ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜೆಡಿಎಸ್ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಸಿಂಧ್ಯಾ ಆಯ್ಕೆ

By Mahesh
|
Google Oneindia Kannada News

ಬೆಂಗಳೂರು, ನವೆಂಬರ್ 11: ಸಕ್ರಿಯ ರಾಜಕಾರಣಕ್ಕೆ ಮರಳಿ, ಇತ್ತೀಚೆಗೆ ಜೆಡಿಎಸ್ ಸೇರ್ಪಡೆಗೊಂಡಿದ್ದ ಹಿರಿಯ ರಾಜಕಾರಣಿ, ಮಾಜಿ ಸಚಿವ ಪಿ.ಜಿ. ಆರ್ ಸಿಂಧ್ಯಾ ಅವರನ್ನು ಜೆಡಿಎಸ್ ನ ರಾಷ್ಟೀಯ ಕಾರ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಈ ಹಿಂದೆ ಜೆಡಿಎಸ್ ನಲ್ಲಿದ್ದಾಗ ಕರ್ನಾಟಕ ಘಟಕದ ಕಾರ್ಯಾಧ್ಯಕ್ಷರಾಗಿ ಸಿಂಧ್ಯಾ ಅವರು ಕಾರ್ಯ ನಿರ್ವಹಿಸಿದ್ದರು.

ವರುಣಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಸಿಂಧ್ಯ ವರುಣಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಸಿಂಧ್ಯ

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಇಂದು ಸಿಂಧ್ಯಾ ಅವರಿಗೆ ಮಹತ್ವದ ಜವಾಬ್ದಾರಿ ನೀಡಿದ್ದಾರೆ. ಈವರೆಗೂ ಜೆಡಿಎಸ್‌‌ನಲ್ಲಿ ಕೇವಲ ರಾಜ್ಯ ಘಟಕಕ್ಕೆ ಸೀಮಿತವಾಗಿದ್ದ ಕಾರ್ಯಾಧ್ಯಕ್ಷ ಸ್ಥಾನವನ್ನು ರಾಷ್ಟ್ರೀಯ ಮಟ್ಟಕ್ಕೂ ವಿಸ್ತರಿಸಿದ್ದು, ಪಕ್ಷದ ನೂತನ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ಪಿಜಿಆರ್ ಸಿಂಧ್ಯಾ ಅವರನ್ನು ಆಯ್ಕೆ ಮಾಡಲಾಗಿದೆ.

PGR Sindhia appointed as JDs working president

ವಿಧಾನಸಭಾ ಚುನಾವಣೆ ಬಳಿಕ ರಾಷ್ಟ್ರ ರಾಜಕಾರಣದಲ್ಲಿ ತೊಡಗುತ್ತೇನೆ ಎಂದು ಹೇಳಿಕೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ಜಾತ್ಯಾತೀತ ಜನತಾದಳಕ್ಕೆ ಮರಳಿರುವ ಮಾಜಿ ಸಚಿವ ಹಿರಿಯ ರಾಜಕಾರಣಿ ಪಿ.ಜಿ.ಆರ್. ಸಿಂಧ್ಯ ಅವರಿಗೆ ಪ್ರತಿಷ್ಠಿತ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ಆಹ್ವಾನ ಸಿಕ್ಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿನಿಧಿಸುತ್ತಿರುವ ಮೈಸೂರಿನ ವರುಣಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಪಿ.ಜಿ.ಆರ್. ಸಿಂಧ್ಯ ಕಣಕ್ಕಿಳಿಯುವ ಸಾಧ್ಯತೆ ಇದೆ.

English summary
Former minister P G R Sindhia, who recently rejoined the Janata Dal (Secular) has been appointed as the working president of the party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X