ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪೆಥಾಯ್ ಚಂಡಮಾರುತ ಎಫೆಕ್ಟ್: ರಾಜ್ಯದಲ್ಲಿ ಕೊರೆಯುವ ಚಳಿ ಶುರು

|
Google Oneindia Kannada News

ಬೆಂಗಳೂರು, ಡಿಸೆಂಬರ್ 18: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಉಂಟಾಗಿರುವ ಪೆಥಾಯ್ ಚಂಡ ಮಾರುತದ ಪರಿಣಾಮ ಕರ್ನಾಟಕದಲ್ಲಿ ಕೊರೆಯುವ ಚಳಿ ಆರಂಭವಾಗಿದೆ.

ಆಂಧ್ರಪ್ರದೇಶದಲ್ಲಿ ಪೆಥಾಯ್ ಚಂಡಮಾರುತ ಅಬ್ಬರದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯಾದ್ಯಂತ ಕೊರೆಯುವ ಚಳಿ ಹೆಚ್ಚಾಗಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ಆಂಧ್ರಕ್ಕೆ ಚಂಡಮಾರುತ ಹೊಡೆತ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ಆಂಧ್ರಕ್ಕೆ ಚಂಡಮಾರುತ ಹೊಡೆತ

ಕಳೆದ ಮೂರು ದಿನಗಳಿಂದ ಚಳಿ ಹೆಚ್ಚಾಗಿದೆ. ಸಂಜೆ 6ರಿಂದ ಮರುದಿನ ಬೆಳಗ್ಗೆ ಸುಮಾರು 7 ಗಂಟೆಯವರೆಗೂ ವಿಪರೀತ ಚಳಿಯಿದೆ. ವೃದ್ಧರು, ಮಕ್ಕಳು, ಅನಾರೋಗ್ಯ ಪೀಡಿತರು ಚಳಿಗೆ ನಡುಗುವಂತಾಗಿದೆ.

Pethai cyclone: Minimum temperature increases in Bengaluru

ಬೆಂಗಳೂರು ಕೇಂದ್ರ ಭಾಗದಲ್ಲಿ ಗರಿಷ್ಠ 25.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ 13.7ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದೆ. ಕೆಐಎಎಲ್‌ನಲ್ಲಿ ಗರಿಷ್ಠ 25.6 ಡಿಗ್ರಿ ಸೆಲ್ಸಿಯಸ್, ಕನಿಷ್ಠ 12.4ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 26.3 ಡಿಗ್ರಿ ಸೆಲ್ಸಿಯಸ್, ಕನಿಷ್ಠ 14.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ರೆಡ್‌ ಅಲರ್ಟ್: ಆಂಧ್ರಕ್ಕೆ ಅಪ್ಪಳಿಸಲಿದೆ ಸೈಕ್ಲೋನ್ 'ಪೆಥಾಯ್' ರೆಡ್‌ ಅಲರ್ಟ್: ಆಂಧ್ರಕ್ಕೆ ಅಪ್ಪಳಿಸಲಿದೆ ಸೈಕ್ಲೋನ್ 'ಪೆಥಾಯ್'

ದಕ್ಷಿಣ ಕನ್ನಡದಲ್ಲಿ 19 ಡಿಗ್ರಿ ಸೆಲ್ಸಿಯಸ್, ಉತ್ತರಕನ್ನಡದಲ್ಲಿ 17.7 ಡಿಗ್ರಿ ಸೆಲ್ಸಿಯಸ್, ಬೀದರ್‌ನಲ್ಲಿ 14.5 ಡಿಗ್ರಿ ಸೆಲ್ಸಿಯಸ್, ಉಡುಪಿಯಲ್ಲಿ 20.1 ಡಿಗ್ರಿ ಸೆಲ್ಸಿಯಸ್, ಕಲಬುರ್ಗಿಯಲ್ಲಿ 14.7 ಡಿಗ್ರಿ ಸೆಲ್ಸಿಯಸ್, ಚಿಕ್ಕಮಗಳೂರಿನಲ್ಲಿ 13.3 ಡಿಗ್ರಿ ಸೆಲ್ಸಿಯಸ್ ಧಾರವಾಡದಲ್ಲಿ ಅತಿ ಕನಿಷ್ಠ 12 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಅಬ್ಬರದಿಂದ ರಾಜ್ಯದಲ್ಲಿ ಚಳಿಯ ಪ್ರಮಾಣ ಹೆಚ್ಚಾಗಿದೆ.

English summary
Pethai cyclone effect, As December come to end, minimum temperature is increasing 14 degree celsius to 16.5 degree celsius, department of meteorological report said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X