ಎಲ್‌ಡಿಎಫ್‌, ಯುಡಿಎಫ್‌ ಬಗ್ಗೆ ಬೇಸತ್ತ ಕೇರಳದಲ್ಲಿ ಬಿಜೆಪಿಯತ್ತ ಒಲವು!

ಬೆಂಗಳೂರು, ಮಾ. 01: ಕೇರಳದಲ್ಲಿ ಕಮ್ಯುನಿಸ್ಟ್‌ ಪಕ್ಷಗಳ ನೇತೃತ್ವದ ಎಲ್‌ಡಿಎಫ್‌ ಹಾಗೂ ಕಾಂಗ್ರೆಸ್‌ ನೇತೃತ್ವದ ಯುಡಿಎಫ್ ಭಾರತೀಯ ರಾಜಕಾರಣದಲ್ಲಿ ಅಪ್ರಸ್ತುತವಾಗಿವೆ. ಆ ರಾಜ್ಯದ ಜನರು ಈ ಬಾರಿ ಬದಲಾವಣೆ ಬಯಸುತ್ತಿದ್ದಾರೆಂದು ಕೇರಳ ರಾಜ್ಯದ ಬಿಜೆಪಿ ಸಹ ಪ್ರಭಾರಿ, ಡಿಸಿಎಂ ಡಾ.ಸಿ.ಎನ್.‌ ಅಶ್ವಥ್ ನಾರಾಯಣ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಕೇರಳದಲ್ಲಿ ಇವೆರಡೂ ರಾಜಕೀಯ ಒಕ್ಕೂಟಗಳು ಸಂಪೂರ್ಣ ವಿಫಲವಾಗಿವೆ. ಕೇವಲ ವೋಟ್‌ಬ್ಯಾಂಕ್‌ ಪಾಲಿಟಿಕ್ಸ್‌ ಮಾಡಿಕೊಂಡು ಕಳೆದ ಎಪ್ಪತ್ತು ವರ್ಷಗಳಿಂದ ಆ ರಾಜ್ಯವನ್ನು ಕತ್ತಲೆಯಲ್ಲೇ ಇಟ್ಟಿವೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಒಲವು ವ್ಯಕ್ತವಾಗುತ್ತಿದೆ ಎಂದಿದ್ದಾರೆ.

ಈಗಿನ ಎಲ್‌ಡಿಎಫ್‌ ಸರ್ಕಾರವಂತೂ ರಾಜಕೀಯ ಕಿರುಕುಳ ನೀಡುವುದು, ರಾಜಕೀಯ ಕೊಲೆಗಳು ಹಾಗೂ ಸೇಡಿನ ರಾಜಕೀಯದಲ್ಲಿ ನಿರತವಾಗಿದೆ. ಆ ಎರಡೂ ರಾಜಕೀಯ ಒಕ್ಕೂಟಗಳು ಎಲ್ಲ ಜನರಿಗೂ ಸಲ್ಲುವ ಪಕ್ಷಗಳಲ್ಲ. ಕೇವಲ ಜಾತಿ-ಜಾತಿಗಳ ನಡುವೆ ವೈಷಮ್ಯ ಭಿತ್ತಿ ಆ ಮೂಲಕ ರಾಜಕೀಯ ಲಾಭ ಪಡೆಯುತ್ತಿವೆ ಎಂದು ಆರೋಪಿಸಿದ್ದಾರೆ.

 People of Kerala state are Seeking change this Assembly Election: Dr. CN Ashwath Narayan

ನಮ್ಮ ಭಾರತೀಯ ಸಂಸ್ಕೃತಿ, ಆಚಾರ ವಿಚಾರಕ್ಕೆ ವಿರುದ್ಧವಾಗಿರುವ ಎಲ್‌ಡಿಎಫ್‌ನಿಂದ ಕೇರಳಕ್ಕೆ ತುಂಬಾ ಹಾನಿಯಾಗಿದೆ. ಕಮ್ಯುನಿಸ್ಟ್‌ ಪಕ್ಷಗಳು ನಮ್ಮ ದೇಶದಲ್ಲಿ ಅಪ್ರಸ್ತುತವಾಗಿವೆ. ಎಲ್ಲ ಕಡೆ ಅಧಿಕಾರ ಕಳೆದುಕೊಂಡು ಈ ಕೇರಳದಲ್ಲೂ ನಿರ್ನಾಮದ ಹಂತದಲ್ಲಿದೆ. ಅದೇ ರೀತಿ ಕಾಂಗ್ರೆಸ್‌ ಪಕ್ಷವೂ ದೇಶಾದ್ಯಂತ ಹೇಳ ಹೆಸರಿಲ್ಲದೆ ಹೋಗುತ್ತಿದೆ ಎಂದು ಡಾ. ಅಶ್ವಥ್ ನಾರಾಯಣ ಹೇಳಿದ್ದಾರೆ.

ಬಿಜೆಪಿ ಬಗ್ಗೆ ಕೇರಳದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅನೇಕ ಪಕ್ಷಗಳಿಗೆ ಅಲ್ಲಿ ನಾಯಕತ್ವವೇ ಇಲ್ಲ. ಆ ರಾಜ್ಯದ ಉದ್ದಗಲಕ್ಕೂ ನಮ್ಮ ಕಾರ್ಯಕರ್ತರು ಇದ್ದಾರೆ. ಈ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+