ಗಣೇಶ ಚತುರ್ಥಿ 2024: ಅನುಮತಿ ನೀಡಲು ಏಕಗವಾಕ್ಷಿ ವ್ಯವಸ್ಥೆ, ಆಯೋಜಕರ ಬೇಡಿಕೆಗಳು
ಬೆಂಗಳೂರು, ಆಗಸ್ಟ್ 21: ಎರಡು ವಾರಗಳಲ್ಲಿ ಗಣೇಶ ಚತುರ್ಥಿ ಎದುರಾಗಲಿದೆ. ಬೆಂಗಳೂರಿನಲ್ಲಿ ಗಣೇಶ ಪ್ರತಿಷ್ಠಾಪನೆಗೆ ಸಿದ್ಧತೆಗಳು ಈಗಾಗಲೇ ಆರಂಭವಾಗಿವೆ. ಈ ಕುರಿತು ಗಣೇಶ್ ಪ್ರತಿಷ್ಠಾಪನೆ ಆಯೋಜಕರು ಬಿಬಿಎಂಪಿಗೆ ಒಂದಷ್ಟು ಸಲಹೆ ನೀಡಿದ್ದಾರೆ. ಸಾರ್ವಜನಿಕ ಗಣೇಶ ಕೂರಿಸುವವರಿಗೆ ಅನುಮತಿ ಪತ್ರ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಪ್ಡೇಟ್ ಮಾಹಿತಿ ನೀಡಿದ್ದಾರೆ.
ಗಣೇಶ ಚತುರ್ಥಿ ಆಚರಣೆ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಬೆಂಗಳೂರು ನಗರ ಪೊಲೀಸ್ ಜಂಟಿ ಸಹಯೋಗದಲ್ಲಿ ಇಂದು ಪುಟ್ಟಣ್ಣ ಚೆಟ್ಟಿ ಪುರಭವನ (ಟೌನ್ ಹಾಲ್) ದಲ್ಲಿ ನಡೆದ "ಶಾಂತಿ ಸೌಹಾರ್ದತೆ ಸಭೆ ನಡೆಯಿತು.

ಈ ವೇಳೆ ಮಾತನಾಡಿದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ಬೆಂಗಳೂರಿನ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಅನುವಾಗುವಂತೆ ಪಾಲಿಕೆಯ 63 ಉಪ ವಿಭಾಗ ಕಛೇರಿಗಳಲ್ಲಿ ಏಕಗವಾಕ್ಷಿ ಪದ್ದತಿಯಲ್ಲಿ ಒಂದೇ ಸೂರಿನಡಿ (Single Window System) ಅನುಮತಿ ಪತ್ರವನ್ನು ಪಡೆಯಬಹುದಾಗಿದೆ ಎಂದು ತಿಳಿಸಿದರು.
ಈ ವ್ಯವಸ್ಥೆಯಲ್ಲಿ ಯಾರೆಲ್ಲ ಇರಲಿದ್ದಾರೆ
ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಅನುವಾಗುವಂತೆ ಪಾಲಿಕೆಯ 63 ಉಪ ವಿಭಾಗ ಕಛೇರಿಗಳಲ್ಲಿ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಿ ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗುಗುವುದು.
63 ಏಕಗವಾಕ್ಷಿ ಕೇಂದ್ರಗಳ ವಿಳಾಸ ಹಾಗೂ ಏಕಗವಾಕ್ಷಿ ಕೇಂದ್ರಗಳಲ್ಲಿರುವ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಇಲಾಖೆಯ ನೋಡಲ್ ಅಧಿಕಾರಿಗಳು ವಿವರವಾದ ಮಾಹಿತಿಯನ್ನು ಶೀಘ್ರವೇ ಬಿಡುಗಡೆ ಮಾಡಲಾಗುತ್ತದೆ. ಅದರನುಸಾರ ಗಣೇಶ ಮೂರ್ತಿಗಳನ್ನಿಡುವವರು ಏಕಗವಾಕ್ಷಿ ಸ್ಥಳಕ್ಕೆ ಭೇಟಿ ನೀಡಿ ಒಂದೇ ಸ್ಥಳದಲ್ಲಿ ಅನುಮತಿ ಪಡೆಯಬಹುದೆಂದು ಮಾಹಿತಿ ನೀಡಿದರು.
ಹಬ್ಬದ ಆಚರಣೆ, ವಿಸರ್ಜನೆಗೆ ಸಿದ್ಧತೆ
ಕೆರೆಗಳ ಬಳಿಯಿರುವ ಕಲ್ಯಾಣಿಗಳಲ್ಲಿ ಗಣೇಶ ವಿಸರ್ಜನೆಗಾಗಿ ಅಗತ್ಯ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿರುತ್ತದೆ. ಪಿಒಪಿ ಗಣೇಶ ಮೂರ್ತಿಗಳನ್ನು ನಿಷೇಧಿಸಲಾಗಿದೆ. ಯಾರೂ ಕೂಡಾ ಪಿಒಪಿ ಗಣೇಶ ಮೂರ್ತಿಗಳನ್ನು ಖರೀದಿಸದೆ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನಿಟ್ಟು ಪೂಜಿಸಲು ತಿಳಿಸಿದರು.
ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿ ವರ್ಷದಂತೆ ಪಾಲಿಕೆ ವತಿಯಿಂದ ಗಣೇಶ ವಿಸರ್ಜನೆಗೆ ಹಲಸೂರು ಕೆರೆ ಸೇರಿದಂತೆ ಇನ್ನಿತರೆ ಪ್ರಮುಖ ಕೆರೆಗಳ ಕಲ್ಯಾಣಿಗಳಲ್ಲಿ ಸೂಕ್ತ ವ್ಯವಸ್ಥೆ ಮಾಡಿಕೊಂಡು ಸರಿಯಾಗಿ ವಿಸರ್ಜನೆ ಮಾಡಲು ಅವಕಾಶ ಮಾಡಿಕೊಡಲಾಗುವುದು. ಪ್ರಮುಖ ಸ್ಥಳ/ಜಂಕ್ಷನ್ ಮತ್ತು ಅವಶ್ಯಕತೆ ಇರುವ ಕಡೆ ವಾರ್ಡ್ ವಾರು ತಾತ್ಕಾಲಿಕವಾಗಿ ಸಂಚಾರಿ ವಿಸರ್ಜನಾ ಘಟಕ (ಮೊಬೈಲ್ ಟ್ಯಾಂಕ್) ಗಳನ್ನು ಪ್ರತಿ ವರ್ಷದಂತೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಹೇಳಿದರು.

ಗಣೇಶ ಮೂರ್ತಿಗಳ ವಿಸರ್ಜನೆಗೆ ಗುರುತಿಸಿರುವ ಕೆರೆಗಳ ಕಲ್ಯಾಣಿಗಳ ಬಳಿ ಭದ್ರತೆಯ ದೃಷ್ಠಿಯಿಂದ ಪೊಲೀಸ್ ವ್ಯವಸ್ಥೆಯ ಜೊತೆಗೆ ಬ್ಯಾರಿಕೇಡಿಂಗ್, ಸಿಸಿಟಿವಿ, ವಿದ್ಯುತ್ ದ್ವೀಪ, ನುರಿತ ಈಜುಗಾರರ ವ್ಯವಸ್ಥೆ, ಕ್ರೇನ್ ಗಳ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ ಎಂದು ತಿಳಿಸಿದರು.
ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ್ ರವರು ಮಾತನಾಡಿ, ಪ್ರತಿ ವರ್ಷದಂತೆ ಶಾಂತಿ ಸೌಹಾರ್ದತೆಯಿಂದ ಗಣೇಶ ಹಬ್ಬವನ್ನು ಆಚರಿಸಬೇಕು. ಈಗಾಗಲೇ ಎಲ್ಲಾ ಕಡೆ ಶಾಂತಿ ಸಭೆಗಳನ್ನು ನಡೆಸಲಾಗಿದೆ. ಈ ಬಾರಿ ಯಾವುದೇ ರೀತಿಯ ಅನಾನುಕೂಲವಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಬಿಬಿಎಂಪಿ ಪ್ರತಿಷ್ಠಾಪನ ಆಯೋಜಕರ ಸಲಹೆಗಳೇನು?
* ಪಿಒಪಿ ಗಣೇಶ ಮೂರ್ತಿಗಳನ್ನು ಕಡ್ಡಾಯವಾಗಿ ನಿಷೇಧಿಸಿ.
* ಏಕ ಗವಾಕ್ಷಿ ಪದ್ದತಿಯನ್ನು ಸರಿಯಾಗಿ ಜಾರಿಗೊಳಿಸಿ.
* ಗಣಪತಿ ವಿಸರ್ಜನೆ ಮಾಡಲು ಸೂಕ್ತವಾದ ಸ್ಥಳ ನಿಗಧಿಪಡಿಸಿ, ವಿಸರ್ಜನೆಗೆ ಅವಕಾಶ ಮಾಡಿಕೊಡಲು ಮನವಿ
* ಸೂಕ್ಷ್ಮ ಪ್ರದೇಶಗಳಲ್ಲಿ ಸರಿಯಾದ ಪೊಲೀಸ್ ಭದ್ರತೆ ನೀಡಲು ಮನವಿ.
* ಗಣೇಶ ವಿಸರ್ಜನೆಯ ಮೆರವಣಿಗೆಯ ವೇಳೆ ಸಂಚಾರದಟ್ಟಣೆಯಾಗದಂತೆ ಕ್ರಮವಹಿಸಲು ಮನವಿ.
* ಗಣೇಶ ವಿಸರ್ಜನಾ ಸಮಯದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿಕೊಡಲು ಮನವಿ.
* ಧಾರ್ಮಿಕ ಆಚರಣೆಗಳು ನಡೆಸುವಾಗ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಮನವಿ.
* ಗಣೇಶ ಪ್ರತಿಷ್ಠಾಪನೆಯ ಸ್ಥಳದಲ್ಲಿ ಫ್ಲೆಕ್ಸ್, ಬ್ಯಾನರ್ ಅಳವಡಿಸಲು ಅನುಮತಿ ನೀಡಲು ಮನವಿ.
* ಮೊಬೈಲ್ ಟ್ಯಾಂಕರ್‌ಗಳನ್ನು ಹೆಚ್ಚಾಗಿ ನಿಯೋಜನೆ ಮಾಡಲು ಮನವಿ.
* ಗಣೇಶ ವಿಸರ್ಜನಾ ಮೆರವಣಿಗೆಯ ವೇಳೆ ಬೆಸ್ಕಾಂ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಂಡು ಯಾವುದೇ ವಿದ್ಯುತ್ ಅವಘಡ ನಡೆಯದಂತೆ ನೋಡಿಕೊಳ್ಳಬೇಕು.
* ಕೆರೆಗಳ ಬಳಿಯಿರುವ ಕಲ್ಯಾಣಿಗಳಲ್ಲಿ ವಿಸರ್ಜನೆ ಮಾಡುವ ವೇಳೆ ಸಾಕಷ್ಟು ಗಣೇಶ ಮೂರ್ತಿಗಳನ್ನು ರಸ್ತೆ ಬದಿಯೇ ಇಟ್ಟು ಹೋಗುತ್ತಾರೆ. ಅದನ್ನು ತಪ್ಪಿಸಿ.
* ಮೆರವಣಿಗೆ ಹೋಗುವ ರಸ್ತೆಗಳನ್ನು ಸರಿಯಾಗಿ ದುರಸ್ತಿಪಡಿಸಿಕೊಡಲು ಮನವಿ.
* ಹೆಚ್ಚು ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅವಕಾಶ ನೀಡಬಾರದು.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications