ಜನರು ಭ್ರಷ್ಟಾಚಾರದ ಅಂತ್ಯವನ್ನು ಬಯಸಿದ್ದಾರೆ: ಪ್ರಿಯಾಂಕಾ ಗಾಂಧಿ

ಬೆಂಗಳೂರು, ಮೇ 8: ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದ ಭಾಗವಾಗಿ ಬೆಂಗಳೂರಿಗೆ ಆಗಮಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸೋಮವಾರ ಮಾತನಾಡಿ, ರಾಜ್ಯದ ಜನತೆ ಭ್ರಷ್ಟಾಚಾರಕ್ಕೆ ಅಂತ್ಯ ಹಾಡಲು ಬಯಸುತ್ತಿದ್ದು, ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.

ನಾವು ತುಂಬಾ ಆತ್ಮವಿಶ್ವಾಸ ಮತ್ತು ಭರವಸೆಯನ್ನು ಹೊಂದಿದ್ದೇವೆ. ನಾನು ಸಂಖ್ಯೆಗಳ ಭವಿಷ್ಯ ನುಡಿಯುವವಳಲ್ಲ. ನಾವು ಸಾರ್ವಜನಿಕರಿಂದ ಪಡೆದ ಪ್ರತಿಕ್ರಿಯೆಯನ್ನು ಮಾತ್ರ ನಾನು ನೋಡುತ್ತೇನೆ. ಕರ್ನಾಟಕದ ಜನರು ಭ್ರಷ್ಟಾಚಾರವನ್ನು ಕೊನೆಗೊಳಿಸಬೇಕೆಂದು ಬಯಸುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಬೃಹತ್ ರೋಡ್ ಶೋ ವೇಳೆ ಪ್ರಿಯಾಂಕಾ ಗಾಂಧಿ ಹೇಳಿದರು.

People want an end to corruption: Priyanka Gandhi

ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರದ ಕೊನೆಯ ದಿನದಂದು ಪ್ರಿಯಾಂಕಾ ಸೋಮವಾರ ಬೆಂಗಳೂರಿನ ವಿಜಯನಗರದಲ್ಲಿ ರೋಡ್ ಶೋ ನಡೆಸಿದರು. ಕ್ಷೇತ್ರದಿಂದ ಪುನರಾಯ್ಕೆ ಬಯಸುತ್ತಿರುವ ವಿಜಯನಗರ ಶಾಸಕ ಎಂ ಕೃಷ್ಣಪ್ಪ ಮತ್ತು ಪಕ್ಕದ ಗೋವಿಂದರಾಜನಗರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾ ಕೃಷ್ಣ ಅವರ ಜೊತೆಗಿದ್ದರು.

ಬೃಹತ್ ರೋಡ್‌ಶೋನಲ್ಲಿ, ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ಭಾಗವಹಿಸಿದ್ದರು ಮತ್ತು ಕಾರ್ಯಕ್ರಮಕ್ಕೆ ಹಾಜರಾಗಲು ಹೆಚ್ಚಿನ ಸಂಖ್ಯೆಯ ಜನರು ಬೀದಿಗಳಲ್ಲಿ ಜಮಾಯಿಸಿದರು. ಕರ್ನಾಟಕದ ಪ್ರಗತಿಗೆ, ಜನಪರ ಸರ್ಕಾರಕ್ಕೆ, ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ, ಮತ ಚಲಾಯಿಸಿ. ಭ್ರಷ್ಟಾಚಾರ ಮುಕ್ತ ಹಾಗೂ ಜನಸ್ನೇಹಿ ಯೋಜನೆಗಳ ಮೂಲಕ ಜನತೆಗೆ ಸುಸ್ಥಿರ ಬದುಕನ್ನು ನೀಡುವ "ಗ್ಯಾರಂಟಿ" ವಾಗ್ದಾನ ಮಾಡುತ್ತೇವೆ. ನಿಮ್ಮ ಮತ ನಿಮ್ಮ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗಿರಲಿ ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ.

People want an end to corruption: Priyanka Gandhi

ಮತ ಚಲಾಯಿಸುವ ಮುನ್ನ, ನಿಮ್ಮ ಮನೆಯ ಗ್ಯಾಸ್ ಸಿಲಿಂಡರ್ ಗೆ ನಮಸ್ಕರಿಸಿ ಮತದಾನ ಮಾಡಿ. ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿ ಸಾಮಾನ್ಯ ಜನತೆಯ ಬದುಕನ್ನು ಕಂಗಲಾಗಿಸಿದ ಬಿಜೆಪಿ ಪಕ್ಷವನ್ನು ಸೋಲಿಸಿ, ಕಾಂಗ್ರೆಸ್ ಗೆಲ್ಲಿಸಿ ಎಂದು ಕಾಂಗ್ರೆಸ್‌ ಮನವಿ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+