Peripheral Ring Road: ₹24,000 ಕೋಟಿ ವೆಚ್ಚದಲ್ಲಿ ಪೆರಿಫೆರಲ್ ರಿಂಗ್ ರಸ್ತೆ ಅಭಿವೃದ್ಧಿ, ಎಲ್ಲಿ?-ಇಲ್ಲಿದೆ ಮಾಹಿತಿ
ಬೆಂಗಳೂರು, ಫೆಬ್ರವರಿ, 14: ರಾಜ್ಯ ಸರ್ಕಾರವು ಪೆರಿಫೆರಲ್ ರಿಂಗ್ ರಸ್ತೆ (ಪಿಆರ್‌ಆರ್) ಅನ್ನು ಎಕನಾಮಿಕ್ ಕಾರಿಡಾರ್ ಆಗಿ ಅಭಿವೃದ್ಧಿಪಡಿಸಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಹಾಗಾದರೆ ಇದಕ್ಕೆ ತಗಲುವ ವೆಚ್ಚ ಎಷ್ಟು ಕೋಟಿ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ವಿಧಾನಸಭೆಯಲ್ಲಿ ಶಾಸಕ ಶೈಲೇಂದ್ರ ಬೆಲ್ದಾಳೆ ಅವರ ಕಾಲ್-ಅಟೆನ್ಷನ್ ನೋಟಿಸ್‌ಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಬೆಂಗಳೂರಿಗೆ ಪಿಆರ್‌ಆರ್ ಪ್ರಸ್ತಾಪಿಸಿ 15 ವರ್ಷಗಳಾಗಿವೆ. ಹಿಂದೆ, ಬೇರೆ ಬೇರೆ ಸರ್ಕಾರಗಳು ಇದನ್ನು ಕೈಗೆತ್ತಿಕೊಳ್ಳಲು ಪ್ರಯತ್ನಿಸಿದವು. ಆದರೆ ಯಾವುದೇ ಬಿಡ್‌ದಾರರು ಮುಂದೆ ಬರದ ಕಾರಣ ವಿಫಲವಾಯಿತು. ಹಾಗಾಗಿ ಸರ್ಕಾರವು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳುತ್ತಿದೆ ಎಂದು ಹೇಳಿದರು.

ಟೆಂಡರ್ ಕರೆಯಲಾಗಿದೆ. ಟೆಂಡರ್‌ಗೆ ಅರ್ಜಿ ಸಲ್ಲಿಸಲು ಫೆಬ್ರವರಿ 29 ಕೊನೆಯ ದಿನವಾಗಿದೆ. ಇಡೀ ಯೋಜನೆಗೆ 24,000 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ಇನ್ನು ಭೂಸ್ವಾಧೀನ ಕುರಿತು ಮಾತನಾಡಿದ ಅವರು, ಪಿಆರ್‌ಆರ್ ಯೋಜನೆಗೆ 2,596 ಹೆಕ್ಟೇರ್ ಭೂಮಿ ಅಗತ್ಯವಿದ್ದು, ಅದರಲ್ಲಿ 220 ಹೆಕ್ಟೇರ್ ರಾಜ್ಯ ಸರ್ಕಾರಕ್ಕೆ ಸೇರಿದೆ. "ಇದರರ್ಥ ನಾವು ರೈತರು ಸೇರಿದಂತೆ ಖಾಸಗಿ ವ್ಯಕ್ತಿಗಳಿಂದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬೇಕು" ಎಂದು ಹೇಳಿದರು.












Click it and Unblock the Notifications