ ಲೀಡ್

ಪ್ರಚಾರ ಕಾರ್ಯದಲ್ಲಿ ನಾವು ಶಾಸಕರು ಹಾಗೂ ಸಂಸದರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಮನೆಮನೆಗೆ ತಲುಪಿಸಲಿದ್ದೇವೆ. ಜೊತೆಗೆ ದೇಶದಲ್ಲಿ ಪ್ರಧಾನಿ ಮೋದಿಯವರು ಮಾಡಿದ ಕೆಲಸನವನ್ನು ಜನರಿಗೆ ತಿಳಿಸಿದ್ದೇವೆ ಎಂದರು. ಕಳೆದ ಬಾರಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿಗೆ 3.30 ಲಕ್ಷ ಲೀಡ್ ಇತ್ತು. ಈ ಭಾರಿ ಅದಕ್ಕೂ ಹೆಚ್ಚು ಮತಗಳು ಬರಲಿವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+