ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಢಂ ಢಂ ಪಟಾಕಿನ ಧಾಂ ಧೂಂ ಅಂತ ಎಲ್ಲೆಂದರಲ್ಲಿ ಮಾರುವಹಾಗಿಲ್ಲ!

|
Google Oneindia Kannada News

ಬೆಂಗಳೂರು, ಅಕ್ಟೋಬರ್ 16: ಹಬ್ಬದ ಸೀಸನ್ ಎಂದು ಎಲ್ಲೆಂದರಲ್ಲಿ ಪಟಾಕಿಗಳನ್ನಿಟ್ಟು ಮಾರಾಟ ಮಾಡುವಂತಿಲ್ಲ, ಕಡ್ಡಾಯವಾಗಿ ಪರವಾನಗಿ ಪಡೆಯಲೇ ಬೇಕು ಎನ್ನುವ ಆದೇಶವನ್ನು ಪೊಲೀಸ್ ಇಲಾಖೆ ಹೊರಡಿಸಿದೆ.

ಮೈಸೂರು ದಸರಾ - ವಿಶೇಷ ಪುರವಣಿ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬಿಬಿಎಂಪಿ ಮೈದಾನಗಳಲ್ಲಿ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಲು ತಾತ್ಕಾಲಿಕ ಮಾರಾಟ ಪರವಾನಗಿಗೆ ಆಸಕ್ತರಿಂದ ಪೊಲೀಸ್ ಇಲಾಖೆ ಅರ್ಜಿ ಆಹ್ವಾನಿಸಿದೆ. ಸುರಕ್ಷತೆಯ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಅಗ್ನಿಶಾಮಕ ಇಲಾಖೆ ಪರಿಶೀಲಿಸಿ ನಿಗದಿ ಪಡಿಸಿದ ಬಿಬಿಎಂಪಿ ಮೈದಾನದಲ್ಲಿ ಚಿಲ್ಲರೆಯಾಗಿ ಪಟಾಕಿ ಮಾರಾಟಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ದೀಪಾವಳಿಗೆ ಪಟಾಕಿ ಹೊಡೆಯಬೇಕಿಲ್ಲ, ಸಿಹಿ ಹಂಚಿದರೂ ಸಾಕು: ಸುಪ್ರೀಂಕೋರ್ಟ್ ದೀಪಾವಳಿಗೆ ಪಟಾಕಿ ಹೊಡೆಯಬೇಕಿಲ್ಲ, ಸಿಹಿ ಹಂಚಿದರೂ ಸಾಕು: ಸುಪ್ರೀಂಕೋರ್ಟ್

ಒಂದೊಮ್ಮೆ ಈ ಸ್ಥಳಗಳನ್ನು ಹೊರತುಪಡಿಸಿ ಬೇರೆ ಸ್ಥಳಗಳಲ್ಲಿ ಮಾರಿದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಅ.23ರಿಂದ 26ರವರೆಗೆ ಬೆಳಗ್ಗೆ 11ರಿಂದ ಸಂಜೆ 5 ಗಂಟೆಯವರೆಗೆ ಮೈಸೂರು ರಸ್ತೆಯಲ್ಲಿರುವ ಸಿಎಆರ್ ಕೇಂದ್ರ ವಿಭಾಗದ ಡಿಸಿಪಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು.ಒಂದು ಮೈದಾನಕ್ಕೆ ಒಂದು ಅರ್ಜಿ ಮಾತ್ರ ಸಲ್ಲಿಸಲು ಅವಕಾಶವಿರುತ್ತದೆ. ನಿಗದಿತ ಗಡುವು ಅ.26 ಮುಗಿದ ನಂತರ ಯಾವುದೇ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ತಿಳಿಸಿದೆ.

ಅರ್ಜಿ ಸಲ್ಲಿಸಲು ಏನು ಮಾಡಬೇಕು?

ಅರ್ಜಿ ಸಲ್ಲಿಸಲು ಏನು ಮಾಡಬೇಕು?

ಅಗ್ನಿಶಾಮಕ ದಳದ ಡಿಜಿಪಿ ಹೆಸರಿನಲ್ಲಿ 5 ಸಾವಿರ ಹಾಗೂ ಅರ್ಜಿ ಮತ್ತು ನಿರ್ವಹಣಾ ಶುಲ್ಕದ 1 ಸಾವಿರ ಡಿಡಿಯನ್ನು ಪೊಲೀಸ್ ಆಯುಕ್ತರ ಹೆಸರಿನಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಪ್ರತ್ಯೇಕ ಅರ್ಜಿ ಸಲ್ಲಿಸಬೇಕು.

ಆಧಾರ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿ ಕಡ್ಡಾಯ

ಆಧಾರ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿ ಕಡ್ಡಾಯ

ಮಾರಾಟ ಮಳಿಗೆಗಳನ್ನು ತೆರೆಯಲು ಆಧಾರ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿ ಕಡ್ಡಾಯವಾಗಿರುತ್ತದೆ. ಪ್ರತಿಯೊಬ್ಬ ಅರ್ಜಿದಾರ ಕಡ್ಡಾಯವಾಗಿ ಜಿಎಸ್‌ಟಿ ಸಂಖ್ಯೆ ಹೊಂದಿರಬೇಕು. ಅದನ್ನು ತಾತ್ಕಾಲಿಕ ಪಟಾಕಿ ಅಂಗಡಿ ತೆರಯುವ ಉದ್ದೇಶಕ್ಕಾಗಿ ಪಡೆಯಬೇಕು.

ಮೈಸೂರಿನಲ್ಲಿ ಅಕ್ರಮ ಪಟಾಕಿ ತಯಾರಿಕೆ ವೇಳೆ ಸ್ಫೋಟ: 7 ಜನರಿಗೆ ಗಾಯ ಮೈಸೂರಿನಲ್ಲಿ ಅಕ್ರಮ ಪಟಾಕಿ ತಯಾರಿಕೆ ವೇಳೆ ಸ್ಫೋಟ: 7 ಜನರಿಗೆ ಗಾಯ

ಪಟಾಕಿ ಬೇರೆಡೆ ಮಾರಿದರೆ ಕ್ರಿಮಿನಲ್ ಕೇಸ್

ಪಟಾಕಿ ಬೇರೆಡೆ ಮಾರಿದರೆ ಕ್ರಿಮಿನಲ್ ಕೇಸ್

ಬಿಬಿಎಂಪಿ ನಿಗದಿಪಡಿಸಿರುವ ಮೈದಾನ ಮತ್ತು ಸ್ಥಳಗಳನ್ನು ಹೊರತುಪಡಿಸಿ ಬೇರೆಡೆ ಪಟಾಕಿ ಮಾರಾಟ ಮಾಡಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ. ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಲಾಟರಿ ಮೂಲಕ ಮಳಿಗೆ ಹಂಚಿಕೆ

ಲಾಟರಿ ಮೂಲಕ ಮಳಿಗೆ ಹಂಚಿಕೆ

ಪಟಾಕಿಗಳ ಮಾರಾಟಕ್ಕೆ ತಾತ್ಕಾಲಿಕ ಪರವಾನಗಿಗೆ ಅರ್ಜಿ ಸಲ್ಲಿಕೆ ಬಳಿಕ ಅಕ್ಟೋಬರ್ 29ರಂದು ಬೆಳಗ್ಗೆ 11 ಗಂಟೆಗೆ ಸಿಎಆರ್ ಕೇಂದ್ರ ವಿಭಾಗದ ಡಿಸಿಪಿ ಕಚೇರಿಯಲ್ಲಿ ಲಾಟರಿ ಮೂಲಕ ಮಾರಾಟಗಾರರ ಆಯ್ಕೆ ಮಾಡಲಾಗುತ್ತದೆ. ಇನ್ನೂ ಅರ್ಜಿ ನಮೂನೆ ಮತ್ತು ಮೈದಾನಗಳ ವಿವರಗಳನ್ನು ಡಿಸಿಪಿ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗುತ್ತದೆ. ಅರ್ಜಿದಾರರ ಹೆಸರು, ವಿಳಾಸ, ಕೇಳಿರುವ ಮೈದಾನದ ವಿವರ, ಯಾವ ಗುಂಪು, ಸಂಘ-ಸಂರ್ಸಥೆ, ಅಂಗವಿಕಲರು, ಪರಿಶಿಷ್ಟ ಜಾತಿ ಹಾಗೂ ವರ್ಗಗಳ ವಿವರಗಳನ್ನೂ ಸಲ್ಲಿಸಬೇಕು.

ಚೀನಾ ಪಟಾಕಿಗೆ ಬಹಿಷ್ಕಾರ ಹಾಕಿ ದೀಪಾವಳಿ ಆಚರಿಸಿದ ಮಂಗಳೂರಿಗರು ಚೀನಾ ಪಟಾಕಿಗೆ ಬಹಿಷ್ಕಾರ ಹಾಕಿ ದೀಪಾವಳಿ ಆಚರಿಸಿದ ಮಂಗಳೂರಿಗರು

English summary
BBMP had invited application for crackers sale during Deepavali festival at selected BBMP grounds with proper safety measures and precautions.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X