ಶಾಸಕರ ಭವನಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ!

ಬೆಂಗಳೂರು, ಜೂನ್ 19 : ಶಾಸಕರ ಭವನಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಸ್ಪೀಕರ್ ರಮೇಶ್ ಕುಮಾರ್ ಅವರು ನೀಡಿದ ಈ ಆದೇಶ ತಕ್ಷಣದಿಂದಲೇ ಜಾರಿಗೆ ಬಂದಿದೆ.

ಸ್ಪೀಕರ್ ರಮೇಶ್ ಕುಮಾರ್ ಅವರು ಸೋಮವಾರ ಈ ಕುರಿತು ಹೇಳಿಕೆ ನೀಡಿದ್ದರು. ರಾತ್ರಿ 8 ಗಂಟೆಯಿಂದ ಬೆಳಗ್ಗೆ 9 ಗಂಟೆಯ ತನಕ ಶಾಸಕರ ಭವನಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.

ಶಾಸಕರಿಗೆ ಆಗುತ್ತಿರುವ ಕಿರಿಕಿರಿಯನ್ನು ತಪ್ಪಿಸಲು ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಸೋಮವಾರದಿಂದಲೇ ಈ ಆದೇಶ ಅಧಿಕೃತವಾಗಿ ಜಾರಿಗೆ ಬಂದಿದೆ.

Legislator

ವಿಧಾನಸೌಧದ ಪಕ್ಕದಲ್ಲಿಯೇ ಶಾಸಕರ ಭವನವಿದೆ. ಶಾಸಕರು ಕ್ಷೇತ್ರದಲ್ಲಿ ಇದ್ದರೂ ಅವರ ಬೆಂಬಲಿಗರು ಇಲ್ಲಿ ಶಾಸಕರಿಗೆ ನಿಗದಿಯಾದ ಕೊಠಡಿಯಲ್ಲಿ ವಾಸ್ತವ್ಯ ಹೂಡುತ್ತಿದ್ದರು. ಈಗ ಜನರಿಗೆ ರಾತ್ರಿ ಶಾಸಕರ ಭವನಕ್ಕೆ ಜನರಿಗೆ ಪ್ರವೇಶ ಇಲ್ಲದಂತಾಗಿದೆ.

ಹೊಸ ಶಾಸಕರಿಗೆ ತರಬೇತಿ : '2018ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹೊಸದಾಗಿ ಆಯ್ಕೆಯಾಗಿರುವ ಶಾಸಕರಿಗೆ ಮೂರು ದಿನದ ತರಬೇತಿ ನೀಡಲಾಗುತ್ತದೆ' ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ. ಮೈಸೂರಿನಲ್ಲಿ ತರಬೇತಿ ನಡೆಯಲಿದ್ದು, ದಿನಾಂಕ ಇನ್ನೂ ನಿಗದಿಯಾಗಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+