ಆರ್. ಆರ್. ನಗರದಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ; ಕುಸುಮಾ
ಬೆಂಗಳೂರು, ನವೆಂಬರ್ 03: ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಗೆ ಮತದಾನ ನಡೆಯುತ್ತಿದೆ. ಬೆಳಗ್ಗೆ 9 ಗಂಟೆಯ ತನಕ ಶೇ 8ರಷ್ಟು ಮತದಾನವಾಗಿದೆ. ಜನರು ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ.
ಆರ್. ಆರ್. ನಗರ ಉಪ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಹೆಚ್. ಕುಸುಮಾ ತಂದೆ ಮತ್ತು ತಾಯಿ ಜೊತೆ ಆಗಮಿಸಿ ಮತದಾನ ಮಾಡಿದರು. ಜ್ಞಾನಭಾರತಿ ವಾರ್ಡ್‌ನ 304ನೇ ಮತಗಟ್ಟೆಯಲ್ಲಿ ಹಕ್ಕು ಚಲಾವಣೆ ಮಾಡಿದರು.
ಮತದಾನ ಮಾಡುವುದಕ್ಕೂ ಮೊದಲು ಹೆಚ್. ಕುಸುಮಾ ವಿಜಯನಗರದ ಆದಿಚುಂಚನಗಿರಿ ಮಠದ ಆವರಣದಲ್ಲಿರುವ ಕಾಲಭೈರವ ಹಾಗೂ ಗಂಗಾಧರೇಶ್ವರ ಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ತಂದೆಯ ಆಶೀರ್ವಾದ ಪಡೆದರು.

ಮತದಾನದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಮತದಾನ ಪ್ರತಿಯೊಬ್ಬರ ಹಕ್ಕು, ಕೋವಿಡ್ ಸಂದರ್ಭದಲ್ಲಿ ಯಾವುದೇ ಹಿಂಜರಿಕೆ ಇಲ್ಲದೇ ಎಲ್ಲರೂ ಮನೆಯಿಂದ ಹೊರಬಂದು ಮತದಾನ ಮಾಡಿ" ಎಂದು ಕರೆ ನೀಡಿದರು.
"ಆರ್. ಆರ್. ನಗರ ಕ್ಷೆತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ವಿಶ್ವಾಸವಿದೆ. ಜನರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲಿದ್ದಾರೆ ಎಂಬ ಭರವಸೆ ಇದೆ" ಎಂದು ಹೆಚ್. ಕುಸುಮಾ ಹೇಳಿದರು.












Click it and Unblock the Notifications